ಬೆಂಗಳೂರು, [ಡಿ.24]: ಕರ್ನಾಟಕ ಕಾಂಗ್ರೆಸ್ ನಲ್ಲಿ ಸಂಕ್ರಾಂತಿಗೆ ಹೊಸ ಕಾಂತಿಯಾವುದು ಬಹುತೇಕ ಖಚಿತವಾಗಿದೆ. ಲೋಕಸಭಾ ಹಾಗೂ ಬೈ ಎಲೆಕ್ಷನ್ ಸೋಲಿನ ಹೊಣೆಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದೀಗ ಆ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂಗೀಕರಿಸಿದ್ದು, ಹೊಸ ನಾಯಕನಿಗೆ ಕೆಪಿಸಿಸಿ ಪಟ್ಟಕಟ್ಟಲು ತಯಾರಿ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.  ಜ.20 ರಿಂದ ಅಧಿವೇಶನ ಆರಂಭವಾಗಲಿದ್ದು, ಅಷ್ಟರೊಳಗೆ ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕವಾಗಲಿದೆ.

ನಾವಿನ್ನೂ ಸತ್ತಿಲ್ಲ : ಡಿ.ಕೆ.ಶಿವಕುಮಾರ್ ಎಚ್ಚರಿಕೆ !

ಎಐಸಿಸಿ ವೀಕ್ಷಕರ ಅಭಿಪ್ರಾಯಂದಂತೆ ಕೆಪಿಸಿಸಿಗೆ ಡಿ.ಕೆ. ಶಿವಕುಮಾರ್ ಅವರನ್ನ ಫೈನಲ್ ಮಾಡಲಾಗಿದ್ದು, ಜನವರಿ 2ನೇ ವಾರ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಪಟ್ಟಕ್ಕೇರಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.  ಇದಕ್ಕೆ ಡಿಕೆಶಿ ಕೂಡ ಗ್ರ್ಯಾಂಡ್ ಎಂಟ್ರಿಕೊಡಲು ಭರ್ಜರಿ ತಯಾರಿ ನಡೆಸಿದ್ದಾರೆ.

ಕಳೆದ ವಾರ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲೇ ಡಿ.ಕೆ.ಶಿವಕುಮಾರ್ ಅವರಿಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಜನವರಿಯಲ್ಲಿ 13ರ ನಂತರ ಹೈಕಮಾಂಡ್ ಅನುಮತಿ ನೀಡಲಿದೆ. ಈ ಬಗ್ಗೆ ಡಿಕೆಶಿ ತಮ್ಮ ಆಪ್ತರೊಂದಿಗೆ ಚರ್ಚೆ ಮಾಡಿದ್ದಾರೆ.

ಪ್ರಸ್ತುತ ಕಾಂಗ್ರೆಸ್ ಪರಿಸ್ಥಿತಿ ನೋಡಿದರೆ ಪ್ರಭಾವಿ ಸಮುದಾಯದ ಮುಖಂಡರು ನಾಯಕತ್ವ ವಹಿಸಿಕೊಳ್ಳಬೇಕಾದ ಅಗತ್ಯತೆ ಮತ್ತು ಅನಿವಾರ್ಯತೆ ಇದೆ.  ಡಿಕೆಶೀ ಪ್ರಬಲ ನಾಯಕರಾಗಿ ಹೊರಹೊಮ್ಮಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಕೆಪಿಸಿಸಿ ಹುದ್ದೆ ವಹಿಸುವುದು ಸೂಕ್ತ ಎನ್ನುವ ನಿರ್ಧಾರಕ್ಕೆ ಹೈಕಮಾಂಡ್ ಬಂದಿದೆ.

ಸಿದ್ದರಾಮಯ್ಯ ಮುಂದುವರಿಕೆ..?
ಹೌದು...ಬೈ ಎಲೆಕ್ಷನ್ ಸೋಲಿನ ಹೊಣೆಹೊತ್ತು ವಿಪಕ್ಷ ಹಾಗೂ ಶಾಸಕಾಂಗ ನಾಯಕ ಹುದ್ದೆಗೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರು. ಆದ್ರೆ, ಹೈಕಮಾಂಡ್ ಇದನ್ನು ಅಂಗೀಕರಿಸದೇ ನೀವೇ ಮುಂದುವರಿಯಬೇಕೆಂದು ಮನವೋಲಿಸುತ್ತಿದೆ.

ಸದ್ಯದ ಪರಿಸ್ಥಿತಿಯಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗುತ್ತಿದೆ. ಆದರೆ ಕಾಂಗ್ರೆಸ್ ಪಕ್ಷವನ್ನು ಪುನರ್ ರಚನೆ ಮಾಡಲು ಹೈಕಮಾಂಡ್ ಸಿದ್ಧತೆ ನಡೆಸಿದ್ದು, ಡಿ.ಕೆ.ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಬಹುತೇಕ ಖಚಿತವಾಗಿದೆ.