ಪಕ್ಷದ ಕೆಲಸ ಮಾಡದವರಿಗೆ ಟಿಕೆಟಿಲ್ಲ: ಮತ್ತೊಮ್ಮೆ ಶಾಸಕರಿಗೆ ಎಚ್ಚರಿಕೆ ನೀಡಿದ ಡಿಕೆಶಿ

‘ಕೆಲಸ ಮಾಡದವರಿಗೆ ಯಾಕೆ ಟಿಕೆಟ್‌ ನೀಡಬೇಕು. ನಮಗೆ ಸಂಖ್ಯೆ (ಗೆಲ್ಲುವ ಸ್ಥಾನ) ಬೇಕು, ನಮ್ಮ ಸರ್ಕಾರ ಅಧಿಕಾರಕ್ಕೆ ಬರಬೇಕು. ಹೀಗಾಗಿ ಶಾಸಕರು ಕ್ಷೇತ್ರದಲ್ಲಿ ಮದುವೆಗೆ ಹಾಜರಾತಿ ಹಾಕಿ, ಟೇಪ್‌ ಕಟ್‌ ಮಾಡಿಕೊಂಡಿದ್ದರೆ ಆಗುವುದಿಲ್ಲ. ಬೂತ್‌ ಮಟ್ಟದಲ್ಲಿ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತೊಮ್ಮೆ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. 

Congress Leader DK Shivakumar Slams on his own party MLAs gvd

ಬೆಂಗಳೂರು (ಸೆ.18): ‘ಕೆಲಸ ಮಾಡದವರಿಗೆ ಯಾಕೆ ಟಿಕೆಟ್‌ ನೀಡಬೇಕು. ನಮಗೆ ಸಂಖ್ಯೆ (ಗೆಲ್ಲುವ ಸ್ಥಾನ) ಬೇಕು, ನಮ್ಮ ಸರ್ಕಾರ ಅಧಿಕಾರಕ್ಕೆ ಬರಬೇಕು. ಹೀಗಾಗಿ ಶಾಸಕರು ಕ್ಷೇತ್ರದಲ್ಲಿ ಮದುವೆಗೆ ಹಾಜರಾತಿ ಹಾಕಿ, ಟೇಪ್‌ ಕಟ್‌ ಮಾಡಿಕೊಂಡಿದ್ದರೆ ಆಗುವುದಿಲ್ಲ. ಬೂತ್‌ ಮಟ್ಟದಲ್ಲಿ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತೊಮ್ಮೆ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಐಕ್ಯತಾ ಯಾತ್ರೆಗೆ ಪ್ರತಿಯೊಬ್ಬರೂ ಕೆಲಸ ಮಾಡಬೇಕು. 

ಬಳ್ಳಾರಿಯಲ್ಲಿ ಬೃಹತ್‌ ಸಮಾವೇಶ ಹಮ್ಮಿಕೊಂಡಿದ್ದೇವೆ. ಅದಕ್ಕೂ ಕೆಲಸ ಮಾಡಬೇಕು. ಇದು ಅಸಹಕಾರದ ಪ್ರಶ್ನೆಯಲ್ಲ. ಪ್ರತಿಯೊಬ್ಬರೂ ಕೆಲಸ ಮಾಡಬೇಕು ಎಂದು ಹೇಳಿರುವ ಮಾತಷ್ಟೇ ಎಂದು ಹೇಳಿದರು. ಪದಾಧಿಕಾರಿಗಳ ಸಭೆಯಲ್ಲಿ ನಿಮ್ಮ ಮಾತಿನಲ್ಲಿ ಅಸಹಕಾರದ ನೋವಿತ್ತು ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನನಗೆ ಅಸಹಕಾರದ ನೋವಿಲ್ಲ. ಸರ್ಕಾರ ಅಧಿವೇಶನ ಕರೆದಾಗ ಕೇವಲ ವಿರೋಧ ಪಕ್ಷದ ನಾಯಕರೇ ಎಲ್ಲವನ್ನೂ ಮಾಡಲು ಆಗುವುದಿಲ್ಲ. ಅವರಿಗೆ ನಾನು ಸೇರಿದಂತೆ 69 ಶಾಸಕರ ಸಹಕಾರ ಇರಬೇಕು. 

ಐಕ್ಯತಾ ಯಾತ್ರೆ ಮೂಲಕ ದೇಶದಲ್ಲಿ ಬದಲಾವಣೆ ತರಬೇಕು: ಡಿಕೆಶಿ

ಇನ್ನು ಸರ್ಕಾರದ ಪರ ನೂರಕ್ಕೂ ಹೆಚ್ಚು ಶಾಸಕರಿದ್ದರೂ ಸಚಿವರುಗಳು ಅಧಿವೇಶನಕ್ಕೆ ಬರುತ್ತಿಲ್ಲ. ಅವರು ಸರ್ಕಾರದ ಸಾಧನೆ ಕಾರ್ಯಕ್ರಮ ಮಾಡಿದಾಗ ಎಷ್ಟು ಜನ ಸಚಿವರು ಹೋಗಿದ್ದರು? ಏನಾಯ್ತು? ಎಷ್ಟು ಜನ ಇದ್ದರು ಎಂಬುದು ಗೊತ್ತಿದೆ. ಯಡಿಯೂರಪ್ಪ ಅವರ ಭಾಷಣ ಮುಗಿದ ನಂತರ ಎಲ್ಲರೂ ಖಾಲಿ ಆದರು. ಇದರ ಬಗ್ಗೆ ಯಾಕೆ ಮಾತನಾಡುವುದಿಲ್ಲ? ಅದನ್ನು ಅಸಹಕಾರ ಚಳವಳಿ ಎನ್ನುತ್ತೀರಾ? ಎಂದು ಪ್ರಶ್ನಿಸಿದರು.

ಕೆಲಸ ಮಾಡದವರಿಗೆ ಟಿಕೆಟ್‌ ಯಾಕೆ?: ನಾನು ನಮ್ಮ ಪದಾಧಿಕಾರಿಗಳಿಗೆ ಅವರ ಜವಾಬ್ದಾರಿ ತಿಳಿಸಿದ್ದೇನೆ ಅಷ್ಟೇ. ನಮ್ಮ ಶಾಸಕರುಗಳಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಅವರು ಟಾರ್ಗೆಟ್‌ ನೀಡಿದ್ದಾರೆ. ಕೆಲಸ ಮಾಡದವರಿಗೆ ಟಿಕೆಟ್‌ ಯಾಕೆ ನೀಡಬೇಕು ಎಂದು ಹೇಳಿದ್ದಾರೆ. ಶಾಸಕರು ಎಂದರೆ ಕೇವಲ ಮದುವೆ ಸಮಾರಂಭ, ಟೇಪ್‌ ಕಟ್‌ ಕಾರ್ಯಕ್ರಮಕ್ಕೆ ಹೋಗುವುದಲ್ಲ. ಮನೆ ಮನೆಗೆ ಹೋಗಿ ಬೂತ್‌ ಯಾತ್ರೆ ಮಾಡಬೇಕು. ಅವರು ಮೊದಲು ತಮ್ಮ ಹೊಲದಲ್ಲಿ ಚೆನ್ನಾಗಿ ಬೇಸಾಯ ಮಾಡಬೇಕು. ನಂತರ ಬಿತ್ತನೆ ಮಾಡಿ ಬಳಿಕವಷ್ಟೇ ಪ್ರತಿಫಲ ಆಪೇಕ್ಷಿಸಬೇಕು ಎಂದು ಹೇಳಿದ್ದೇನೆ ಎಂದು ಸೂಚ್ಯವಾಗಿ ತಿಳಿಸಿದರು.

ನನ್ನನ್ನೂ ಪರಿಶೀಲಿಸುತ್ತಿದ್ದಾರೆ: ‘ಎಐಸಿಸಿ ಒಂದು ವಿಶೇಷ ತಂಡ ನೀಡಿದೆ. ನಾನು, ಹರಿಪ್ರಸಾದ್‌, ವೀರಪ್ಪ ಮೊಯ್ಲಿ ಸೇರಿದಂತೆ 16 ನಾಯಕರನ್ನು ಕರೆದು ಈ ತಂಡವನ್ನು ನೇಮಿಸಿರುವುದಾಗಿ ಸೂಚಿಸಿದ್ದಾರೆ. ಅವರು ನಿಮ್ಮ ಜತೆ ಗುರುತಿಸಿಕೊಳ್ಳುವುದಿಲ್ಲ. ನೀವು ಹಾಗೂ ನಾನು ಏನೆಲ್ಲಾ ಮಾಡುತ್ತಿದ್ದೇವೆ ಎಂದು ಆ ತಂಡ ಪರಿಶೀಲನೆ ಮಾಡುತ್ತಿದೆ. ನಾನು ಕೇವಲ ಸಭೆ ಸಮಾರಂಭಗಳಿಗೆ ಹೋಗುತ್ತಿದ್ದೇನೋ ಅಥವಾ ಪಕ್ಷ ಸಂಘಟನೆಗೆ ಹಳ್ಳಿ ಹಳ್ಳಿಗೆ ಹೋಗುತ್ತಿದ್ದೇನೋ ಎಂದು ಗಮನಿಸುತ್ತಿದ್ದಾರೆ. ಅದೇ ರೀತಿ ಪ್ರತಿ ಕ್ಷೇತ್ರದ ಶಾಸಕರು, ಪರಾಜಿತ ಅಭ್ಯರ್ಥಿಗಳು, ಟಿಕೆಟ್‌ ಆಕಾಂಕ್ಷಿಗಳ ಕೆಲಸವನ್ನು ನೋಡುತ್ತಿದ್ದಾರೆ’ ಎಂದರು.

ಇ.ಡಿ ವಿಚಾರಣೆಗೆ ಹೋಗುವ ಬಗ್ಗೆ ವರಿಷ್ಠರ ಜತೆ ಚರ್ಚೆ: ಡಿಕೆಶಿ

‘ಯಾರು ಪಕ್ಷದ ಪರವಾಗಿ ಕೆಲಸ ಮಾಡಲು ಸಾಧ್ಯವಿಲ್ಲವೋ ಅವರಿಗೆ ವಿಶ್ರಾಂತಿ ನೀಡಿ ಕೆಲಸ ಮಾಡುವವರಿಗೆ ಪಕ್ಷದಲ್ಲಿ ಅವಕಾಶ ನೀಡಲಾಗುವುದು ಎಂದು ರಾಷ್ಟ್ರೀಯ ನಾಯಕರು ಈಗಾಗಲೇ ತಿಳಿಸಿದ್ದು, ಈ ಸಂದರ್ಭದಲ್ಲಿ ನಾನದನ್ನು ನಿಮಗೆ ನೆನಪಿಸುತ್ತಿದ್ದೇನೆ. ನಮ್ಮ ಕರ್ತವ್ಯಗಳಿಗೆ ನಾವೆಲ್ಲರೂ ಹೊಣೆಗಾರರಾಗಬೇಕು’ ಎಂದು ಸ್ಪಷ್ಟಪಡಿಸಿದರು.

Latest Videos
Follow Us:
Download App:
  • android
  • ios