ಬೆಂಗಳೂರು (ಸೆ.01):  ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪಕ್ಷದ ನಾಯಕರೊಂದಿಗೆ ಚರ್ಚಿಸಿ ನಿರ್ಧರಿಸುತ್ತೇವೆ. ಜೆಡಿಎಸ್‌ ಪಕ್ಷದವರು ಅವರ ರಾಜಕಾರಣ ಮಾಡುತ್ತಾರೆ. ನಾವು ನಮ್ಮ ರಾಜಕಾರಣ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

- ಈ ಮೂಲಕ ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಆದರೆ ಇನ್ನೊಂದು ಕಡೆ  ಆರ್ ಆರ್ ನಗರಕ್ಕೆ ಐಎಎಸ್ ಅಧಿಕಾರಿಯಾಗಿದ್ದ ಡಿಕೆ ರವಿ ಅವರ ಪತ್ನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಆರ್‌ಆರ್‌ ನಗರದಲ್ಲಿ ಮುನಿರತ್ನ ವಿರುದ್ಧ ಡಿ. ಕೆ. ರವಿ ಪತ್ನಿ ಸ್ಪರ್ಧೆ? ...

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಚುನಾವಣೆಗಳು ಕೂಡ ಎಲ್ಲ ಪಕ್ಷಗಳಿಗೆ ಪ್ರತಿಷ್ಠೆಯಾಗಿರುತ್ತದೆ. ಯಾವುದೇ ಒಂದು ಕ್ಷೇತ್ರದ ಚುನಾವಣೆ ಮಾತ್ರ ಪ್ರತಿಷ್ಠೆಯಾಗುವುದಿಲ್ಲ. ನಾನು ಅಧ್ಯಕ್ಷನಾದರೂ ಪಕ್ಷದ ಕಾರ್ಯಕರ್ತ. ಕೇವಲ ಶಿರಾ ಕ್ಷೇತ್ರವಾಗಲಿ, ರಾಜರಾಜೇಶ್ವರಿನಗರವಾಗಲಿ ಮಾತ್ರ ಪ್ರತಿಷ್ಠೆ ಆಗುವುದಿಲ್ಲ ಎಂದು ಹೇಳಿದರು.

'ಸಂಪುಟದಲ್ಲಿ ಹೊಸಬರಿಗೂ ಅವಕಾಶ ಕೊಡಿ : ಸಚಿವ ಸ್ಥಾನಕ್ಕೆ ಡಿಮ್ಯಾಂಡ್

ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ ಕೋರಿ ಅರ್ಜಿಗಳು ಬಂದಿವೆ. ನಾವು ನಾಯಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಎಲ್ಲ ಚುನಾವಣೆಗಳಂತೆ ಈ ಉಪ ಚುನಾವಣೆಯನ್ನೂ ಪ್ರತಿಷ್ಠೆಯಾಗಿಯೇ ತೆಗೆದುಕೊಳ್ಳುತ್ತೇವೆ ಎಂದರು.

ಜೆಡಿಎಸ್‌ ಜೊತೆ ಮೈತ್ರಿಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಜೆಡಿಎಸ್‌ ಒಂದು ಪಕ್ಷ. ಅವರು ಅವರ ಪಕ್ಷದ ರಾಜಕಾರಣವನ್ನು ಮಾಡುತ್ತಾರೆ. ನಾವು ನಮ್ಮ ರಾಜಕಾರಣ ಮಾಡುತ್ತೇವೆ. ಚುನಾವಣೆಯಲ್ಲೂ ಸಹ ಅವರ ಚುನಾವಣೆ ಅವರು, ನಮ್ಮ ಚುನಾವಣೆ ನಾವು ಎದುರಿಸುತ್ತೇವೆ ಎಂದು ಹೇಳಿದರು.