ರಾಜ್ಯದಲ್ಲಿ ಅವನತಿಯ ಹಾದಿಯಲ್ಲಿ ಬಿಜೆಪಿ ಸಾಗಿದೆ: ಐವನ್ ಡಿಸೋಜ ಟೀಕೆ
ರಾಜ್ಯದಲ್ಲಿ ಬಿಜೆಪಿಯು ತನ್ನದೇ ಆಂತರಿಕ ಸಮಸ್ಯೆಗಳಿಂದ ಅವನತಿಯ ಹಾದಿಯಲ್ಲಿದೆ. ಈ ಕಾರಣದಿಂದಲೇ ವಿಧಾನಸಭೆಯಲ್ಲಿ ವಿಪಕ್ಷ ನಾಯಕನ್ನು ಆರಿಸಲಾಗದ ಸ್ಥಿತಿಗೆ ತಲುಪಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಟೀಕಿಸಿದ್ದಾರೆ.
ಮಂಗಳೂರು (ಆ.20): ರಾಜ್ಯದಲ್ಲಿ ಬಿಜೆಪಿಯು ತನ್ನದೇ ಆಂತರಿಕ ಸಮಸ್ಯೆಗಳಿಂದ ಅವನತಿಯ ಹಾದಿಯಲ್ಲಿದೆ. ಈ ಕಾರಣದಿಂದಲೇ ವಿಧಾನಸಭೆಯಲ್ಲಿ ವಿಪಕ್ಷ ನಾಯಕನ್ನು ಆರಿಸಲಾಗದ ಸ್ಥಿತಿಗೆ ತಲುಪಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರಾದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಅವರು ಬಿಜೆಪಿ ವಿರುದ್ಧವೇ ಮಾತನಾಡತೊಡಗಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರೂ ಟೀಕಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಪೂರ್ಣಗೊಂಡು ಈಗ ಅವಧಿ ಮೀರಿದ ಔಷಧಿಯ ರೀತಿ ನಳಿನ್ ಕುಮಾರ್ ಬಿಜೆಪಿಯಲ್ಲಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿಗೆ ಶರಣಾಗಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅವನತಿ ಹಾದಿ ಹಿಡಿಯುತ್ತಿದೆ ಎಂದು ವ್ಯಂಗ್ಯವಾಡಿದರು. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 9.25 ಲಕ್ಷ ರು. ಪರಿಹಾರ ಬಿಡುಗಡೆ ಮಾಡಲಾಗಿದೆ.
ನಾನು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಜಿ.ಟಿ.ದೇವೇಗೌಡ
ಇತ್ತೀಚೆಗೆ ಅಳಪೆ ಗ್ರಾಮದಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟವರುಣ್ ಮತ್ತು ವೀಕ್ಷಿತ್ ಕುಟುಂಬಕ್ಕೆ ತಲಾ 2 ಲಕ್ಷ ರು. ಮಂಜೂರಾಗಿದೆ. ಅನಾರೋಗ್ಯದಿಂದ ಸಂಕಷ್ಟಕ್ಕೀಡಾದ 11 ಕುಟುಂಬಗಳ ಸದಸ್ಯರಿಗೆ ತಾವು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಒಟ್ಟು 9.25 ಲಕ್ಷ ರು. ಮಂಜೂರು ಮಾಡಿದ್ದಾರೆ ಎಂದರು. ಮನಪಾ ಸದಸ್ಯ ಪ್ರವೀಣ್ ಆಳ್ವ, ಮನಪಾ ಮಾಜಿ ಸದಸ್ಯೆ ಸೇಸಮ್ಮ ಭಾಸ್ಕರ ರಾವ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವಿಕಾಸ್ ಶೆಟ್ಟಿ, ಅಬ್ದುಲ್ ಸಲೀಂ ಮುಕ್ಕ, ಚೇತನ್ ಕುಮಾರ್, ಹಬೀಬ್ ಕಣ್ಣೂರು, ಯೋಗೀಶ್ ನಾಯಕ್ ಮತ್ತಿತರರಿದ್ದರು.
ನೈತಿಕ ಪೊಲೀಸ್‌ಗಿರಿ ವಿರುದ್ಧ ಕಠಿಣ ಕಾನೂನು: ದ.ಕ. ಜಿಲ್ಲೆಯಲ್ಲಿ ವಾರಕ್ಕೆ ಮೂರರಂತೆ ನೈತಿಕ ಪೊಲೀಸ್‌ಗಿರಿ ನಡೆಯುತ್ತಿದೆ. ಬಿ.ಸಿ. ರೋಡ್‌ನಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಪತ್ನಿ ಮೇಲೆಯೇ ನೈತಿಕ ಪೊಲೀಸ್‌ಗಿರಿ ನಡೆದಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಧರ್ಮಾಧಾರಿತ ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳಲ್ಲಿ ಕನಿಷ್ಠ ಏಳು ವರ್ಷ ಜೈಲು ಶಿಕ್ಷೆ ಆಗುವಂತೆ ಕಾನೂನು ತರುವ ಅಗತ್ಯವಿದೆ. ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ವಿಧಾನಪರಿಷತ್ ಮಾಜಿ ಸದಸ್ಯ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕಾವೇರಿ ನೀರಿನ ವಿಚಾರದಲ್ಲಿ ರಾಜಕೀಯ ತೀಟೆ ಮಾಡಬೇಡಿ: ಸಚಿವ ಚಲುವರಾಯಸ್ವಾಮಿ
ಪೊಲೀಸ್ ಸಿಬ್ಬಂದಿ ಹಾಗೂ ಅವರ ಮನೆಯವರ ಮೇಲೆ ಬೀದಿಯಲ್ಲಿ ಧರ್ಮದ ಹೆಸರು ಹೇಳಿ ಹಲ್ಲೆ ನಡೆಸುತ್ತಾರೆಂದರೆ ಇನ್ನು ಜನಸಾಮಾನ್ಯರ ಪರಿಸ್ಥಿತಿ ಏನು? ಸಂಘ ಪರಿವಾರದ ಕಾರ್ಯಕರ್ತರು ಸ್ವಂತ ಪತ್ನಿಯನ್ನೇ ಕರೆದೊಯ್ಯಲು ಬಿಡಲ್ಲ. ಇಷ್ಟು ಧೈರ್ಯ ಅವರಿಗೆ ಹೇಗೆ ಬಂತು? ಬಂಟ್ವಾಳ ಶಾಸಕರು ಈ ಬಗ್ಗೆ ಏಕೆ ಧ್ವನಿ ಎತ್ತಿಲ್ಲ? ಇಂಥ ಅನೈತಿಕ ಪೊಲೀಸ್‌ಗಿರಿ ನಿಲ್ಲಿಸಬೇಕಾದರೆ ಕಠಿಣ ಕಾನೂನು ಜಾರಿಯಾಗಬೇಕಿದೆ ಎಂದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್. ಲೋಬೊ, ಮುಖಂಡರಾದ ಅಶ್ರಫ್, ನವೀನ್ ಡಿಸೋಜ, ಟಿ.ಕೆ. ಸುಧೀರ್, ಶುಭೋದಯ ಆಳ್ವ, ಮೊಹಮ್ಮದ್ ಕುಂಜತ್ತಬೈಲ್ ಮತ್ತಿತರರಿದ್ದರು.