* ಸಿಎಂ ಬಿಎಸ್ ವೈ ಸಿಎಂ ಸ್ಥಾನದಿಂದ ಬದಲಾವಣೆ ಆಗುವ ವಿಚಾರ* ಬಿಎಸ್ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ ಕಾಂಗ್ರೆಸ್ ಹಿರಿಯ ನಾಯಕ* ಲಿಂಗಾಯತ ಲೀಡರ್ ಶಿಪ್ ಅನ್ನ ಪಡೆದುಕೊಳ್ಳೊಕೆ ಪೈಪೋಟಿ ನಡೆಯುತ್ತಿದೆಯಾ? 

ಬೆಂಗಳೂರು, (ಜು.19):  ರಾಜ್ಯದಲ್ಲಿ ನಾಯಕತ್ವ ಚರ್ಚೆ ಕುರಿತು ಮತ್ತೊಂದು ಸುತ್ತಿನ ಚರ್ಚೆ ಆರಂಭವಾಗಿದ್ದು, ಈ ನಡುವೆ ಮಾಜಿ ಸಚಿವ, ಕಾಂಗ್ರೆಸ್​ ಶಾಸಕ ಎಂ ಬಿ ಪಾಟೀಲ್​ ಸಿಎಂ ಬಿಎಸ್​ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೇ ಚರ್ಚೆಗೂ ಗ್ರಾಸವಾಗಿದೆ.

ಬಿಎಸ್ ಯಡಿಯೂರಪ್ಪ ಅವರು ಇದೇ ಜುಲೈ 26ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇನ್ನು ವಿಚಾರವಾಗಿ ಕಾಂಗ್ರೆಸ್ ಹಿರಿಯ ನಾಯಕ ಎಂಬಿ ಪಾಟೀಲ್ ಬಿಎಸ್‌ವೈ ಬೆನ್ನಿಗೆ ನಿಂತಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಇತ್ತ ಬಿಎಸ್‌ವೈ ರಾಜೀನಾಮೆ ಸುದ್ದಿ, ಅತ್ತ ದಿಲ್ಲಿಗೆ ತೆರಳಿದ ರಾಜ್ಯಪಾಲರ ನಡೆ ಕುತೂಹಲ

ಯಡಿಯೂರಪ್ಪ ತಮ್ಮ ಲಿಂಗಾಯತ ಸಮುದಾಯದ ಧೀಮಂತ ನಾಯಕ ಎಂದು ಬಣ್ಣಿಸಿದ್ದಾರೆ. ಅಷ್ಟೇ ಅಲ್ಲದೇ ಯಡಿಯೂರಪ್ಪ ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಎಚ್ಚರಿಕೆ ನೀಡಿದ್ದಾರೆ.

Scroll to load tweet…

ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ ಎಂದಿರುವುದು ಎಚ್ಚರಿಕೆ ಕಾರಣವಾಗಿದೆ. ಅಲ್ಲದೇ ಎಂಬಿ ಪಾಟೀಲ್ ಅವರ ಈ ಹೇಳಿಕೆ ಬಿಜೆಪಿ ನಾಯಕರ ತಲೆಗೆ ಹುಳ ಬಿಟ್ಟಂತಾಗಿದೆ. 

ಯಡಿಯೂರಪ್ಪ ಅವರ ಲಿಂಗಾಯತ ಲೀಡರ್ ಶಿಪ್ ಅನ್ನ ಪಡೆದುಕೊಳ್ಳೊಕೆ ಪೈಪೋಟಿ ನಡೆಯುತ್ತಿದೆಯಾ? ಲಿಂಗಾಯತ ಸಮುದಾಯದ ಮನ ಗೆಲ್ಲಲು ಮುಂದಾದ್ರಾ ? ಬಿಎಸ್ ವೈ ಬಳಿಕ ಲಿಂಗಾಯತ ನಾಯಕರು ಯಾರು ಎಂಬ ಬಗ್ಗೆ ಬಿಜೆಪಿ ಬದಲು ಹೆಚ್ಚು ತಲೆಕೆಡಿಸಿಕೊಂಡಿದೆಯಾ ಕಾಂಗ್ರೆಸ್.? ಹೀಗೆ ಹಲವು ಪ್ರಶ್ನೆಗಳು ಉದ್ಭವಿಸಿವೆ.