ವಿಧಾನಸಭೆ ಚುನಾವಣೆ ಹಿನ್ನೆಲೆ ಕೇಂದ್ರ ಸಚಿವ ಜೋತಿರಾದಿತ್ಯ ಸಿಂಧಿಯಾ ಅವರ ತವರು ಕ್ಷೇತ್ರವಾದ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅಬ್ಬರದ ಪ್ರಚಾರ ನಡೆಸಿದ್ದಾರೆ. 

ಗ್ವಾಲಿಯರ್‌: ವಿಧಾನಸಭೆ ಚುನಾವಣೆ ಹಿನ್ನೆಲೆ ಕೇಂದ್ರ ಸಚಿವ ಜೋತಿರಾದಿತ್ಯ ಸಿಂಧಿಯಾ ಅವರ ತವರು ಕ್ಷೇತ್ರವಾದ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಸಿಂಧಿಯಾ ಕಾಂಗ್ರೆಸ್‌ನಿಂದ ಇತ್ತೀಚೆಗೆ ಬಿಜೆಪಿ ಸೇರಿದ್ದರು. ಈ ವೇಳೆ ಬೆಲೆ ಏರಿಕೆ, ಮಣಿಪುರ ಹಿಂಸೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜ್ಯದ ಆಡಳಿತಾರೂಢ ಬಿಜೆಪಿ ವಿರುದ್ಧ ಪ್ರಿಯಾಂಕಾ ತೀವ್ರ ವಾಗ್ದಾಳಿ ನಡೆಸಿದರು. ‘ಜನ್‌ ಆಕ್ರೋಶ್‌’ ರಾರ‍ಯಲಿಯಲ್ಲಿ ಮಾತನಾಡಿದ ಅವರು ‘ಮಣಿಪುರ ಹೊತ್ತಿ ಉರಿಯುತ್ತಿದೆ. ಮಹಿಳೆಯರ ಮೇಲಿನ ದೌರ್ಜನ್ಯದ ವಿಡಿಯೋ ನಂತರ 77 ದಿನಗಳ ಬಳಿಕ ಪ್ರಧಾನಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಅದರಲ್ಲೂ ಅವರು ವಿಷಯವನ್ನು ರಾಜಕೀಯಗೊಳಿಸಿದರು’ ಎಂದರು.

ಅಲ್ಲದೇ ‘ಕೆಲ ದಿನಗಳ ಹಿಂದೆ ವಿರೋಧ ಪಕ್ಷದ ನಾಯಕರ ಸಭೆ ನಡೆಯಿತು. ತಮ್ಮ ರಾಜ್ಯಗಳಲ್ಲಿ ಗೌರವ ಹೊಂದಿರುವ ಹಿರಿಯ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಆದರೆ ಪ್ರಧಾನಿ ಮೋದಿ ಅವರನ್ನು ಕಳ್ಳರು ಎಂದರು’ ಎಂದು ಕಿಡಿಕಾರಿದರು. ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ‘ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಯುವಕರಿಗೆ ಉದ್ಯೋಗ ಒದಗಿಸುವಲ್ಲಿ ವಿಫಲವಾಗಿದೆ’ ಎಂದರು.

ರಾಬರ್ಟ್‌ ವಾದ್ರಾಗೆ ಬಿಗ್‌ ರಿಲೀಫ್‌, ಡಿಎಲ್‌ಎಫ್‌ ಲ್ಯಾಂಡ್‌ ಡೀಲ್‌ನ ದಾಖಲೆಗಳು ಪ್ರವಾಹದ ನೀರಿನಿಂದ ನಾಶ!

ಹರ್ಯಾಣಿ ಸಾಂಗ್‌ಗೆ ಡಾನ್ಸ್‌ ಮಾಡಿದ ಸೋನಿಯಾ ಗಾಂಧಿ, ವಿಡಿಯೋ ವೈರಲ್‌!