Karnataka Politics: ಕರ್ನಾಟಕದಲ್ಲಿ ಇರುವುದು ಮಾಫಿಯಾ ಸರ್ಕಾರ: ರಾಮಲಿಂಗಾ ರೆಡ್ಡಿ
ಕರ್ನಾಟಕದಲ್ಲಿ ಉತ್ತರ ಪ್ರದೇಶ ಮಾದರಿಯ ಮಾಫಿಯಾ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಮನಗರ (ಏ.17): ಕರ್ನಾಟಕದಲ್ಲಿ (Karnataka) ಉತ್ತರ ಪ್ರದೇಶ ಮಾದರಿಯ ಮಾಫಿಯಾ ಸರ್ಕಾರ (Mafia Government) ಆಡಳಿತ ನಡೆಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ (Ramalinga Reddy) ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ಪೊಲೀಸ್ ಭವನದ ಎದುರಿನ ವೃತ್ತದಲ್ಲಿ ಮಾಜಿ ಸಚಿವ ಈಶ್ವರಪ್ಪ (KS Eshwarappa) ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ (Congress) ನಡೆಸಿದ ಪ್ರತಿಭಟನಾ (Protest) ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬೊಮ್ಮಾಯಿ ನೇತೃತ್ವದ ಸರ್ಕಾರ ಇಲ್ಲ. ಹಿಂದೂ ಜಾಗರಣ ವೇದಿಕೆ, ಶ್ರೀರಾಮಸೇನೆ, ಭಜರಂಗದಳದ ಮಾಫಿಯಾ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಟೀಕಿಸಿದರು.
ಭ್ರಷ್ಟಾಚಾರ ಮತ್ತು ಅಭಿವೃದ್ಧಿ ವೈಫಲ್ಯವನ್ನು ಮರೆಮಾಚಲು ಬಿಜೆಪಿ ತನ್ನ ಅಂಗ ಸಂಘಟನೆಗಳ ಮೂಲಕ ಹಿಜಾಬ್ - ಕೇಸರಿ ಶಾಲು, ಹಲಾಲ್ ಕಟ್ - ಝಟ್ಕಾ ಕಟ್‌ನಂತಹ ವಿಚಾರಗಳಿಗೆ ವಿವಾದ ಸ್ವರೂಪ ನೀಡಿ ಕೋಮುಸೌಹಾರ್ದತೆ ಕದಡುವ ಪ್ರಯತ್ನ ಮಾಡಿದರು ಎಂದು ಆರೋಪಿಸಿದರು. ಭ್ರಷ್ಟಾಚಾರದ ಆರೋಪ ಹೊತ್ತಿರುವ ಈಶ್ವರಪ್ಪ ಘನಂದಾರಿ ಕೆಲಸ ಮಾಡಿದವರಂತೆ ಮೆರವಣಿಗೆಯಲ್ಲಿ ಬಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಶ್ವರಪ್ಪ ಮೂರು ಬಿಟ್ಟಿದ್ದರೆ, ಆತನೊಂದಿಗೆ ಬಂದವರು ಮಾನಗೆಟ್ಟವರು ಎಂದು ಟೀಕಿಸಿದರು. ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರರವರು ಈಶ್ವರಪ್ಪ ಮತ್ತೆ ಸಚಿವರಾಗುತ್ತಾರೆಂದು ಹೇಳುತ್ತಿದ್ದಾರೆ.
Mandya Politics: ರಾಜಕೀಯ ಪಕ್ಷ ಸೇರಲು ಆತುರ ಮಾಡಲ್ಲ: ಸಂಸದೆ ಸುಮಲತಾ
ಇದರಿಂದ ಪೊಲೀಸ್ ತನಿಖೆ ಯಾವ ರೀತಿ ನಡೆಯುತ್ತದೆ ಎಂಬ ಆತಂಕ ಕಾಡುತ್ತಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದರು. ವಿಧಾನ ಪರಿಷತ್ ಸದಸ್ಯ ಎಸ್.ರವಿ ಮಾತನಾಡಿ, ರಾಜ್ಯದಲ್ಲಿ ಕೋಮು ಸೌಹಾರ್ತಗೆ ಕೊಳ್ಳಿ ಇಡುತ್ತಿದ್ದರು ಹಾಗೂ ಸಚಿವರೊಬ್ಬರ ಮೇಲೆ ಭ್ರಷ್ಟಾಚಾರದ ಆರೋಪ ಬಂದರೂ ಮುಖ್ಯಮಂತ್ರಿ ಬೊಮ್ಮಾಯಿ ಮೌನ ವಹಿಸುವ ಮೂಲಕ ತಾವು ಮೌನಿ ಬಾಬಾ ಎಂಬುದನ್ನು ನಿರೂಪಿಸಿದ್ದಾರೆ. ಬೊಮ್ಮಾಯಿ ಮತ್ತು ಅವರ ಸಚಿವ ಸಂಪುಟ ಆಲಿ ಮತ್ತು ನಲವತ್ತು ಕಳ್ಳರು ಇದ್ದಂತೆ ಎಂದು ಲೇವಡಿ ಮಾಡಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ .ಎಂ.ರೇವಣ್ಣ ಮಾತನಾಡಿ, ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ವಿಷಯದಲ್ಲಿ ಕಾಂಗ್ರೆಸ್ ಹೋರಾಟದ ಎಚ್ಚರಿಕೆ ನೀಡಿದ ನಂತರ ಪ್ರಕರಣ ದಾಖಲಿಸಿದರು.
ಇದು ಕೊಲೆ ಪ್ರಕರಣ ಆಗಿರುವುದರಿಂದ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದರು. ಮಾಜಿ ಶಾಸಕ ಕೆ.ರಾಜು ಮಾತನಾಡಿ, ಬಿಜೆಪಿ ಸರ್ಕಾರ ಭ್ರಷ್ಟಾಚಾರ ಹಾಗೂ ಅಭಿವೃದ್ಧಿ ವೈಫಲ್ಯ ವಿಚಾರವಾಗಿ ಜನರ ದಿಕ್ಕು ತಪ್ಪಿಸಲು ಮತೀಯ ಗಲಭೆ ಮಾಡಿಸುತ್ತಿದೆ. ಮುಖ್ಯಮಂತ್ರಿ ಬೊಮ್ಮಾಯಿ ಕೂಡ ಭ್ರಷ್ಟರ ಪರವಾಗಿ ನಿಂತಿದ್ದಾರೆ. ಭ್ರಷ್ಟಾಚಾರ ಮೈಗೂಡಿಸಿಕೊಂಡು ಪ್ರೋತ್ಸಾಹ ನೀಡುವ ಇಂತಹ ಮುಖ್ಯಮಂತ್ರಿಯನ್ನು ಕರ್ನಾಟಕ ಎಂದೂ ನೋಡಿರಲಿಲ್ಲ ಎಂದು ಟೀಕೆ ಮಾಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ, ಜಿಪಂ ಮಾಜಿ ಅಧ್ಯಕ್ಷರಾದ ಇಕ್ಬಾಲ್ ಹುಸೇನ್ , ಕೆ.ರಮೇಶ್, ಮುಖಂಡರಾದ ಜಿಯಾವುಲ್ಲಾ, ಕೆ.ಶೇಷಾದ್ರಿ ಮತ್ತಿತರರು ಹಾಜರಿದ್ದರು.
Karnataka Politics: ಕಾಂಗ್ರೆಸಿಗರು ಮೇಕೆದಾಟು ವಿರೋಧಿಸಿದ್ರು: ದೇವೇಗೌಡ
ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್ ಹೋರಾಟ: ಸಚಿವ ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ 24 ಗಂಟೆಗಳ ಅಹೋರಾತ್ರಿ ಧರಣಿ ಶುಕ್ರವಾರ ಮಧ್ಯಾಹ್ನಕ್ಕೆ ಅಂತ್ಯವಾಗಿದ್ದು, ಇದರ ಬೆನ್ನಲ್ಲೇ ಶನಿವಾರದಿಂದಲೇ ಈಶ್ವರಪ್ಪ ಬಂಧನ ಹಾಗೂ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಹತ್ತು ಪ್ರತ್ಯೇಕ ತಂಡಗಳೊಂದಿಗೆ ರಾಜ್ಯಮಟ್ಟದ ಹೋರಾಟಕ್ಕೆ ಕಾಂಗ್ರೆಸ್ ಸಜ್ಜಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ನ ಪ್ರಮುಖ ಹತ್ತು ನಾಯಕರ ನೇತೃತ್ವದಲ್ಲಿ ಏ.16 ರಿಂದ 20ರವರೆಗೆ ಐದು ದಿನ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪ್ರತಿಭಟನೆ ನಡೆಸಲಿದ್ದಾರೆ. ಜತೆಗೆ ಶನಿವಾರ ವಿಜಯಪುರ ಜಿಲ್ಲೆ ಹೊಸಪೇಟೆಯಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಎಚ್.ಕೆ. ಪಾಟೀಲ್ ನೇತೃತ್ವದಲ್ಲಿ ಮುತ್ತಿಗೆ ಹಾಕುವ ಮೂಲಕ ಸರ್ಕಾರದ ಹಾಗೂ ಬಿಜೆಪಿ ಪಕ್ಷ ಎರಡರ ಮೇಲೂ ಹೋರಾಟ ತೀವ್ರಗೊಳಿಸಿ ಒತ್ತಡ ಹಾಕಲು ನಿರ್ಧಾರ ಮಾಡಲಾಗಿದೆ.