ಬೆಂಗಳೂರು :  ವಿಪ್‌ ಉಲ್ಲಂಘಿಸಿ ಶಾಸಕಾಂಗ ಸಭೆಗೆ ಗೈರು ಹಾಜರಾಗಿರುವುದರಿಂದ ಅದರಿಂದ ಮುಂದಾಗಬಹುದಾದ ಕಾನೂನಾತ್ಮಕ ತೊಂದರೆಗಳಿಗೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ಸಿನ ಅತೃಪ್ತ ಶಾಸಕರ ನಾಯಕತ್ವ ವಹಿಸಿಕೊಂಡಿದ್ದ ರಮೇಶ್‌ ಜಾರಕಿಹೊಳಿ ಅವರು ಶುಕ್ರವಾರ ರಾತ್ರಿ ಮುಂಬೈಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರೂ ಆಗಿರುವ ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ರಮೇಶ್‌ ಜಾರಕಿಹೊಳಿ ಸೇರಿದಂತೆ ನಾಲ್ವರು ಕಾಂಗ್ರೆಸ್‌ ಶಾಸಕರು ಶಾಸಕಾಂಗ ಸಭೆಯಿಂದ ದೂರ ಉಳಿದಿದ್ದರು. 

ಹೀಗಾಗಿ, ಅವರ ವಿರುದ್ಧ ಕಾಂಗ್ರೆಸ್‌ ಪಕ್ಷ ಉಚ್ಚಾಟನೆಯಂಥ ಕಠಿಣ ಕ್ರಮಕ್ಕೆ ಮುಂದಾಗಬಹುದು. ಜೊತೆಗೆ ಅದರಿಂದ ಈ ನಾಲ್ವರು ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಪಿಯೂಷ್‌ ಗೋಯಲ್‌ ಅವರೊಂದಿಗೆ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.