ರಾಜಕೀಯ ನಿವೃತ್ತಿ ಬಗ್ಗೆ ಸ್ಪಷ್ಟನೆ ಕೊಟ್ಟ ಕರ್ನಾಟಕ ಕಾಂಗ್ರೆಸ್ ನಾಯಕ

ರಾಜಕೀಯ ನಿವೃತ್ತಿ ಕೇವಲ ವದಂತಿಯಷ್ಟೇ ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ನಾಯಕ ನಿವೃತ್ತಿ ಮಾತಿಗೆ ತೆರೆ ಎಳೆದಿದ್ದಾರೆ.

Congress Leader ramesh kumar Gives clarification about his political retirement rbj

ಕೋಲಾರ, (ಡಿ.08): ನನ್ನ ರಾಜಕೀಯ ನಿವೃತ್ತಿ ಕೇವಲ ವದಂತಿಯಷ್ಟೇ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕೋಲಾರದಲ್ಲಿನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು.

ಕಾಂಗ್ರೆಸ್‌ಗೆ ಬಿಗ್ ಶಾಕ್: ರಾಜಕೀಯ ನಿವೃತ್ತಿ ಘೋಷಿಸಿದ ಕರ್ನಾಟಕದ ಕೈ ಹಿರಿಯ ನಾಯಕ

ಈ ಸುದ್ದಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಅಲ್ಲದೇ ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಇದೀಗ ಈ ಕುರಿತು ಶ್ರೀನಿವಾಸಪುರದ ಜನಘಟ್ಟದಲ್ಲಿ ಮಾಧ್ಯಗಳಿಗೆ ಸ್ಪಷ್ಟನೆ ನೀಡಿದ ರಮೇಶ್ ಕುಮಾರ್, ರಾಜಕೀಯ ನಿವೃತ್ತಿ ಬಗ್ಗೆ ನಾನು ಯಾವುದೇ ಹೇಳಿಕೆ ಕೊಟ್ಟಿಲ್ಲ. ದಾಖಲೆ ಇಲ್ಲದೇ ನಮಗೆ ಮುಜುಗರ ತರುವ ಕೆಲಸ ಮಾಡಬೇಡಿ. ಜನರು ಎಲ್ಲಾ ನನ್ನ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದಾರೆ. ಅವರಿಗೆ ಜವಾಬ್ದಾರಿ ಕೊಟ್ಟು ಆಮೇಲೆ ನಿವೃತ್ತಿ ಆಗುತ್ತೇನೆ ಎಂದರು.

ನಿವೃತ್ತಿಯಾಗಲು ಫ್ರೀಯಾಗಿರುವ ಮನುಷ್ಯ ನಾನಲ್ಲ. ಜನರ ಪ್ರೀತಿಯ ಬಂಧನದಲ್ಲಿದ್ದೇನೆ. ಹೀಗೆ ಮಾಡಿದ್ರೆ ಮನಸ್ಸಿಗೆ ನೋವಾಗುತ್ತೆ. ನಾನು ದೇವರಾಜ ಅರಸು ಕಾಲದಿಂದ ಸಕ್ರಿಯವಾಗಿದ್ದೇನೆ. ನಾನು ಸರ್ಕಾರಿ ಸೇವೆಯಲ್ಲಿದ್ರೆ ವಿಆರ್ ಎಸ್ ಕೊಡಬಹುದು. ನಾನು ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ರಾಜಕೀಯ ನಿವೃತ್ತಿ ಎಂದು ಸುಮಾರು ಜನ ಗಣ್ಯರು ಪೋನ್ ಮಾಡ್ತಿದ್ದಾರೆ. ಬೆಂಗಳೂರು, ಬೆಳಗಾಂ‌, ವಿಜಯಪುರ ನಿಂದ ಹಲವರು ಪೋನ್ ಮಾಡಿ ವಿಚಾರಿಸಿದ್ದಾರೆ.ಎಂದು ತಿಳಿಸಿದರು.

Latest Videos
Follow Us:
Download App:
  • android
  • ios