ಬಿಜೆಪಿ ವಿರುದ್ಧ ಹೋರಾಡಿ: ಯುವ ಕಾಂಗ್ರೆಸ್ಸಿಗೆ ಸಲೀಂ ಕರೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಭ್ರಷ್ಟಾಚಾರ, ನಿರುದ್ಯೋಗ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುವ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ತು ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹ್ಮದ್‌ ಸಲಹೆ ನೀಡಿದರು.

Congress Leader Saleem Ahmed Slams On BJP gvd

ಬೆಂಗಳೂರು (ಜು.28): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಭ್ರಷ್ಟಾಚಾರ, ನಿರುದ್ಯೋಗ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುವ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ತು ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹ್ಮದ್‌ ಸಲಹೆ ನೀಡಿದರು.

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮೂರು ದಿನಗಳ ರಾಷ್ಟ್ರೀಯ ಯುವ ಕಾಂಗ್ರೆಸ್ಸಿನ ‘ಉತ್ತಮ ಭಾರತಕ್ಕಾಗಿ ಅಡಿಪಾಯ’ ಸಮ್ಮೇಳನದ ಎರಡನೇ ದಿನವಾದ ಗುರುವಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಭಾರತದ ಅತ್ಯಂತ ದೊಡ್ಡ ಬಲಿಷ್ಠ ಯುವ ಸಂಘಟನೆಯಾದ ಯುವ ಕಾಂಗ್ರೆಸ್‌, ಕಾಂಗ್ರೆಸ್‌ ಪಕ್ಷದ ಭದ್ರ ಬುನಾದಿಯಾಗಿದೆ. ಯುವ ಕಾಂಗ್ರೆಸ್‌ ಕಾರ್ಯಕರ್ತರು ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ, ಕಾಂಗ್ರೆಸ್‌ ಪಕ್ಷದ ತತ್ವ​-ಸಿದ್ಧಾಂತ, ಇತಿಹಾಸ ಹಾಗೂ ದೇಶದ ಐಕ್ಯತೆಗಾಗಿ ಪ್ರಾಣ ತ್ಯಾಗ ಮಾಡಿದ ಮಹಾತ್ಮ ಗಾಂಧಿ, ಇಂದಿರಾಗಾಂಧಿ, ರಾಜೀವ್‌ ಗಾಂಧಿ ಅವರ ವಿಚಾರ ಧಾರೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಲೋಕಸಭೆ: ರಾಜ್ಯದಲ್ಲಿ 15-20 ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲುವು​: ಜಗದೀಶ್‌ ಶೆಟ್ಟರ್‌

ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಅವರು ಮಾಹಿತಿ ತಂತ್ರಜ್ಞಾನ, ಟೆಲಿಕಮ್ಯೂನಿಕೇಷನ್‌ ಕ್ಷೇತ್ರದ ಕ್ರಾಂತಿಕಾರಕ ಬದಲಾವಣೆಗೆ ಕಾರಣೀಭೂತರಾಗಿದ್ದಾರೆ. ಅವರು 18 ವರ್ಷ ಮೇಲ್ಪಟ್ಟಯುವ ಜನರಿಗೆ ಮತದಾನದ ಹಕ್ಕು ನೀಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯುವ ಸಮುದಾಯದ ಪಾತ್ರ ಎಷ್ಟುಮುಖ್ಯ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಯುವ ಜನರನ್ನು ಸಂಘಟಿಸುವ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಇನ್ನಷ್ಟುಗಟ್ಟಿಗೊಳಿಸಬೇಕು. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್‌ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ನಿರಂತರವಾಗಿ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್‌ ಪಕ್ಷವು ಹೋರಾಡುತ್ತಾ ಬಂದಿದೆ. ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ನಾಯಕರಾದ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಯುತ್ತಿದೆ. ಯುವ ಕಾಂಗ್ರೆಸ್‌ ಕೂಡ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಬೇಕು. ನಿರುದ್ಯೋಗ ಸಮಸ್ಯೆ ಸೇರಿದಂತೆ ದೇಶದಲ್ಲಿ ಬಿಜೆಪಿ ನಡೆಸುತ್ತಿರುವ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾದ ಕಾರ್ಯಗಳ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಜನಸಂಖ್ಯೆ ಹೆಚ್ಚಳ ಸಂತಸವಲ್ಲ: ಶಾಸಕ ಶಿವರಾಮ ಹೆಬ್ಬಾರ್

ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಮ್ಮ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರ ನೇತೃತ್ವದ ನಮ್ಮ ಸರ್ಕಾರ ಸಮಾಜದ ಎಲ್ಲ ವರ್ಗದ ಜನರ ಕಲ್ಯಾಣಕ್ಕಾಗಿ ಬದ್ಧವಾಗಿದೆ. ರಾಜ್ಯ ಹಾಗೂ ದೇಶಾದ್ಯಂತ ಯುವ ಕಾಂಗ್ರೆಸ್‌ ಒಳ್ಳೆಯ ಕೆಲಸ ಮಾಡುತ್ತಿದೆ. ನೂರಾರು ನಾಯಕರನ್ನು ಬೆಳೆಸಿದ ಕೀರ್ತಿ ಯುವ ಕಾಂಗ್ರೆಸ್‌ಗೆ ಸಲ್ಲುತ್ತದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಗೆಲ್ಲುವ ಮೂಲಕ ರಾಹುಲ್‌ ಗಾಂಧಿ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್‌ ಮಾಕನ್‌, ಎಐಸಿಸಿ ಕಾರ್ಯದರ್ಶಿ ಅಭಿಷೇಕ್‌ ದತ್‌, ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ. ಶ್ರೀನಿವಾಸ್‌, ರಾಜ್ಯ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios