Asianet Suvarna News Asianet Suvarna News

ಪ್ರಧಾನಿ ಮೋದಿ ಮಂಗಳೂರು ಭೇಟಿಗೆ ಸಿದ್ದು ವ್ಯಂಗ್ಯ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ, 40 ಪರ್ಸೆಂಟ್‌ ಕಮಿಷನ್‌ ದಂಧೆ ಬಗ್ಗೆ ನಿಮ್ಮ ಗಮನಕ್ಕೆ ಬಂದರೂ ಕ್ರಮ ಕೈಗೊಂಡಿಲ್ಲ. ರಾಜ್ಯದ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಕರಾವಳಿ ಜಿಲ್ಲೆಗಳಿಗೆ ನೀಡಿದ್ದ ಯಾವ ಭರವಸೆಯನ್ನೂ ಈಡೇರಿಸಿಲ್ಲ. 

Congress leader Siddaramaiah fired questions on Twitter before the Prime Ministers visit to Mangaluru gvd
Author
First Published Sep 3, 2022, 3:00 AM IST

ಬೆಂಗಳೂರು (ಸೆ.03): ‘ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ, 40 ಪರ್ಸೆಂಟ್‌ ಕಮಿಷನ್‌ ದಂಧೆ ಬಗ್ಗೆ ನಿಮ್ಮ ಗಮನಕ್ಕೆ ಬಂದರೂ ಕ್ರಮ ಕೈಗೊಂಡಿಲ್ಲ. ರಾಜ್ಯದ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಕರಾವಳಿ ಜಿಲ್ಲೆಗಳಿಗೆ ನೀಡಿದ್ದ ಯಾವ ಭರವಸೆಯನ್ನೂ ಈಡೇರಿಸಿಲ್ಲ. ಈಗ ಮಂಗಳೂರಿಗೆ ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ನಿಮ್ಮಿಂದ ಆಗಿರುವ ವಿನಾಶ ದರ್ಶನಕ್ಕೋ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದಕ್ಷಿಣ ಕನ್ನಡದ ಉದ್ಯಮ ಶೀಲ ಹಿರಿಯರು ಸಿಂಡಿಕೇಟ್‌, ಕಾರ್ಪೋರೇಷನ್‌, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್‌ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ. ನಿಮ್ಮ ನಡೆ ಈ ಅಮರ ವೀರರಿಗೆ ಬಗೆದ ದ್ರೋಹವಲ್ಲವೇ ಎಂದು ಖಾರವಾಗಿ ಹೇಳಿದ್ದಾರೆ.

ಹೆಸರಲ್ಲಿ ರಾಮ, ಉಂಡ ಮನೆಗೆ ನಾಮ; ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಶ್ರೀರಾಮುಲು

ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಕೊಡುಗೆ. ಈ ವಿಮಾನ ನಿಲ್ದಾಣವನ್ನು ನಿಮ್ಮ ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದ್ದು ವಿಕಾಸವೋ? ವಿನಾಶವೋ?, ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ. ಅದನ್ನು ಹಂತ-ಹಂತವಾಗಿ ಅದಾನಿಗೆ ಮಾರುತ್ತಿದ್ದೀರಿ ಇದು ವಿಕಾಸವೋ ವಿನಾಶವೋ? ಎಂದು ಕಿಡಿಕಾರಿದ್ದಾರೆ.

ಕರ್ನಾಟಕ ಒಕ್ಕೂಟ ಸರ್ಕಾರದ ಸದಸ್ಯ ರಾಜ್ಯ ಎನ್ನುವುದನ್ನೂ ಮರೆತಂತೆ ಇದ್ದುಬಿಟ್ಟಿರಿ. ಈಗ ಚುನಾವಣೆ ಹತ್ತಿರ ಬಂದಿರುವುದರಿಂದ ರಾಜ್ಯಕ್ಕೆ ಭೇಟಿ ನೀಡಲು ನೆಪಗಳಿಗಾಗಿ ತಡಕಾಡುತ್ತೀದ್ದೀರಿ. ನಿಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಕರಾವಳಿ ಜಿಲ್ಲೆಗಳ ಜನತೆಗೆ ನೀವು ನೀಡಿದ್ದ 34 ಭರವಸೆಗಳಲ್ಲಿ ಆಯ್ದ 25 ಭರವಸೆಗಳ ಪಟ್ಟಿನೆನಪಿಸುತ್ತಿದ್ದೇನೆ. ಕಳೆದ ಮೂರು ವರ್ಷದಲ್ಲಿ ಇವುಗಳಲ್ಲಿ ಎಷ್ಟುಈಡೇರಿಸಿದ್ದೀರಿ? ಈಡೇರಿಸದಿದ್ದರೆ ಯಾವಾಗ ಈಡೇರಿಸುತ್ತೀರಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಗಂಭೀರ ಆರೋಪ ಬಂದಾಗ ಭಂಡತನ ಬೇಡ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗಂಭೀರ ಆರೋಪಗಳು ಬಂದಾಗ ಸರ್ಕಾರ ನೆಪ ಹೇಳುವ ಅಥವಾ ಅದರಿಂದ ತಪ್ಪಿಸಿಕೊಳ್ಳುವ ಭಂಡತನ ಪ್ರದರ್ಶಿಸಬಾರದು. ಬದಲಿಗೆ ಸ್ವತಂತ್ರ ಸಂಸ್ಥೆಯಿಂದ ತನಿಖೆಗೆ ಒಳಪಡಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಜಿಲ್ಲಾ ಪತ್ರಕರ್ತರ ಸಂಘ ಶುಕ್ರವಾರ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಅಧಿಕಾರಿಗಳು, ಜನಪ್ರತಿನಿಧಿಗಳು, ವಿಧಾನಸೌಧದ ಗೋಡೆಗಳು ಮಾತನಾಡುತ್ತಿವೆ ಎಂದರು.

ನಾನು ನಿಮ್ಮ ಮನೆ ಜೀತಕ್ಕೆ ಇಲ್ಲ: ಸಿದ್ದುಗೆ ಸೋಮಣ್ಣ ಗುದ್ದು

ಈ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಆರೋಪಕ್ಕೆ ಸಿಎಂ ದಾಖಲೆ ಕೇಳುತ್ತಿದ್ದಾರೆ. ಗುತ್ತಿಗೆದಾರರು ತಮಗೆ ಕಿರುಕುಳ ನೀಡುತ್ತಾರೆ, ಮತ್ತೆ ಕಾಮಗಾರಿ ನೀಡುವುದಿಲ್ಲ ಎಂಬ ಕಾರಣಕ್ಕೆ ಸುಮ್ಮನಿದ್ದರು. ಆದರೆ ಸ್ವತಂತ್ರ್ಯ ಸಂಸ್ಥೆಯಿಂದ ತನಿಖೆ ನಡೆಸಿದರೆ ಅವರು ದಾಖಲೆ ಕೊಡಲು ಸಿದ್ಧರಿದ್ದಾರೆ. ಅದು ಸಾಬೀತುಪಡಿಸಲು ಸಾಧ್ಯವಾಗದಿದ್ದರೆ ಶಿಕ್ಷೆಗೆ ಗುರಿಯಾಗಲು ಸಿದ್ಧ ಎಂದೂ ಕೂಡ ತಿಳಿಸಿರುವುದಾಗಿ ಸಿದ್ದರಾಮಯ್ಯ ಹೇಳಿದರು. ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕಿರುವ ಸಮಸ್ಯೆ ಏನು? ಎಂದು ಅವರು ಪ್ರಶ್ನಿಸಿದರು.

Follow Us:
Download App:
  • android
  • ios