Asianet Suvarna News Asianet Suvarna News

'10 ಪಟ್ಟು ಧಮ್ ಇರ್ಲಿ, ಆದ್ರೆ ಮೋದಿ ಮುಂದೆ ಕೂತು ರಾಜ್ಯಕ್ಕೆ ಪರಿಹಾರ ತಗೆದುಕೊಂಡು ಬರಲಿ'

ರಾಜ್ಯ ರಾಜಕಾರಣದಲ್ಲಿ ಸದ್ಯ `ಧಮ್’ ಭಾರಿ ಸದ್ದು ಮಾಡುತ್ತಿದೆ. ಸಿದ್ದರಾಮಯ್ಯ, ಬಿಜೆಪಿ ನಾಯಕರ ಮಧ್ಯೆ ಈ ಧಮ್ ವಾಗ್ಯುದ್ಧ ಜೋರಾಗಿ ನಡೆಯುತ್ತಿದೆ.

Congress Leader siddaramaiah Hits Back at Dcm ashwath narayan rbj
Author
Bengaluru, First Published Oct 25, 2020, 3:25 PM IST

ಕಲಬುರಗಿ, (ಅ.25): ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣಗೆ ಹತ್ತು ಪಟ್ಟು ಧಮ್ ಇರಲಿ. ಅವರಿಗೆ ಧಮ್ ಇದ್ದರೆ ಪ್ರಧಾನಿ ನರೇಂದ್ರ ಮೋದಿ ಮುಂದೆ ಕೂತು ರಾಜ್ಯಕ್ಕೆ ಬರಬೇಕಾದ ಪರಿಹಾರ ತಗೆದುಕೊಂಡು ಬರಲಿ‌ ಎಂದು ‌ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು.

ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಸ್ಥಳಕ್ಕೆ ವೀಕ್ಷಣೆಗಾಗಿ ಭಾನುವಾರ ಬಂದಿದ್ದ ವೇಳೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶ್ವತ್ಥ ನಾರಾಯಣ ನನಗಿಂತ ಹೆಚ್ಚು ಧಮ್ ಇದೆ ಅಂತಾರೆ. ರಾಜ್ಯದಲ್ಲಿ 25 ಸಂಸದರು ಇದ್ದರೂ ಪ್ರಯೋಜನವಿಲ್ಲ. ಧಮ್ ಇದ್ದರೆ ಕೇಂದ್ರದಿಂದ ರಾಜ್ಯಕ್ಕೆ ಪರಿಹಾರ ತಗೆದುಕೊಂಡು ಬರಲಿ‌ ಎಂದು ತೀರುಗೇಟು ನೀಡಿದರು.

ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಬಿಜೆಪಿಯಿಂದ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ

ನೆರೆ ಸಂತ್ರಸ್ತರಿಗೆ ಇನ್ನೂ ನಯಾ ಪೈಸೆ ಹಣ ನೀಡಿಲ್ಲ. ‌ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಿದ ವೈಮಾನಿಕ ಸಮೀಕ್ಷೆಯಿಂದ ಯಾವುದೇ ಪ್ರಯೋಜನ ಇಲ್ಲ. ಅವರು ಜನರ ಜೊತೆ ಮಾತನಾಡಿಲ್ಲ. ನೆರೆ ಪೀಡಿತ ಪ್ರದೇಶಗಳಿಗೆ ಹೋಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರ ಜನವಿರೋಧಿ ಸರ್ಕಾರ.‌ ಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆಯುತ್ತಿದ್ದರು. ಇದೀಗ ಅವರ ಮಗ ಆರ್ ಟಿ ಜಿ ಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ. ಇಂತಹ ಭ್ರಷ್ಟ ಸರ್ಕಾರವನ್ನು ನಾನು ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ ಎಂದು ವಾಗ್ದಾಳಿ ನಡೆಸಿದರು.

Follow Us:
Download App:
  • android
  • ios