Asianet Suvarna News Asianet Suvarna News

ಕಾಂಗ್ರೆಸ್ ಸೇರಿದ ಜೆಡಿಎಸ್ ಮುಖಂಡ, ಬಿಜೆಪಿಯನ್ನು ಕಿತ್ತು ಬಿಸಾಕಿ ಎಂದ ಸಿದ್ದರಾಮಯ್ಯ

* ಜೆಡಿಎಸ್‌ ಮುಖಂಡ ಹನುಮಂತೇಗೌಡ ಕಾಂಗ್ರೆಸ್ ಸೇರ್ಪಡೆ
* ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ಆಕ್ರೋಶ
* ಜೆಡಿಎಸ್‌ನ ಜಾತ್ಯತೀತತೆ ಕೇವಲ ಹೆಸರಿನಲ್ಲಷ್ಟೇ ಉಳಿದಿದೆ ಎಂದು ಕಿಡಿ
 

Congress Leader Siddaramaiah Hits out at JDS and BJP rbj
Author
Bengaluru, First Published Sep 26, 2021, 9:27 PM IST

ಬೆಂಗಳೂರು, ಸೆ.26): ಜೆಡಿಎಸ್‌ನ ಜಾತ್ಯತೀತತೆ ಕೇವಲ ಹೆಸರಿನಲ್ಲಷ್ಟೇ ಉಳಿದಿದೆ. ಅವರದ್ದು ಅವಕಾಶವಾದಿ ರಾಜಕಾರಣ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರಿನ ಹೆಬ್ಟಾಳ ವಿಧಾನಸಭಾ ಕ್ಷೇತ್ರದಲ್ಲಿ ಇಂದು (ಸೆ.16) ದಿನಸಿ ಕಿಟ್‌ಗಳ ವಿತರಣೆ ಹಾಗೂ ಜೆಡಿಎಸ್‌ ಮುಖಂಡ ಹನುಮಂತೇಗೌಡ ಅವರ ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜೆಡಿಎಸ್‌ ಮಾತೆತ್ತಿದರೆ ನಮ್ಮದು ಜಾತ್ಯತೀತ ಪಕ್ಷ ಅನ್ನುತ್ತೆ.
ಜಾತ್ಯತೀತತೆ ಬರೀ ಹೆಸರಿನಲ್ಲಷ್ಟೇ ಉಳಿದಿದೆ, ಸಿದ್ಧಾಂತವಾಗಿ ಅಲ್ಲ. ಇದೇ ಕಾರಣಕ್ಕೆ ಹನುಮಂತೇಗೌಡ ಪಕ್ಷ ತ್ಯಜಿಸಿ ಕಾಂಗ್ರೆಸ್‌ ಸೇರಿದ್ದಾರೆ ಎಂದರು.

ಜೆಡಿಎಸ್ ನಾಯಕರನ್ನು ಸೆಳೆಯಲು ಡಿಕೆಶಿ ಪ್ಲಾನ್: ತಂದೆ ಆರೋಗ್ಯ ವಿಚಾರಿಸುವ ನೆಪದಲ್ಲಿ ಪುತ್ರನಿಗೆ ಗಾಳ

ಜೆಡಿಎಸ್‌ನದ್ದು ಅವಕಾಶವಾದಿ ರಾಜಕಾರಣ. ಜೆಡಿಎಸ್‌ ಬಹುಮತ ಪಡೆದು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ಪಕ್ಷ ಅಲ್ಲ. ಅವರಿಗೆ ಯಾರಾದರೂ ನಡೆಯುತ್ತದೆ. ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಕಾರಣಕ್ಕೆ ನಾವು 80 ಶಾಸಕರಿದ್ದರೂ ಅವರಿಗೆ ಬೆಂಬಲ ಕೊಟ್ಟು, ಅವರನ್ನೇ ಮುಖ್ಯಮಂತ್ರಿ ಮಾಡಲು ಒಪ್ಪಿದೆವು ಎಂದು ಕಿಡಿಕಾರಿದರು.

ನಂಜನಗೂಡಿನಲ್ಲಿ ದೇವಸ್ಥಾನ ಒಡೆದವರು ಬಿಜೆಪಿಯವರೇ, ಅದರ ವಿರುದ್ಧ ಪ್ರತಿಭಟನೆ ಮಾಡೋರು ಬಿಜೆಪಿಯವರೇ. ತಮ್ಮೆಲ್ಲರಲ್ಲಿ ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ. 2023ರ ಚುನಾವಣೆಯಲ್ಲಿ ಬಿಜೆಪಿಯನ್ನು ಕಿತ್ತು ಬಿಸಾಕಿ ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

Follow Us:
Download App:
  • android
  • ios