Asianet Suvarna News Asianet Suvarna News

ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ? ಅಗ್ನಿಪಥ ಯೋಜನೆಗೆ ಸಿದ್ದು ಗುದ್ದು

* ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ 
* ಅಗ್ನಿಪಥ್ ಯೋಜನೆಗೆ ಪರ-ವಿರೋಧದ ಚರ್ಚೆ
* ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

Congress Leader Siddaramaiah Hits out at Modi Govt Over agnipath rbj
Author
Bengaluru, First Published Jun 17, 2022, 3:31 PM IST

ಬೆಂಗಳೂರು, (ಜೂನ್. 17): ಸೇನೆಗೆ ನಾಲ್ಕು ವರ್ಷಗಳ ಅವಧಿಗೆ ಯುವ ಜನರನ್ನು ಸೇರಿಸಿಕೊಳ್ಳುವ ಅಗ್ನಿಪಥ್ ಯೋಜನೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ದೇಶದ ಹಲವೆಡೆ ವಿರೋಧ ಪಕ್ಷಗಳು ಬೀದಿಗಳಿದು ಪ್ರತಿಭಟನೆ ಮಾಡುತ್ತಿವೆ.

ಇನ್ನು ಈ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿದ್ದು, ಅಗ್ನಿಪಥ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರೈತರನ್ನು ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಏನಿದು ಅಗ್ನಿಪಥ ಯೋಜನೆ? ಯಾರೆಲ್ಲ ಅಗ್ನಿವೀರ್‌ ಆಗಬಹುದು? ಅರ್ಹತೆ ಏನು? ವೇತನ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ

ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟು ಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ? ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ ಎಂದಿದ್ದಾರೆ.

ಹೊಸಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ. ಎಚ್ಚೆತ್ತುಕೊಳ್ಳಲು ಇದು ಸಕಾಲ. ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು ಎಂದು ಸಿದ್ದರಾಮಯ್ಯ ಕರೆ ಕೊಟ್ಟಿದ್ದಾರೆ.

Follow Us:
Download App:
  • android
  • ios