Asianet Suvarna News Asianet Suvarna News

ಭಿನ್ನಮತ ನೋಡಿದ್ರೆ ಮಧ್ಯಂತರ ಚುನಾವಣೆ ಎದುರಾಗಬಹುದು: ಸಿದ್ದು ಸ್ಪೋಟಕ ಹೇಳಿಕೆ

* ಬಸವರಾಜ ಬೊಮ್ಮಾಯಿಯವರ ಹೊಸ ಕ್ಯಾಬಿನೆಟ್‌ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ
*ಸಿಎಂ ಬೆಟ್ಟ ಅಗೆದು ಇಲಿ ಹಿಡಿದಂತಾಗಿದೆ ಎಂದು ಸಿದ್ದರಾಮಯ್ಯ
* ಶೀಘ್ರದಲ್ಲಿಯೇ ಮಧ್ಯಂತರ ಚುನಾವಣೆ  ಭವಿಷ್ಯ

Congress Leader Siddaramaiah Reacts On Basavaraj Bommai New cabinet rbj
Author
Bengaluru, First Published Aug 4, 2021, 10:40 PM IST
  • Facebook
  • Twitter
  • Whatsapp

ಬೆಂಗಳೂರು, (ಆ.04): ಬಸವರಾಜ ಬೊಮ್ಮಾಯಿ ಅವರು ಕೊನೆಗೂ ತಮ್ಮ ಸಂಪುಟ ರಚನೆ ಮಾಡಿಕೊಂಡಿದ್ದಾರೆ. 29 ಜನರು ಇಂದು (ಆ.04) ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಇನ್ನು ಈ ಬೊಮ್ಮಾಯಿ ಮಂತ್ರಿಮಂಡಲದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಮಧ್ಯಂತರ ಚುನಾವಣೆಯ ಭವಿಷ್ಯ ನುಡಿದಿದ್ದಾರೆ.

ನೂತನ ಸಚಿವರಿಗೆ ಜಿಲ್ಲೆಗಳನ್ನು ಹಂಚಿಕೆ ಮಾಡಿದ ಸಿಎಂ: ಯಾವ ಜಿಲ್ಲೆ, ಯಾರ ಹೆಗಲಿಗೆ?

ಸಿದ್ದರಾಮಯ್ಯ ಅವರು ಸಾಮಾಜಿ ಜಾಲತಾಣಗಳಲ್ಲಿ ಬರೆದುಕೊಂಡಿದ್ದು, ಅದು ಈ ಕೆಳಗಿನಂತಿದೆ. 

ದೆಹಲಿಯಲ್ಲಿ ಪಕ್ಷದ ಹೈಕಮಾಂಡ್ ಜೊತೆಗಿನ ಮೂರು ದಿನಗಳ ನಿರಂತರ ಚರ್ಚೆ-ಸಮಾಲೋಚನೆಗಳ ನಂತರ ರಚನೆಯಾದ ರಾಜ್ಯದ ಸಚಿವ ಸಂಪುಟವನ್ನು ನೋಡಿದರೆ ಮುಖ್ಯಮಂತ್ರಿಗಳು ಬೆಟ್ಟ ಅಗೆದು ಇಲಿ ಹಿಡಿದಂತಾಗಿದೆ. ಈಗಾಗಲೇ ಭುಗಿಲೆದ್ದಿರುವ ಭಿನ್ನಮತವನ್ನು ನೋಡಿದರೆ ಶೀಘ್ರದಲ್ಲಿಯೇ ಮಧ್ಯಂತರ ಚುನಾವಣೆ ಎದುರಾಗಬಹುದು.

ದಲಿತ ಸಮುದಾಯದ ಉದ್ಧಾರಕ್ಕೆ ಅವತಾರ ಎತ್ತಿಬಂದಂತೆ ಇತ್ತೀಚಿನ ದಿನಗಳಲ್ಲಿ ಮಾತನಾಡುತ್ತಿರುವ ಬಿಜೆಪಿ ರಾಜ್ಯ ಸಚಿವ ಸಂಪುಟ ರಚನೆಯಲ್ಲಿ ದಲಿತ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ರಾಜ್ಯದ ಶೇಕಡಾ 24ರಷ್ಟು ಜನಸಂಖ್ಯೆ ಇರುವ  ಪರಿಶಿಷ್ಟ ಜಾತಿ-ಪಂಗಡ ಸಮುದಾಯಕ್ಕೆ ಕೇವಲ ನಾಲ್ಕು ಸಚಿವರನ್ನು ನೀಡಿ ಅನ್ಯಾಯ ಎಸಗಿದೆ.

ನೂತನ ಸಚಿವ ಸಂಪುಟ ರಚನೆಯಲ್ಲಿ ಬಿಜೆಪಿಯೊಳಗಿರುವ ಭಿನ್ನಮತೀಯ ಗುಂಪುಗಳನ್ನು ತೃಪ್ತಿ ಪಡಿಸುವ ಸರ್ಕಸ್ ಕಾಣುತ್ತಿದೆಯೇ ಹೊರತು, ಜನಪರವಾದ ಸಮರ್ಥ ಆಡಳಿತ ನಡೆಸಬೇಕೆಂಬ ಸದುದ್ದೇಶ ಕಾಣುತ್ತಿಲ್ಲ. ಎಲ್ಲರನ್ನೂ ಓಲೈಸಲು ಪ್ರಯತ್ನ ನಡೆಸಿರುವ ಮುಖ್ಯಮಂತ್ರಿಗಳು ಯಾರಿಗೂ ಬೇಡದ ಒಲ್ಲದ ಕೂಸು ಆಗಿರುವಂತೆ ಕಾಣಿಸುತ್ತಿದೆ.

ಸಾಮರ್ಥ್ಯ, ಸಾಮಾಜಿಕ ನ್ಯಾಯ, ಪ್ರಾದೇಶಿಕ ಪ್ರಾತಿನಿಧ್ಯ, ಸ್ವಚ್ಛ ರಾಜಕಾರಣ ಮೊದಲಾದ ಯಾವ ಧನಾತ್ಮಕ ಅಂಶಗಳು ಹೊಸ ಸಚಿವ ಸಂಪುಟದಲ್ಲಿ ಕಾಣಿಸುತ್ತಿಲ್ಲ. ಇತ್ತೀಚೆಗಷ್ಠೇ ಮೊಟ್ಟೆ ಖರೀದಿ ಹಗರಣದಲ್ಲಿ ಆರೋಪಿಯಾಗಿರುವ ಶಶಿಕಲಾ ಜೊಲ್ಲೆ ಅವರಿಗೆ ಸಚಿವಸ್ಥಾನ ನೀಡಿರುವುದು ಪಕ್ಷ ಮತ್ತು ಸಂಘಪರಿವಾರದ ನೈತಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

Follow Us:
Download App:
  • android
  • ios