ಕೊರೋನಾ ಲಸಿಕೆ ವಿತರಣೆ ಅಭಿಯಾನಕ್ಕೆ ಸಂಬಂಧಿಸಿದಂತೆ  ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಬೆಂಗಳೂರು, (ಜ.16): ದೇಶಾದ್ಯಂತ ಕೊರೋನಾ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಇಂದು (ಶನಿವಾರ) ಪ್ರಧಾನಿ ನರೇಂದ್ರ ಮೋದಿ ಚಾಲನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲಸಿಕೆ ಅಭಿಯಾನಕ್ಕೆ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೊದಲ ಹಂತದಲ್ಲಿ ದೇಶಾದ್ಯಂತ 3 ಕೋಟಿ ಜನರಿಗೆ ಲಸಿಕೆ ವಿತರಿಸಲಾಗುತ್ತದೆ. ಕೊವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗುತ್ತದೆ.

ಲಸಿಕೆ ಅಭಿಯಾನಕ್ಕೆ ಚಾಲನೆ, ಭರವಸೆಯ ಮಾತುಗಳನ್ನಾಡಿದ ಸಿಎಂ

ಇನ್ನು ಈ ಬಗ್ಗೆ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದು, ಕೊವಿಡ್-19 ವಿರುದ್ಧ ಆರಂಭವಾಗಿರುವ ಲಸಿಕೆ ವಿತರಣಾ ಅಭಿಯಾನಕ್ಕೆ ಶುಭಾಶಯ ಕೋರಿದ್ದಾರೆ. 

ಲಸಿಕೆ ಅಭಿಯಾನವು ಯಶಸ್ವಿಯಾಗಲಿ. ಜನರ ಜೀವಗಳನ್ನು ಉಳಿಸಲಿ. ಆ ಮೂಲಕ, ಭಾರತೀಯರಿಗೆ ಹೊಸ ಬದುಕು ಆರಂಭವಾಗಲಿ ಎಂದು ಟ್ವಿಟ್ಟರ್ ಮೂಲಕ ಶುಭ ಹಾರೈಸಿದ್ದಾರೆ.

Scroll to load tweet…