Asianet Suvarna News Asianet Suvarna News

Karnataka Assembly Election : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಸಿದ್ದರಾಮಯ್ಯ ತಿರುಗೇಟು

  •  ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ಚುನಾವಣೆ: ಸಿದ್ದು
  •  ಪುಂಡಾಟಿಕೆ: ಪ್ರಧಾನಿ ಬಳಿಗೆ ನಿಯೋಗ ಒಯ್ಯಿರಿ
  •  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಸಿದ್ದರಾಮಯ್ಯ ತಿರುಗೇಟು
Congress Leader siddaramaiah Reacts On KPCC DK Shivakumar election Statement snr
Author
Bengaluru, First Published Dec 27, 2021, 7:22 AM IST

 ಬೆಂಗಳೂರು (ಡಿ.27): ಕಾಂಗ್ರೆಸ್‌ (Congress) ಪಕ್ಷದಲ್ಲಿ ಯಾವಾಗಲೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆಗಳು (Election) ನಡೆಯುತ್ತವೆ. ಅದೇ ರೀತಿ ಮುಂದಿನ ಚುನಾವಣೆಯೂ ಸಾಮೂಹಿಕ ನಾಯಕತ್ವದಲ್ಲೇ ನಡೆಯುತ್ತದೆ ಎಂದು ಹೇಳುವ ಮೂಲಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಅವರಿಗೆ ತಿರುಗೇಟು ನೀಡಿದ್ದಾರೆ.

‘ಮುಂದಿನ ಚುನಾವಣೆ (election) ತಮ್ಮ ನಾಯಕತ್ವದಲ್ಲೇ ನಡೆಯುತ್ತದೆ’ ಎಂದಿದ್ದ ಶಿವಕುಮಾರ್‌ ಹೇಳಿಕೆಗೆ ಭಾನುವಾರ ಸುದ್ದಿಗಾರರೆದುರು ಪ್ರತಿಕ್ರಿಯಿಸಿದ ಅವರು, ‘ಶಿವಕುಮಾರ್‌ ಅವರು ಕೆಪಿಸಿಸಿ (KPCC) ಅಧ್ಯಕ್ಷರಿದ್ದಾರೆ. ನಾನು ಪ್ರತಿಪಕ್ಷ ನಾಯಕನಾಗಿದ್ದೇನೆ. ಇನ್ನೂ ಹಲವು ಹಿರಿಯ ನಾಯಕರು ಪಕ್ಷದಲ್ಲಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ಕಾಂಗ್ರೆಸ್‌ ಪಕ್ಷ ಮುಂದಿನ ಚುನಾವಣೆ ಎದುರಿಸಲಿದೆ’ ಎಂದರು.

ಪ್ರಧಾನಿ ಬಳಿಗೆ ನಿಯೋಗ ಒಯ್ಯಿರಿ:  ಬೆಳಗಾವಿ (Belagavi) ವಿಚಾರದಲ್ಲಿ ತಿಳಿಗೇಡಿಗಳ ಪುಂಡಾಟಿಕೆ ಬಗ್ಗೆ ಸರ್ಕಾರ ಕ್ರಮದ ಹೇಳಿಕೆ ನೀಡಿ ಸುಮ್ಮನಾಗುವುದಲ್ಲ. ಈ ಸಂಬಂಧ ಕೇಂದ್ರಕ್ಕೆ ನಿಯೋಗ ಹೋಗಿ ಪ್ರಧಾನಿ ಅವರೊಂದಿಗೆ ಮಾತನಾಡಬೇಕು. ಮಹಾರಾಷ್ಟ್ರ ಸರ್ಕಾರಕ್ಕೂ ಸ್ಪಷ್ಟಎಚ್ಚರಿಕೆ ನೀಡಬೇಕು ಎಂದು ಹೇಳಿದರು

ಎಂಇಎಸ್‌ ಸಂಘಟನೆ ನಿಷೇಧಿಸಿ ಕನ್ನಡ ಒಕ್ಕೂಟ ಕರೆ ನೀಡಿರುವ ಡಿ.31ರ ಕರ್ನಾಟಕ ಬಂದ್‌ಗೆ ತಮ್ಮ ನೈತಿಕ ಬೆಂಬಲವಿದೆ ಎಂದೂ ಹೇಳಿದರು.

ಕಾಯ್ದೆ ವಾಪಸ್ ಪಡೆಯುತ್ತೇವೆ :  ಮತಾಂತರ ನಿಷೇಧ ಕಾಯ್ದೆಗೆ(Conversion Prohibition Act) ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ದುಸ್ಸಾಹಸಕ್ಕೆ ಸರ್ಕಾರವೇನಾದರೂ ಕೈಹಾಕಿ ಮಸೂದೆ ಅಂಗೀಕರಿಸಿದರೆ, 2023ರಲ್ಲಿ ನೂರಕ್ಕೆ ನೂರರಷ್ಟು ನಾವೇ ಅಧಿಕಾರಕ್ಕೆ ಬರುತ್ತೇವೆ. ಆಗ ನಾವೇ ಈ ಕಾಯ್ದೆ ವಾಪಸ್‌ ಪಡೆಯುತ್ತೇವೆ ಎಂದು ಹೇಳಿದ್ದಾರೆ. 

ರಾಜ್ಯ ಸರ್ಕಾರದ(Government of Karnataka) ಮತಾಂತರ ನಿಷೇಧ ಕಾಯ್ದೆ ವಿರೋಧಿಸಿ ಭಾರತೀಯ ಕ್ರೈಸ್ತ ಮಹಾಸಭಾದಿಂದ ನಗರದ ಸುವರ್ಣ ವಿಧಾನ ಸೌಧದ ಬಳಿ ನಡೆದ ಸಾಂಕೇತಿಕ ನಿರಶನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಿದ್ದರಾಮಯ್ಯ  ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಹೊರಟಿರುವುದು ಗಂಭೀರ ವಿಚಾರ. ದೇಶದಲ್ಲಿ ಕೋಮು ಸೌಹಾರ್ದ(Communal Friendly) ಹಾಳು ಮಾಡಲು ಹಾಗೂ ಒಂದು ಧರ್ಮವನ್ನು(Religion) ಗುರಿಯಾಗಿಟ್ಟುಕೊಂಡು ಈ ಕಾಯ್ದೆ ತರಲಾಗುತ್ತಿದೆ. ಇದರಲ್ಲಿ ರಾಜ್ಯದ ಹಿತ ಇಲ್ಲ ಎಂದರು. ಜತೆಗೆ, ನಾವು ಕ್ರೈಸ್ತರ(Christians0 ಜೊತೆ ಯಾವಾಗಲೂ ಇರುತ್ತೇವೆ. ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತೇವೆ, ಅನುಮೋದನೆ ಪಡೆಯಲು ಅವಕಾಶ ನೀಡಲ್ಲ. ಹಾಗೊಂದು ವೇಳೆ ಮತಾಂತರ ಕಾಯ್ದೆ ಜಾರಿಗೆ ತಂದರೆ 2023ರಲ್ಲಿ ನಾವೇ ಅಧಿಕಾರಕ್ಕೆ ಬಂದು ಕಾಯ್ದೆ ಹಿಂಪಡೆಯುತ್ತೇವೆ ಎಂದರು.

ಯಾವುದೇ ಸರ್ಕಾರ ಸಂವಿಧಾನ(Constitution) ಏನು ಹೇಳಿದೆಯೋ ಅದರಂತೆ ನಡೆದುಕೊಳ್ಳಬೇಕು. ಸಾಮಾಜಿಕ ಆರ್ಥಿಕ ಅಸಮಾನತೆ ಹೋಗಲಾಡಿಸಲು ಕೆಲಸ ಮಾಡಬೇಕು. ಅದನ್ನು ಬಿಟ್ಟು ಮತ್ತೊಬ್ಬರ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ಮಾಡಬಾರದು. ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ(BJP) ಕ್ರೈಸ್ತ ಸಮುದಾಯವನ್ನು ಗುರಿಯಾಗಿಸಿಕೊಂಡೇ ತರುತ್ತಿದೆ. ಬಿಜೆಪಿ ಸರ್ಕಾರ(BJP Government) ರಾಜ್ಯದಲ್ಲಿ(Karnataka) ಏನೂ ಕೆಲಸ ಮಾಡಿಲ್ಲ. ಹೀಗಾಗಿ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ತಿರುಗಿಸಲು ಇಂಥ ಕೆಲಸ ಮಾಡುತ್ತಿದ್ದಾರೆ ಎಂದ ಸಿದ್ದು 

ನಾನು ಮುಖ್ಯಮಂತ್ರಿ ಆಗಿದ್ದಾಗ ಚರ್ಚ್‌(Church) ಮೇಲೆ ಒಂದೇ ಒಂದು ದಾಳಿ ಆಗದಂತೆ ನೋಡಿಕೊಂಡಿದ್ದೆ. ಆಗಲೂ ಇದ್ದ ಪೊಲೀಸರೇ(Police) ಈಗಲೂ ಇದ್ದಾರೆ. ಅವರನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವುದನ್ನು ಆಡಳಿತ ನಡೆಸುವವರು ವಿವೇಚನೆಯಿಂದ ನಿರ್ಧರಿಸಬೇಕು ಎಂದು ಹೇಳಿದ ಸಿದ್ದರಾಮಯ್ಯ

Follow Us:
Download App:
  • android
  • ios