ಅಂಬಾನಿ, ಅದಾನಿ ಕೈಗೆ ಚಿನ್ನದ ಖಜಾನೆ ನೀಡಲು ಕೇಂದ್ರ ಸಿದ್ಧತೆ: ಸಿದ್ದರಾಮಯ್ಯ ಕಿಡಿ
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಜನದ್ರೋಹಿ ಹಾಗೂ ದೇಶದ್ರೋಹಿ ಸರ್ಕಾರವು ವಿದ್ಯುಚ್ಛಕ್ತಿ ತಿದ್ದುಪಡಿ ಕಾಯ್ದೆ-2022ನ್ನು ಲೋಕಸಭೆಯಲ್ಲಿ ಮಂಡಿಸಿದೆ. ತನ್ಮೂಲಕ ಅಂಬಾನಿ, ಅದಾನಿ ಮತ್ತಿತರ ಉದ್ಯಮಿಗಳ ಕೈಗೆ ಚಿನ್ನದ ಖಜಾನೆಗಳನ್ನು ಕೊಡಲು ಹೊರಟಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಂಗಳೂರು (ಆ.11): ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಜನದ್ರೋಹಿ ಹಾಗೂ ದೇಶದ್ರೋಹಿ ಸರ್ಕಾರವು ವಿದ್ಯುಚ್ಛಕ್ತಿ ತಿದ್ದುಪಡಿ ಕಾಯ್ದೆ-2022ನ್ನು ಲೋಕಸಭೆಯಲ್ಲಿ ಮಂಡಿಸಿದೆ. ತನ್ಮೂಲಕ ಅಂಬಾನಿ, ಅದಾನಿ ಮತ್ತಿತರ ಉದ್ಯಮಿಗಳ ಕೈಗೆ ಚಿನ್ನದ ಖಜಾನೆಗಳನ್ನು ಕೊಡಲು ಹೊರಟಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಜನರ ಕೈಗೆ ಬಾವುಟ: ಕಾರ್ಪೊರೇಟ್ ಕೈಗೆ ವಿದ್ಯುತ್ ಕ್ಷೇತ್ರ’ ಇದು ಬಿಜೆಪಿ ಸರ್ಕಾರದ ಜನವಿರೋಧಿ ಧೋರಣೆ.
ಇದುವರೆಗೆ ಕಡು ಬಡವರ ಬದುಕಿಗೆ ಕೊಳ್ಳಿ ಇಡುತ್ತಿದ್ದ ನರೇಂದ್ರ ಮೋದಿಯವರು ಈಗ ನಗರ, ಗ್ರಾಮೀಣ ಭಾಗದ ಮಧ್ಯಮ ವರ್ಗ, ಮೇಲ್ವರ್ಗದವರ ಕುತ್ತಿಗೆಗೂ ನೇಣಿನ ಕುಣಿಕೆ ಬಿಗಿಗೊಳಿಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ವಿದ್ಯುತ್ ಕ್ಷೇತ್ರವು ಸಂವಿಧಾನದ 7ನೇ ಶೆಡ್ಯೂಲ್‌ನಲ್ಲಿ ಸಮವರ್ತಿ ಪಟ್ಟಿಯಲ್ಲಿದೆ. ಹೀಗಾಗಿ ಯಾವುದೇ ತಿದ್ದುಪಡಿ ತರಬೇಕಾದರೆ ರಾಜ್ಯಗಳ ಸಹಮತಿ ಕುರಿತು ಶಾಸನಸಭೆಗಳಲ್ಲಿ ಚರ್ಚೆ ನಡೆಯಬೇಕು. ಆದರೆ ಕೇಂದ್ರ ಸರ್ಕಾರ ಒಕ್ಕೂಟ ತತ್ವಕ್ಕೆ ವಿರುದ್ಧವಾಗಿ ರಾಜ್ಯ ಸರ್ಕಾರಗಳಿಗೆ ಯಾವ ಮನ್ನಣೆಯನ್ನೂ ನೀಡದೆ ತಿದ್ದುಪಡಿ ಮಾಡಲು ಹೊರಟಿದೆ.
Chikkamagaluru: ರಾಷ್ಟ್ರಧ್ವಜಕ್ಕೆ ಅಪಮಾನ: ಮಾಜಿ ಸಿಎಂ ಸಿದ್ದು ವಿರುದ್ಧ ದೂರು
ದೇಶವನ್ನು ಕೊರೋನಾ ರೋಗವು ಬಾಧಿಸುತ್ತಿದ್ದಾಗ ಕರಡನ್ನು ಬಿಡುಗಡೆ ಮಾಡಿದ ಮೋದಿ ಸರ್ಕಾರ ಈಗ ಏಕಾಏಕಿ ಕಾಯ್ದೆಯನ್ನು ಸಂಸತ್ತಿನ ಮುಂದೆ ಮಂಡಿಸಿದೆ’ ಎಂದು ಕಿಡಿಕಾರಿದ್ದಾರೆ. ‘ಜನರ ಕೈಗೆ ಪಾಲಿಸ್ಟರ್ ಧ್ವಜಗಳನ್ನು ಕೊಟ್ಟು ಅಂಬಾನಿ, ಅದಾನಿ ಮುಂತಾದವರ ಕೈಗೆ ಚಿನ್ನದ ಖಜಾನೆಗಳನ್ನೆ ಕೊಡಲು ಬಿಜೆಪಿ ಸರ್ಕಾರ ಹೊರಟಿದೆ. ಹಿಂದಿನ ಸರ್ಕಾರಗಳು ಮತ್ತು ದೇಶದ ಜನ ಕಳೆದ 75 ವರ್ಷಗಳಿಂದ ಕಷ್ಟಪಟ್ಟು ನಿರ್ಮಿಸಿದ್ದ ಬಹುಪಾಲು ಸಂಪತ್ತನ್ನು ಅದಾನಿ, ಅಂಬಾನಿ, ಟಾಟಾ, ವೇದಾಂತ ಮುಂತಾದ ಕೆಲವೆ ಕೆಲವು ಜನರ ಕೈಗೆ ಕೊಟ್ಟು ಸಂಭ್ರಮಿಸುತ್ತಿರುವ ಮೋದಿಯವರ ಸರ್ಕಾರ ಈಗ ವಿದ್ಯುತ್ ಕ್ಷೇತ್ರವನ್ನೂ ಹರಾಜಿಗಿಟ್ಟಿದೆ’ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿಜೆಪಿಯವರು ತ್ರಿವರ್ಣಧ್ವಜಕ್ಕೆ ಗೌರವ ಕೊಡುವವರಲ್ಲ: ಸಿದ್ದರಾಮಯ್ಯ
ಕಾರು ಹತ್ತುವ ವೇಳೆ ಕುಸಿದ ಸಿದ್ದರಾಮಯ್ಯ: ನಗರದ ಖಾಸಗಿ ಆಸ್ಪತ್ರೆಗೆ ಬಳಿ ಕಾರು ಹತ್ತುವ ಸಂದರ್ಭದಲ್ಲಿ ಕಾಲು ಜಾರಿ ಕುಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಮೇಲೆದ್ದು ಸಾವರಿಸಿಕೊಂಡ ಘಟನೆ ಬುಧವಾರ ನಡೆದಿದೆ. ಸಿದ್ದರಾಮೋತ್ಸವಕ್ಕೆ ತೆರಳುವ ವೇಳೆ ಅಭಿಮಾನಿಗಳ ವಾಹನ ಅಪಘಾತಕ್ಕೀಡಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಇದರಿಂದ ಅವರ ಆರೋಗ್ಯ ವಿಚಾರಿಸಿ ಮರಳುವ ಸಂದರ್ಭದಲ್ಲಿ ಕಾರಿನ ಬಾಗಿಲು ಬಳಿ ಹತ್ತಿ ನಿಂತು ಅಭಿಮಾನಿಗಳತ್ತ ಕೈಬೀಸುವ ಸಂದರ್ಭದಲ್ಲಿ ಸಿದ್ದರಾಮಯ್ಯ ಕಾಲುಜಾರಿ ಕುಸಿದು ಬಿದ್ದಿದ್ದರು. ನಂತರ ಕಾರ್ ಬಾಗಿಲಲ್ಲಿ ಸಿಲುಕಿದ್ದ ಪಂಚೆಯನ್ನು ಅಂಗರಕ್ಷಕರು ಬಿಡಿಸಿದ ನಂತರ ಮತ್ತೆ ಸಿದ್ದರಾಮಯ್ಯ ಸಾವರಿಸಿಕೊಂಡು ಎಲ್ಲ ಅಭಿಮಾನಿಗಳಿಗೂ ನಮಸ್ಕರಿಸಿ ಮುಂದಿನ ಪ್ರಯಾಣ ಬೆಳೆಸಿದರು.