ಬೆಂಗಳೂರು (ಸೆ.22) : ಕೊರೋನಾ ಸೋಂಕು ಯಾರಿಗೂ ಬರೋದು ಬೇಡ. ಮಾನಸಿಕವಾಗಿ ಕೊರೋನಾ ಮಾನವನನ್ನು ಕುಗ್ಗಿಸುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಆತಂಕ ಹೊರಹಾಕಿದರು. 

ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಸಿದ್ದರಾಮಯ್ಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ತಪ್ಪು ಮಾಹಿತಿ ನೀಡಬೇಡಿ ಎಂದರು.

ವಿಧಾನಸೌಧದಲ್ಲಿ ಬಿಜೆಪಿ ಶಾಸಕ-ಸಚಿವರ ಗಲಾಟೆ: ಬುದ್ಧಿವಾದ ಹೇಳಿದ ಸಿದ್ದರಾಮಯ್ಯ ..

ಇನ್ನು ಸಾವಿನ ಪ್ರಮಾಣವನ್ನುರಾಜ್ಯದಲ್ಲಿ ಶೇ.1ಕ್ಕಿಂತ ಕಡಿಮೆ ಮಾಡುವುದೇ ನಮ್ಮ ಗುರಿ ಎಂದು ಸಚಿವ ಸುಧಾಕರ್ ಹೇಳಿದರು.

ಇನ್ನು ಇದೇ ವೇಳೆ ಮಧ್ಯ ಪ್ರವೇಶಿದ ಕಾಂಗ್ರೆಸ್ ಮುಖಂಡ ಈಶ್ವರ್ ಖಂಡ್ರೆ  ಸಾವಿನ ಪ್ರಮಾಣ ಹೆಚ್ಚಾಗಿರುವ ಸ್ಪಷ್ಟ ಅಂಕಿ ಅಂಶಗಳನ್ನು ವಿಪಕ್ಷ ನಾಯಕರು ನೀಡಿದ್ದಾರೆ ಎಂದರು.