ಬೆಂಗಳೂರು, (ಅ.20): ಯಡಿಯೂರಪ್ಪ ಹೆಚ್ಚು ದಿನ ಸಿಎಂ ಸ್ಥಾನದಲ್ಲಿ ಮುಂದುವರೆಯುವುದಿಲ್ಲ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ಇದು ಆರ್.ಎಸ್.ಎಸ್. ನವರ ಹುನ್ನಾರ ಎಂದು ಹೇಳಿದ್ದಾರೆ.

ಯತ್ನಾಳ್ ಹೇಳಿಕೆ ಹಿಂದೆ ಆರ್.ಎಸ್.ಎಸ್ ಮುಖಂಡರ ಕೈವಾಡವಿದೆ. ಬಿ.ಎಸ್.ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಬಿಜೆಪಿಯಲ್ಲಿಯೇ ತಂತ್ರ ಹೆಣೆಯಲಾಗುತ್ತಿದೆ. ಆರ್.ಎಸ್.ಎಸ್. ನಾಯಕರು ಈ ನಿಟ್ಟಿನಲ್ಲಿ ಷಡ್ಯಂತ್ರ ರೂಪಿಸಿದ್ದು, ಯತ್ನಾಳ್ ಅವರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

'ಯಡಿಯೂರಪ್ಪನವರನ್ನು ಕೆಳಗಿಳಿಸೋ ಬಗ್ಗೆ ಚಚೆ೯ ನಡೀತಾ ಇರೋದು ನಿಜ'

ಯಡಿಯೂರಪ್ಪನವರು ಹೆಚ್ಚು ದಿನ ಸಿಎಂ ಸ್ಥಾನದಲ್ಲಿ ಇರುವುದಿಲ್ಲ. ಉತ್ತರ ಕರ್ನಾಟಕದವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಕೂಡ ಭರವಸೆ ನೀಡಿದ್ದಾರೆ ಎಂದು ಶಾಸಕ ಯತ್ನಾಳ್ ಹೇಳಿಕೆ ನೀಡಿದ್ದು, ಬಿಜೆಪಿ ಶಾಸಕನ ಈ ಹೇಳಿಕೆ ಇದೀಗ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.