ಕಾಂಗ್ರೆಸ್‌ನ ಪ್ರಮುಖ ನಾಯಕರೊಬ್ಬರು ಬಿಜೆಪಿಗೆ ಬರ್ತಾರೆ: ಹೊಸ ಬಾಂಬ್‌ ಸಿಡಿಸಿದ ಯತ್ನಾಳ್‌

*  ಸಿದ್ದರಾಮಯ್ಯ ಕಾಂಗ್ರೆಸ್ ಬಿಟ್ಟು ಹೊರ ಬರೋದು ಪಿಕ್ಸ್ 
*  ಡಿಕೆಶಿ-ಸಿದ್ದರಾಮಯ್ಯ ನಡುವೆ ಜಗಳ ಇದೆ
*  ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಭವಿಷ್ಯ ಅಂಧಕಾರದಲ್ಲಿದೆ 
 

Congress Leader Will Be Join BJP Says Basanagouda Patil Yatnal grg

ವಿಜಯಪುರ(ಜ.30):  ಕಾಂಗ್ರೆಸ್‌‌ನ(Congress) ಪ್ರಮುಖ ಇಬ್ಬರು ನಾಯಕರಲ್ಲಿ ಒಬ್ಬರು ಬಿಜೆಪಿಗೆ(BJP) ಬರುತ್ತಾರೆ ಅಂತ ಹೇಳುವ ಮೂಲಕ ವಿಜಯಪುರ(Vijayapura) ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌(Basanagouda Patil Yatnal) ಹೊಸ ಬಾಂಬ್‌ವೊಂದನ್ನ ಸಿಡಿಸಿದ್ದಾರೆ. 

ಇಂದು(ಭಾನುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಇಬ್ಬರಲ್ಲಿ ಒಬ್ಬರು ಬಿಜೆಪಿಗೆ ಬರುತ್ತಾರೆ. ಸಿದ್ದರಾಮಯ್ಯ(Siddaramaiah) ಕಾಂಗ್ರೆಸ್ ಬಿಟ್ಟು ಹೊರ ಬರೋದು ಪಿಕ್ಸ್ ಆಗಿದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಜಗಳ ಇದೆ. ಅವರಲ್ಲಿ ಒಬ್ಬರು ಬಿಜೆಪಿಗೆ ಬಂದರೇ ಅಚ್ಚರಿ ಪಡಬೇಕಿಲ್ಲ ಅಂತ ಸ್ಫೋಟಕ ಹೇಳಿಕೆ ನೀಡಿದ್ದಾರೆ. 

ಬಿಜೆಪಿ, ಜೆಡಿಎಸ್ ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿ, ಯತ್ನಾಳ್ ಮಾತು ಪುಷ್ಠೀಕರಿಸಿದ ಸಿದ್ದು

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಭವಿಷ್ಯ ಅಂಧಕಾರದಲ್ಲಿದೆ. ಡಿಕೆಶಿ ಪಾದಯಾತ್ರೆ ನೀರಿಗಾಗಿ ಅಲ್ಲ. ಸಿದ್ದರಾಮಯ್ಯರನ್ನ ಮುಗಿಸೋಕೆ ಡಿಕೆಶಿ ಪಾದಯಾತ್ರೆ(Padayatra) ಮಾಡಿದ್ದಾರೆ. "ಮೇಕೆ ದಾಟಲಿಲ್ಲ.. ಯಾಕಂದ್ರೆ ಅಲ್ಲಿ ಟಗರಿತ್ತು" ಟಗರಿನಿಂದ ಮೇಕೆದಾಟಲು ಆಗಲಿಲ್ಲ ಅಂತ ಸಿದ್ದರಾಮಯ್ಯ ವಿರುದ್ಧ ಬಸನಗೌಡ ಪಾಟೀಲ್‌ ಯತ್ನಾಳ್‌ ಲೇವಡಿ ಮಾಡಿದ್ದಾರೆ. 

ಸಿದ್ದರಾಮಯ್ಯ ಪಕ್ಷ ಬಿಟ್ಟು ಹೊರಗೆ ಬರಲಿದ್ದಾರೆ. ಪಕ್ಷ ಬಿಟ್ಟು ಬಿಜೆಪಿಗೆ ಬರ್ತಾರೋ? ಏನ್ ಮಾಡ್ತಾರೋ ಗೊತ್ತಿಲ್ಲ. ಸದ್ಯ ಸಿದ್ದರಾಮಯ್ಯ ಡೋಲಾಯಮಾನ ಪರಿಸ್ಥಿತಿಯಲ್ಲಿದ್ದಾರೆ ಅಂತ ಹೇಳಿದ್ದಾರೆ.  ಸಿದ್ದರಾಮಯ್ಯ ಒಬ್ಬ ಹಿರಿಯ ನಾಯಕರಾಗಿದ್ದಾರೆ. ಕಾಂಗ್ರೆಸ್‌ನಲ್ಲಿ ಅವರು ಕೊನೆಯ ದಿನಗಳನ್ನ ಎಣಿಸುತ್ತಿದ್ದಾರೆ. ಸಿದ್ದರಾಮಯ್ಯರನ್ನ ಬಿಜೆಪಿಗೆ ತೆಗೆದುಕೊಳ್ಳೋದು ಬಿಡೋದು ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದೆ. ಪಕ್ಷದ ರಾಷ್ಟ್ರೀಯ ನಾಯಕರು, ಪ್ರಧಾನಿ ನಿರ್ಣಯ ಮಾಡ್ತಾರೆ ಅಂತ ತಿಳಿಸಿದ್ದಾರೆ. 

ಡಿಕೆಶಿ ಜೊತೆಗೆ ಮಾಜಿ ಡಿಸಿಎಂ ಹಾಗೂ ಬಿಜೆಪಿ(BJP) ನಾಯಕ ಲಕ್ಷ್ಮಣ ಸವದಿ(Laxman Savadi) ಒಳ ಒಪ್ಪಂದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು, ಯಾರೂ ಹಾಗಿಲ್ಲ, ಲಕ್ಷ್ಮಣ ಸವದಿ ಒಳ್ಳೆಯವರು. ಅವರು ಆ ರೀತಿ ಮಾಡೋದು ಸಾಧ್ಯವೇ ಇಲ್ಲ. ಸವದಿ ಇಷ್ಟು ಕೆಳಮಟ್ಟಕ್ಕೆ ಇಳಿಯುವ ರಾಜಕಾರಣಿ ಅಲ್ಲ. ಲಕ್ಷ್ಮಣ ಸವದಿಯವರು ಸೋತರು ಅವರನ್ನ ವಿಧಾನ ಪರಿಷತ್‌‌ಗೆ ಆಯ್ಕೆ ಮಾಡಿ ಡಿಸಿಎಂ ಮಾಡಲಾಗಿತ್ತು. ಪಕ್ಷದ ಋಣ ಅವರ ಮೇಲೆ ಬಹಳ ಇದೆ. ಅವರು ಎಲ್ಲೂ ಹೋಗಲ್ಲ. ಚುನಾವಣೆ ಪರ್ವ ಇದೆಯಲ್ಲ ಈ ರೀತಿಯ ಸಂಶಯ, ಅಪಪ್ರಚಾರ, ಗಾಸಿಪ್‌ಗಳೆಲ್ಲ ನಡೆಯುತ್ತಿರುತ್ತವೆ ಅಂತ ಹೇಳಿದ್ದಾರೆ. 

ವಿಜಯೇಂದ್ರಗೆ ಸೂಕ್ತ ಸ್ಥಾನಮಾನ ನೀಡುವ ಬಗ್ಗೆ ಯತ್ನಾಳ್ ವ್ಯಂಗ್ಯ

ವಿಜಯಪುರ: ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ(BS Yediyurappa) ಅವರ ಪುತ್ರ ಬಿ.ವೈ.ವಿಜಯೇಂದ್ರಗೆ (BY Vijayendra) ಪಕ್ಷ ಹಾಗೂ ಸರ್ಕಾರದಲ್ಲಿ ಸ್ಥಾನಮಾನ ನೀಡುವ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವ್ಯಂಗ್ಯವಾಡಿದ್ದಾರೆ. 

ಜ.27 ರಂದು ನಗರದಲ್ಲಿ ಮಾತನಾಡಿದ್ದ ಅವರು, ಅಧಿಕಾರ ಸಿಗುತ್ತದೆ ಎಂಬ ಆಸೆಯೊಂದಿಗೆ ಯಾರೆಲ್ಲಾ ಕೋಟ್ ಹೊಲಿಸಿಕೊಂಡಿದ್ದಾರೋ ಗೊತ್ತಿಲ್ಲ. ಬಿಜೆಪಿಯಿಂದ (BJP) ಬಹಳ ಜನ ಹೋಗ್ತಾರೆ ಎಂಬ ಮಾತು ಕೇಳಿಬಂದಿದ್ದು ಒಳ್ಳೇದಾಯ್ತು. ಸಚಿವ ಸೋಮಶೇಖರ್ ಸೇರಿ ಹಲವರು ಪಕ್ಷ ಬಿಡುವುದಿಲ್ಲ, ಮಾಧ್ಯಮಗಳು ಅದೇ ಹೇಳಿಕೆಯನ್ನು ತೋರಿಸಿ, ಪಕ್ಷವನ್ನು ಗಟ್ಟಿ ಮಾಡುತ್ತಿವೆ ಎಂದಿದ್ದರು.

Karnataka Politics ಬಿಜೆಪಿಯಲ್ಲಿ ಸಂಚಲನ ಮೂಡಿಸಿದ ಯತ್ನಾಳ್‌ ಕೊಟ್ಟ ಸುಳಿವು

ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಅನಿವಾರ್ಯ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮಗೆ ಯಾರೂ ಅನಿವಾರ್ಯ ಅಲ್ಲ. ಬಿಜೆಪಿ ಮತ್ತೆ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತದೆ. ಕುಮಾರಸ್ವಾಮಿ ಕುಸ್ತಿ ಇರೋದು ಡಿ.ಕೆ.ಶಿವಕುಮಾರ್ ಮೇಲೆಯೇ ಹೊರತು ನಮ್ಮ ಮೇಲೆ ಅಲ್ಲ ಎಂದು ಹೇಳಿದ್ದರು. 

ಪ್ರಸ್ತುತ ಕಾಂಗ್ರೆಸ್​ನಲ್ಲಿರುವ ಸಿ.ಎಂ.ಇಬ್ರಾಹಿಂ ಯಾವಾಗ ಏನು ಮಾತನಾಡುತ್ತಾರೋ ಗೊತ್ತಿಲ್ಲ. ಅವರದ್ದು ಮತ್ತು ಕಾಂಗ್ರೆಸ್​ನವರದ್ದು ಏನೇನಿದೆಯೋ ನನಗೆ ಗೊತ್ತಿಲ್ಲ. ಅವರು ಒಮ್ಮೆ ದೇವೇಗೌಡರನ್ನು ಅಪ್ಪ ಎನ್ನುತ್ತಾರೆ, ಇನ್ನೊಮ್ಮೆ ಸಿದ್ದರಾಮಯ್ಯ ಅವರನ್ನು ಅಣ್ಣ ಎನ್ನುತ್ತಾರೆ. ರಾಜಕೀಯದಲ್ಲಿ ಹೀಗೆ ಅಪ್ಪ-ಅಣ್ಣ ಎನ್ನುವವರು ಭಾರೀ ಡೇಂಜರ್ ಎಂದು ಟಾಂಗ್ ಕೊಟ್ಟಿದ್ದರು. 
 

Latest Videos
Follow Us:
Download App:
  • android
  • ios