ಅಲ್ಪಸಂಖ್ಯಾತರನ್ನ ಬಲಿ ಕೊಡೋದೇ ಕುಮಾರಸ್ವಾಮಿ ಟಾರ್ಗೆಟ್: ಜಮೀರ್ ಅಹಮದ್
* ಅಲ್ಪಸಂಖ್ಯಾತರ ವಿರೋಧಿ ಸಿದ್ದರಾಮಯ್ಯ ಅಲ್ಲ, ಕುಮಾರಸ್ವಾಮಿ
* ಮುಸ್ಲಿಂ ಮತಗಳಿಗಾಗಿ ಕುಮಾರಸ್ವಾಮಿ ಆರ್‌ಎಸ್‌ಎಸ್‌ಗೆ ಬೈಯುತ್ತಿದ್ದಾರೆ
* ಯಾಕೆ ಸಾರ್ವತ್ರಿಕ ಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕುವುದಿಲ್ಲ?
ವಿಜಯಪುರ(ಅ.24): ಮಾಜಿ ಸಿಎಂ ಕುಮಾರಸ್ವಾಮಿಗೆ(HD Kumaraswamy) ಒಂದೇ ಟಾರ್ಗೆಟ್ ಇದೆ. ಅಲ್ಪ ಸಂಖ್ಯಾತರನ್ನು ಬಲಿ ಕೊಡೋದು, ಅವರನ್ನು ಮುಗಿಸೋದು. ಅಲ್ಪ ಸಂಖ್ಯಾತರ ಜೊತೆ ಸಿದ್ದರಾಮಯ್ಯ ಅವರಿಗೂ ಕುಮಾರಸ್ವಾಮಿ ಟಾರ್ಗೆಟ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯ(Siddaramaiah) ಕಾಂಗ್ರೆಸ್‌ನಿಂದ(Congress) ಹೊರಹೋದರೆ ನಮ್ಮದೆ ನಡೆಯುತ್ತದೆ ಎಂದು ಕುಮಾರಸ್ವಾಮಿ ಎಂದು ಕೊಂಡಿದ್ದಾರೆ ಎಂದು ಎಚ್‌ಡಿಕೆ ವಿರುದ್ಧ ಕಾಂಗ್ರೆಸ್ ಮುಖಂಡ ಜಮೀರ್ ಅಹಮದ್ ಖಾನ್(Zameer Ahmed Khan) ವಾಗ್ದಾಳಿ ನಡೆಸಿದ್ದಾರೆ.
ಇಂದು(ಭಾನುವಾರ) ಸಿಂದಗಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಎಷ್ಟು ಜನರನ್ನು ಶಾಸಕರನ್ನಾಗಿ ಮಾಡಿದ್ದಾರೆ. ಎಷ್ಟು ಜನರನ್ನು ಮಂತ್ರಿ ಮಾಡಿದ್ದಾರೆ ಅಂತ ಎಲ್ಲರಿಗೂ ಗೊತ್ತಿದೆ. ನಾನು ಕುಮಾರಸ್ವಾಮಿ ಅವರಿಗೆ ಬಹಳ ಆತ್ಮಿಯನಾಗಿದ್ದೇ ಆದರೂ ನನಗೆ ವಕ್ಫ ಹಜ್ ಖಾತೆ ನೀಡಿದ್ದರು. ಹಾನಗಲ್‌ನಲ್ಲೂ(Hanagal) ಮುಸ್ಲಿಂ ಅಭ್ಯರ್ಥಿ ಹಾಕಿದ್ದಾರೆ. ಬಸವ ಕಲ್ಯಾಣದಲ್ಲೂ ಹೀಗೆ ಮಾಡಿದ್ದರು. ಅಲ್ಲಿ ಕುಮಾರಸ್ವಾಮಿ ಸ್ವಾಮಿ ಎಂದೂ ಬಂದಿಲ್ಲ. ದರ್ಗಾ ಪೀಠಾಧಿಕಾರಿಯಾಗಿದ್ದಿರಂದ ಮತ ಬಂದಿದ್ದವು. ಯಾಕೆ ಸಾರ್ವತ್ರಿಕ ಚುನಾವಣೆಯಲ್ಲಿ(General Election) ಮುಸ್ಲಿಂ ಅಭ್ಯರ್ಥಿ ಹಾಕುವುದಿಲ್ಲ, ಉಪ ಚುನಾವಣೆಯಲ್ಲಿ(Byelection) ಮಾತ್ರ ಯಾಕೆ ಅಭ್ಯರ್ಥಿ ಹಾಕ್ತಿರಾ ಎಂದು ಎಚ್‌ಡಿಕೆಗೆ ಜಮೀರ್ ಪ್ರಶ್ನಿಸಿದ್ದಾರೆ.
ಸಾಲ ಮನ್ನಾಕ್ಕೆ ಅಡ್ಡಗಾಲು ಹಾಕಿದ್ದೇ ಕಾಂಗ್ರೆಸ್: HDK
ಕುಮಾರಸ್ವಾಮಿಗೆ ಮುಸ್ಲಿಂ(Muslim) ಸಮುದಾಯದ ಮೇಲೆ ಬಹಳ ಪ್ರೀತಿ ಬಂದಿದೆ. ಸಿದ್ದರಾಮಯ್ಯ ಅಲ್ಪ ಸಂಖ್ಯಾತರ ವಿರೋಧಿ ಅಲ್ಲ, ಕುಮಾರಸ್ವಾಮಿ ಅಲ್ಪ ಸಂಖ್ಯಾತರ(Minorities) ವಿರೋಧಿಯಾಗಿದ್ದಾರೆ. ಚುನಾವಣೆ ಮುಸ್ಲಿಂ ಅಭ್ಯರ್ಥಿ ಹಾಕಿ ಆರ್‌ಎಸ್‌ಎಸ್‌ಗೆ(RSS) ಕುಮಾರಸ್ವಾಮಿ ಬೈಯುತ್ತಿದ್ದಾರೆ. ಮುಸ್ಲಿಂ ಮತಗಳಿಗಾಗಿ ಕುಮಾರಸ್ವಾಮಿ ಆರ್‌ಎಸ್‌ಎಸ್‌ಗೆ ಬೈಯುತ್ತಿದ್ದಾರೆ ಅಂತಿ ಕಿಡಿಕಾರಿದ್ದಾರೆ.
ಹಾನಗಲ್ ಕ್ಷೇತ್ರದಲ್ಲಿರುವ ಅಭ್ಯರ್ಥಿಗಳು:
ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು: ನಿಯಾಜ್ ಶೇಖ್ (ಜೆಡಿಎಶ್), ಶಿವರಾಜ ಸಜ್ಜನರ (ಬಿಜೆಪಿ), ಶ್ರೀನಿವಾಸ ಮಾನೆ (ಕಾಂಗ್ರೆಸ್), ಉಡಚಪ್ಪ ಉದ್ದನಕಾಲ (ಕರ್ನಾಟಕ ರಾಷ್ಟ್ರ ಸಮಿತಿ), ಫಕ್ಕೀರಗೌಡ ಶಂಕರಗೌಡ ಗಾಜಿಗೌಡ್ರ (ರೈತ ಭಾರತ ಪಕ್ಷ), ತಳವಾರ ಶಿವಕುಮಾರ (ಲೋಕಶಕ್ತಿ ಪಕ್ಷ), ಉಮೇಶ ಕೃಷ್ಣಪ್ಪ ದೈವಜ್ಞ (ಪಕ್ಷೇತರ), ಸಿದ್ದಪ್ಪ ಕಲ್ಲಪ್ಪ ಪೂಜಾರ (ಪಕ್ಷೇತರ), ಎಸ್ಎಸ್.ದೊಡ್ಡ ಲಿಂಗಣ್ಣನವರ (ಪಕ್ಷೇತರ), ಸೋಮಶೇಖರ ಮಹದೇವಪ್ಪ ಕೋತಂಬರಿ (ಪಕ್ಷೇತರ), ಹೊನ್ನಪ್ಪ ಹನುಮಂತಪ್ಪ ಅಕ್ಕಿವಳ್ಳಿ (ಪಕ್ಷೇತರ)
ಸಿಂದಗಿಯಲ್ಲಿ ಕ್ಷೇತ್ರದಲ್ಲಿರುವ ಅಭ್ಯರ್ಥಿಗಳು:
ಇನ್ನು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಆರು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಅಶೋಕ ಮನಗೊಳಿ(ಕಾಂಗ್ರೆಸ್), ರಮೇಶ್ ಬೂಸನೂರ್(ಬಿಜೆಪಿ), ನಜಿಯಾ ಅಂಗಡಿ(ಜೆಡಿಎಸ್), ಡಾ. ಸುನಿಲ್‌ಕುಮಾರ್ ಹೆಬ್ಬಿ(ಕರ್ನಾಟಕ ರಾಷ್ಟ್ರ ಸಮಿತಿ) ಹಾಗೂ ಜಿಲಾನಿ ಗುಡುಸಾಬ್‌ಮುಲ್ಲಾ, ದೀಪಿಕಾ ಎಸ್. ಪಡಸಲಗಿ ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ.
ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಅ. 30ರಂದು ಮತದಾನ ನಡೆಯಲಿದ್ದು ನ.2ರಂದು ಫಲಿತಾಂಶ ಹೊರಬೀಳಲಿದೆ.