ಕಾಂಗ್ರೆಸ್ ಮುಖಂಡರು ಚುನಾವಣೆ ಹೊತ್ತಲ್ಲಿ ಉಚಿತ ಘೋಷಣೆ ಮಾಡ್ತಾರೆ; ಎಚ್.ಡಿ.ಕುಮಾರಸ್ವಾಮಿ
ಪಂಚರತ್ನ ಯಾತ್ರೆಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದು ಅಗರಖೇಡ ಗ್ರಾಮದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರತ್ನ ಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.
ವಿಜಯಪುರ (ಜ.17) : ಪಂಚರತ್ನ ಯಾತ್ರೆಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದು ಅಗರಖೇಡ ಗ್ರಾಮದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರತ್ನ ಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.
ಇದೇ ವೇಳೆ ಕಾಂಗ್ರೆಸ್‌ನ ಗೃಹಲಕ್ಷ್ಮಿ ಯೋಜನೆ, ಉಚಿತ ವಿದ್ಯುತ್ ಘೋಷಣೆ ಪ್ರಸ್ತಾಪಿಸಿದ ಎಚ್.ಡಿ.ಕುಮಾರಸ್ವಾಮಿ, 2ಸಾವಿರ ಗೃಹಲಕ್ಷ್ಮೀ, 200 ಯುನಿಟ್ ಉಚಿತ ವಿದ್ಯುತ್ ಕೊಡೋದ್ರಿಂದ ಆರ್ಥಿಕ ಹೊರೆ ಎಷ್ಟು ಬೀಳುತ್ತೆ ಅನ್ನೋದು ವಿಚಾರ ಮಾಡಬೇಕು. ಈಗಾಗಲೇ 5ಲಕ್ಷ ಕೋಟಿ ಸಾಲದ ಹೊರೆ ಇದೆ. ಕಾಂಗ್ರೆಸ್ ಚುನಾವಣೆ ಹೊತ್ತಿನಲ್ಲಿ ಉಚಿತ ಘೋಷಣೆ ಮಾಡ್ತಾರೆ ಎಂದು ವ್ಯಂಗ್ಯ ಮಾಡಿದರು.
ಎಚ್‌ಡಿಕೆ ಸಿಎಂ ಆದ್ರೆ ರಾಜ್ಯದ ರೈತರ ಸಮಸ್ಯೆ ಇತ್ಯರ್ಥ: ಶಾಸಕ ಅನ್ನದಾನಿ
ನಾವು ಪಂಚರತ್ನ ಯೋಜನೆ ಘೋಷಿಸಿದ್ದೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆ ಪಕ್ಕ ಜಾರಿ ಮಾಡಲಿದ್ದೇವೆ. ನಮ್ಮ ಸರ್ಕಾರ ರೈತಪರ ಇರಲಿದ್ದು. ರೈತರ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಿದ್ದೇವೆ ಎಂದರು.
ಸ್ಯಾಂಟ್ರೋ ರವಿ ಕೇಸ್ ಸಿಓಡಿಗೆ ವಹಿಸಿದ ವಿಚಾರ ಪ್ರಸ್ತಾಪಿಸಿ ಕುಮಾರಸ್ವಾಮಿ ಅವರು, ಸರ್ಕಾರ ಸ್ಯಾಂಟ್ರೋ ರವಿ ಪ್ರಕರಣ ಸಿಓಡಿಗೆ ವಹಿಸಿದ್ದು ಕಣ್ಣೊರೆಸುವ ತಂತ್ರ. ಒಂದು ತಿಂಗಳೊಳಗೆ ಕೇಸ್ ಮುಚ್ಚಿ ಹಾಕ್ತಾರೆ. ಈ ಪ್ರಕರಣದಲ್ಲಿ ಘಟಾನುಘಟಿ ನಾಯಕರಿದ್ದಾರೆ ಎಂದರು.
ಕುಮಾರಸ್ವಾಮಿಗೆ ರಾಮನಗರ ಬಿಟ್ರೆ ಬೇರೇನೂ ಗೊತ್ತಿಲ್ಲ, ಮಂಡ್ಯವೇ ಅವರ ಕೂಪ ಮಂಡೂಕ: ಕೆ.ಎಸ್.ಈಶ್ವರಪ್ಪ ವ್ಯಂಗ್ಯ
ಕಾಂಗ್ರೆಸ್ ನಿಂದ ಬಿಜೆಪಿಗೆ ಹೋದ 13 ಸಚಿವರ ಸಿಡಿ ಎಲೆಕ್ಷನ್ ಮುನ್ನ ಬಿಡುಗಡೆ ಮಾಡುವ ಕುರಿತಂತೆ ಸಿಎಂ ಇಬ್ರಾಹಿಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿಡಿ ಬಗ್ಗೆ ನಾನು ಮಾತಾಡಲ್ಲ. ನಾನು ಸಿಡಿ ಇಟ್ಟುಕೊಂಡು ರಾಜಕಾರಣ ಮಾಡಲ್ಲ. ಯಾರು ಹೇಳಿದ್ದಾರೋ ಅವರನ್ನೇ ಕೇಳಿ ಎಂದರು.