ಇಂದು ರಾಜ್ಯಾದ್ಯಂತ ಏಕಕಾಲಕ್ಕೆ ಸಚಿವರ ಜನತಾದರ್ಶನ: ಸಾರ್ವಜನಿಕರ ಅಲೆದಾಟ ತಪ್ಪಿಸುವ ಕಾರ್ಯಕ್ರಮ

ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಅಹವಾಲು ಹಿಡಿದು ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಹೋಗುವುದನ್ನು ತಪ್ಪಿಸಲು ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದು, ಮೊದಲ ಜನತಾ ದರ್ಶನ ಸೆ.25 ರಂದು ಸೋಮವಾರ ಎಲ್ಲಾ ಜಿಲ್ಲೆಗಳಲ್ಲೂ ನಡೆಯಲಿದೆ.

Congress Ministers Janatadarshana today across the state gvd

ಬೆಂಗಳೂರು (ಸೆ.25): ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಅಹವಾಲು ಹಿಡಿದು ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಹೋಗುವುದನ್ನು ತಪ್ಪಿಸಲು ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದು, ಮೊದಲ ಜನತಾ ದರ್ಶನ ಸೆ.25 ರಂದು ಸೋಮವಾರ ಎಲ್ಲಾ ಜಿಲ್ಲೆಗಳಲ್ಲೂ ನಡೆಯಲಿದೆ.

ಸೆ.16 ರಂದು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್‌ ಅವರು ಎಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿಗಳಿಗೆ ಟಿಪ್ಪಣಿ ಕಳುಹಿಸಿ, ಜಿಲ್ಲಾ ಮಟ್ಟದ ಮೊದಲ ಜನತಾ ದರ್ಶನವನ್ನು ಸೆ.25ರಂದು ಏಕಕಾಲದಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಮಾಡಬೇಕು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಬಳಿಕ ಪ್ರತಿ 15 ದಿನಗಳಿಗೊಮ್ಮೆ ಜಿಲ್ಲಾಧಿಕಾರಿಗಳು ತಾಲೂಕು ಮಟ್ಟದಲ್ಲಿ ಜನತಾದರ್ಶನ ನಡೆಸಬೇಕು ಎಂದು ಸೂಚಿಸಿದ್ದರು. ಇದರಂತೆ ಸೋಮವಾರ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ನಡೆಸಲು ಸಿದ್ಧತೆ ನಡೆಸಲಾಗಿದೆ.

ಭತ್ತದ ಬೆಳೆಗೆ ಭದ್ರಾ ನೀರಿಗಾಗಿ ರೈತರ ಆಗ್ರಹ: ಇಂದು ದಾವಣಗೆರೆ ಜಿಲ್ಲೆ ಬಂದ್‌!

ಜನತಾ ದರ್ಶನದ ದಿನ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಜರಿರಬೇಕು. ಜತೆಗೆ ಸಾರ್ವಜನಿಕರಿಂದ ಸ್ವೀಕರಿಸಿದ ಅರ್ಜಿ ಅಥವಾ ಮನವಿಗಳನ್ನು ಈಗಾಗಲೇ ಚಾಲ್ತಿಯಲ್ಲಿರುವ ಸಾರ್ವಜನಿಕ ಕುಂದು ಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್‌ಎಸ್‌) ತಂತ್ರಾಂಶದಲ್ಲಿ ದಾಖಲಿಸಬೇಕು. ಅರ್ಜಿಗಳ ವಿಲೇವಾರಿಯನ್ನು ನಿರ್ವಹಣೆ ಮಾಡಿ ಸಂಬಂಧಪಟ್ಟ ಅರ್ಜಿಗಳನ್ನು ಬಹಳ ಜಾಗ್ರತೆಯಿಂದ ಹಾಗೂ ಸಹಾನುಭೂತಿಯಿಂದ ಪರಿಶೀಲಿಸಿ ನಿಗದಿತ ಕಾಲಾವಧಿ ಒಳಗೆ ನಿಯಮಾನುಸಾರ ಪರಿಹಾರ ಒದಗಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದೂ ರಜನೀಶ್‌ ಗೋಯೆಲ್‌ ತಿಳಿಸಿದ್ದಾರೆ.

ಡಿಕೇಶಿ ನೇತೃತ್ವದಲ್ಲಿ ಬೆಂಗಳೂರು ಜಿಲ್ಲೆ ಜನತಾ ದರ್ಶನ: ಬೆಂಗಳೂರು ನಗರ ಜಿಲ್ಲೆಗೆ ಸಂಬಂಧಿಸಿದ ಜನತಾ ದರ್ಶನವು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಅತ್ತಿಬೆಲೆ ಬಳಿಯ ಸುರಾನಾ ಕಾಲೇಜು ಆವರಣದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರ ಜಿಲ್ಲೆಗೆ ಸಂಬಂಧಿಸಿದ ಅಹವಾಲುಗಳನ್ನು ಸಾರ್ವಜನಿಕರು ಆನೇಕಲ್‌ ತಾಲೂಕಿನ ಅತ್ತಿಬೆಲೆ ಹೋಬಳಿಯ ಸೂರ್ಯನಗರದಲ್ಲಿರುವ ಸುರಾನಾ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿರುವ ಜನತಾದರ್ಶನದಲ್ಲಿ ಹೇಳಿಕೊಳ್ಳಬಹುದು.

ರಾಜ್ಯ ಸರ್ಕಾರಕ್ಕೆ ಹಿಂದೂ ಚಟುವಟಿಕೆ, ಕಾರ್ಯಕರ್ತರೇ ಟಾರ್ಗೆಟ್‌: ಜೋಶಿ ಕಿಡಿ

- ರಾಮಕೃಷ್ಣ ಹೆಗಡೆ ಸಿಎಂ ಆಗಿದ್ದಾಗ ರಾಜ್ಯದಲ್ಲಿ ಆರಂಭವಾಗಿತ್ತು ‘ಜನತಾದರ್ಶನ’
- ಹಲವು ಸಿಎಂಗಳಿಂದಲೂ ಈ ಕಾರ್ಯಕ್ರಮದಡಿ ಜನರಿಂದ ನೇರ ಅರ್ಜಿ ಸ್ವೀಕಾರ
- ಎಚ್‌ಡಿಕೆ ಮುಖ್ಯಮಂತ್ರಿಯಾಗಿದ್ದಾಗ ಬಹು ಜನಪ್ರಿಯವಾಗಿದ್ದ ಕಾರ್ಯಕ್ರಮ ಇದು
- ಸರ್ಕಾರಿ ಕೆಲಸ ಆಗದಿದ್ದಾಗ ಸಿಎಂ ಭೇಟಿಗೆಂದು ಬೆಂಗಳೂರಿಗೆ ದೌಡಾಯಿಸುವ ಜನ
- ಇದನ್ನು ತಪ್ಪಿಸಲು ಜಿಲ್ಲೆ ಮಟ್ಟದಲ್ಲೇ ಜನರ ಅಹವಾಲು ಆಲಿಸಲು ಸರ್ಕಾರ ನಿರ್ಧಾರ
- ಇಂದು ಏಕಕಾಲಕ್ಕೆ ರಾಜ್ಯಾದ್ಯಂತ ಸಚಿವರಿಂದ ಜಿಲ್ಲೆಗಳ ಮಟ್ಟದಲ್ಲಿ ಜನತಾ ದರ್ಶನ
- ತಿಂಗಳಿಗೊಮ್ಮೆ ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ನಡೆಸಲು ಉಸ್ತುವಾರಿ ಸಚಿವರಿಗೆ ಸೂಚನೆ
- ಪ್ರತಿ 15 ದಿನಕ್ಕೊಮ್ಮೆ ತಾಲೂಕು ಮಟ್ಟದಲ್ಲಿ ಜಿಲ್ಲಾಧಿಕಾರಿಗಳಿಂದ ಅಹವಾಲು ಆಲಿಕೆ
- ಜನರಿಂದ ಸ್ವೀಕರಿಸುವ ಅರ್ಜಿ, ಮನವಿಗಳನ್ನು ಸಾಫ್ಟ್‌ವೇರ್‌ನಲ್ಲಿ ದಾಖಲಿಸಬೇಕು
- ಅರ್ಜಿಗಳನ್ನು ಸಹಾನುಭೂತಿ, ಜಾಗ್ರತೆಯಿಂದ ಪರಿಶೀಲಿಸಲು ಸರ್ಕಾರ ನಿರ್ದೇಶನ
- ನಿಗದಿತ ಕಾಲಾವಧಿ ಒಳಗೆ ನಿಯಮಾನುಸಾರ ಪರಿಹಾರ ಒದಗಿಸುವಂತೆ ಸೂಚನೆ

Latest Videos
Follow Us:
Download App:
  • android
  • ios