Asianet Suvarna News Asianet Suvarna News

ಬಿಜೆಪಿ ಶಾಸಕರೊಬ್ಬರ ಜತೆ ಹೋಗಿ ಸಿಎಂ ಭೇಟಿಯಾದ ಕಾಂಗ್ರೆಸ್ ಶಾಸಕ ಅಖಂಡ

ಪುಲಿಕೇಶಿ‌ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಕೆ.ಜಿ.ಹಳ್ಳಿ ಗಲಭೆಯ ಬಗ್ಗೆ ವಿವರ ನೀಡಿದರು.

Congress MLA akhanda srinivas murthy meets cm BSY Over bengaluru Riot
Author
Bengaluru, First Published Aug 17, 2020, 7:56 PM IST

ಬೆಂಗಳೂರು, (ಆ.17): ನಗರದ ಡಿಜೆ ಹಲ್ಳಿ ಗಲಭೆಯಲ್ಲಿ ಮನೆ ಕಳೆದುಕೊಂಡಿರುವ ಪುಲಿಕೇಶಿ‌ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.

ಇಂದು (ಸೋಮವಾರ) ಶಾಸಕ ಅರವಿಂದ ಲಿಂಬಾವಳಿ ಜೊತೆ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಕೆ.ಜಿ.ಹಳ್ಳಿ ಗಲಭೆಯ ಬಗ್ಗೆ ವಿವರ ನೀಡಿದರು.

ಈ ಗಲಭೆ ಪ್ರಮುಖ ಕಾರಣ ಯಾರು, ಗಲಭೆ ನಡೆದ ದಿನದಿಂದ ಇಲ್ಲಿಯವರೆಗೂ ಆಗಿರುವ ಬೆಳವಣಿಗೆ, ಪ್ರಕರಣದ ಕುರಿತು ತನಿಖೆ ಬಗ್ಗೆ ಚರ್ಚೆ ಮಾಡಿದ್ದಾರೆ. ಎಸ್‍ಡಿಪಿಐ ಸಂಘಟನೆಯ ಕೈವಾಡ ಹಾಗೂ ಸ್ಥಳೀಯ ನಾಯಕರ ಆಂತರಿಕ ಭಿನ್ನಾಭಿಪ್ರಾಯ ಸೇರಿದಂತೆ ಹಲವು ವಿಷಯಗಳ ಗಳ ಬಗ್ಗೆ ಸಿಎಂಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಮುಂದೆ ಯಾವ ರೀತಿ ತನಿಖೆ ನಡೆಸಬೇಕು ಎಂಬುದರ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಗಲಭೆಕೋರರ ಹೆಡೆಮುರಿಕಟ್ಟಲು ಮುಂದಾದ ಸರ್ಕಾರ, ಬಿಎಸ್ ವೈ ಸಭೆಯ ಪ್ರಮುಖಾಂಶಗಳು!

ಬಳಿಕ ಮಾತನಾಡಿದ ಅಖಂಡ ಶ್ರೀನಿವಾಸ ಮೂರ್ತಿ‌, ಮುಖ್ಯಮಂತ್ರಿ ಬಳಿ ತಮಗೆ ಭದ್ರತೆ ಹೆಚ್ಚಳಕ್ಕೆ ಮನವಿ ಮಾಡಿದ್ದೇನೆ. ಗಲಭೆಯ ಹಿಂದೆ ಯಾರೇ ತಪ್ಪಿತಸ್ಥರಿದ್ದರೂ ಅವರನ್ನು ಬಂಧಿಸಲು ಮನವಿ ಮಾಡಿದ್ದೇನೆ ಎಂದರು. 

ಸಿಬಿಐ ತನಿಖೆ ಮಾಡಿಸುವಂತೆ ಕೇಳಿಕೊಂಡಿದ್ದೇನೆ. ಪ್ರಸ್ತುತ ನಡೆಯುತ್ತಿರುವ ತನಿಖೆ ಬಳಿಕ ಪರಿಶೀಲಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ತಮಗೆ ಸರ್ಕಾರ ಇನ್ನೂ ಪೊಲೀಸ್ ಭದ್ರತೆ ಒದಗಿಸಿಲ್ಲ. ಆದರೆ ಈಗಾಗಲೇ ತಮ್ಮ ಮನೆಗೆ ಭದ್ರತೆ ಕೊಟ್ಟಿದ್ದಾರೆ. ಆದರೆ ತಮಗೆ ಭದ್ರತೆ ನೀಡುವ ವಿಚಾರದಲ್ಲಿ ಸರ್ಕಾರ ಸ್ಪಂದಿಸಿಲ್ಲ ಎಂದು ದೂರಿದರು.

Follow Us:
Download App:
  • android
  • ios