ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್  ಅವರಿಗೆ ಕೊರೋನಾ ಸೊಂಕು ತಗುಲಿದ್ದು, ತಮಿಳುನಾಡು ಸೇರಿದಂತೆ ಇತರೆ ನಾಯರುಗಳಿಗೆ ಆತಂಕ ಮೂಡಿಸಿದೆ.

ಬೆಂಗಳೂರು, (ಸೆ.27): ಮಾಜಿ ಸಚಿವ, ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್‌ಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಭಾನುವಾರ ಕೆಪಿಸಿಸಿಯ ಮಾಜಿ ಅಧ್ಯಕ್ಷ, ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. "ಕೋವಿಡ್ ಟೆಸ್ಟ್‌ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ" ಎಂದಿದ್ದಾರೆ.

ನನ್ನ ಮಗಳಿಗೆ ಕೋವಿಡ್19 ಪಾಸಿಟಿವ್ ಇಲ್ಲ: ದಿನೇಶ್ ಗುಂಡೂರಾವ್ ಸ್ಪಷ್ಟನೆ

ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ" ಎಂದು ಅವರು ಮನವಿ ಮಾಡಿದ್ದಾರೆ.

Scroll to load tweet…

ತಮಿಳುನಾಡು ನಾಯಕರಿಗೆ ಅತಂಕ

ಹೌದು...ದಿನೇಶ್ ಗುಂಡೂರಾವ್ ಅವರಿಗೆ ಸೋಂಕು ತಗುಲಿರುವ ಬೆನ್ನಲ್ಲೇ ತಮಿಳುನಾಡು ಕಾಂಗ್ರೆಸ್ ನಾಯಕರಿಗೆ ಆತಂಕ ಮೂಡಿಸಿದೆ. ಯಾಕಂದ್ರೆ ದಿನೇಶ್ ಗುಂಡೂರಾವ್ ಅವರು ತಮಿಳುನಾಡು ಉಸ್ತುವಾರಿಯಾಗಿದ್ದರಿಂದ ಸೆಪ್ಟೆಂಬರ್ 25ರಂದು ಅವರು ಚೆನ್ನೈಗೆ ಭೇಟಿ ನೀಡಿ ಕಾಂಗ್ರೆಸ್ ಹಿರಿಯ ನಾಯಕ ರಾಜ್ಯಸಭಾ ಸದಸ್ಯ ಪಿ. ಚಿದಂಬರಂ, ಲೋಕಸಭಾ ‌ಸದಸ್ಯ ಕಾರ್ತಿಕ್ ಚಿದಂಬರಂ ಭೇಟಿ ಮಾಡಿದ್ದರು.

 ಡಿಎಂಕೆ ಮುಖ್ಯಸ್ಥ ಎಂ. ಕೆ. ಸ್ಟಾಲಿನ್ ಭೇಟಿ ಮಾಡಿದ್ದರು. ದಿನೇಶ್ ಗುಂಡೂರಾವ್ ಶನಿವಾರದ ತನಕ ವಿಧಾನಸಭೆ ಅಧಿವೇಶದಲ್ಲಿ ಪಾಲ್ಗೊಂಡಿದ್ದರು. ಇದೀಗ ಅವರ ಸಂಪರ್ಕಕ್ಕೆ ಬಂದ ನಾಯಕರಿಗೆ ಆತಂಕ ಎದುರಾಗಿದೆ