ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿರುವುದು ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ.

ಶಿವಮೊಗ್ಗ (ಜ.26) ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿರುವುದು ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಿವಮೊಗ್ಗದ ಬೆಕ್ಕಿನ ಕಲ್ಮಟದಲ್ಲಿ ಆಯೋಜಿಸಿರುವ ಗುರು ಬಸವಶ್ರೀ ಪ್ರಶಸ್ತಿ ಪ್ರಧಾನ ಹಾಗೂ ಭಾವೈಕ್ಯತ ಸಮ್ಮೇಳನದಲ್ಲಿ ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಶಾಸಕ ಶಾಮನೂರು ಶಿವಶಂಕರಪ್ಪ ಅವರು, ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿದ್ದೇನೆ. ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ. ಮುಂದೆಯೂ ಇವರನ್ನು ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯವಾಗಿದೆ. ಶಿವಮೊಗ್ಗ ಜಿಲ್ಲೆ ಇನ್ನಷ್ಟು ಅಭಿವೃದ್ಧಿಗೊಳ್ಳಬೇಕಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲಿಸುವಂತೆ ಕರೆ ನೀಡಿದರು.

ಇಲ್ಲಿ ಶಾಂತಿ ಸಂಧಾನ..ಅಲ್ಲಿ ಕ್ರಾಂತಿ ಸಂಘರ್ಷ..! ತೊಡೆ ತಟ್ಟಿದ ಹರಿಪ್ರಸಾದ್‌ಗೆ ಆಪ್ತನ ಮೂಲಕ ಟಕ್ಕರ್..!

ಬಿವೈ ರಾಘವೇಂದ್ರ ಅವರಂಥ ಲೋಕಸಭಾ ಸದಸ್ಯರನ್ನು ಪಡೆದಿರುವ ನೀವೇ ಧನ್ಯರು. ಜಿಲ್ಲೆಯಲ್ಲಿ ಆಗಬೇಕಿರುವ ಎಲ್ಲ ಕೆಲಸಗಳನ್ನು ಪೂರ್ಣ ಮಾಡಿ ಮುನ್ನಡೆಯುತ್ತಿದ್ದಾರೆ. ಜನರಿಗೆ ಅಭಿವೃದ್ಧಿ ಕೆಲಸ ಆಗಬೇಕಿರುವುದು ಮೊದಲ ಆದ್ಯತೆಯಾಗಬೇಕು. ಜನರ ಅಭಿಲಾಷೆಯಂತೆ ಕೆಲಸ ಮಾಡಿರುವ ಲೋಕಸಭಾ ಸದಸ್ಯರನ್ನು ಮುಂಬರುವ ಚುನಾವಣೆಯಲ್ಲೂ ಗೆಲ್ಲಿಸಬೇಕು ಎಂದರು.

ವೀರಶೈವ ಲಿಂಗಾಯತರಲ್ಲಿ ಅನೇಕ ಒಳ ಪಂಗಡಗಳಿವೆ. ಅವುಗಳೆಲ್ಲವೂ ದೂರವಾಗಿ ಎಲ್ಲರೂ ಒಂದೇ ಎಂಬ ಭಾವನೆ ಬರಬೇಕು ಆಗ ಮಾತ್ರ ಐಕ್ಯತೆ ಮೂಡುತ್ತದೆ ಎಂದರು.

ಶಿವಮೊಗ್ಗದ ಅಭಿವೃದ್ಧಿಗೆ ಕೇಂದ್ರ ಕೊಟ್ಟ ಅನುದಾನ ವಾಪಸಾತಿಗೆ ಪತ್ರ ಬರೆದ ರಾಜ್ಯ ಸರ್ಕಾರ!