ಯುಟಿ ಖಾದರ್‌ಗೆ ಶಾಕ್‌, 24 ವರ್ಷದಿಂದ ಜೊತೆಗಿದ್ದ ಮುಖಂಡ ಬಿಜೆಪಿ ಸೇರ್ಪಡೆ

* ಕಾಂಗ್ರೆಸ್ ತೊರೆದ ಮಾಜಿ ಸಚಿವ ಯು.ಟಿ.ಖಾದರ್ ಆಪ್ತ!
* ಯು.ಟಿ. ಖಾದರ್ ಆಪ್ತ ಸಂತೋಷ್ ಶೆಟ್ಟಿ ಬಿಜೆಪಿಗೆ ಸೇರ್ಪಡೆ
* ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ

Congress MLA UT Khader close aid santhosh shetty joins bjp in  Mangaluru rbj

ಮಂಗಳೂರು, (ಮಾ.12): ಒಂದೇ ದಿನ ಕಾಂಗ್ರೆಸ್‌ಗೆ ಶಾಕ್‌ ಮೇಲೆ ಶಾಕ್‌. ಒಂದು ಕಡೆ ಹಿರಿಯ ನಾಯಕ ಸಿಎಂ ಇಬ್ರಾಹಿಂ ಕಾಂಗ್ರೆಸ್‌ಗೆ ಅಧಿಕೃತವಾಗಿ ರಾಜೀನಾಮೆ ನೀಡಿದ್ರೆ, ಮತ್ತೊಂದೆಡೆ ಉಳ್ಳಾಲ ಶಾಸಕ ಯು.ಟಿ. ಖಾದರ್ ಆಪ್ತ ಸಂತೋಷ್ ಶೆಟ್ಟಿ ಅವರು  ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ್ದಾರೆ. 

ಹೌದು.. ಸಂತೋಷ್ ಶೆಟ್ಟಿ ಅವರು ಇಂದು(ಶನಿವಾರ) ಮಂಗಳೂರಿನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಳೆದ 24 ವರ್ಷದಿಂದ ಖಾದರ್ ಜೊತೆಗಿದ್ದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಏಕಾಏಕಿ ಬಿಜೆಪಿ ಸೇರಿರುವುದು ಖಾದರ್‌ಗೆ ಬಿಗ್ ಶಾಕ್ ಕೊಟ್ಟಿದ್ದಾರೆ.

'ದೇವೇಗೌಡ-ಎಚ್‌ಡಿಕೆ ಜೊತೆ ಚರ್ಚೆ ಫಲಪ್ರದ, ಸ್ವಾಮೀಜಿಗಳ ಜತೆ ಚರ್ಚಿಸಿ JDS ಸೇರ್ಪಡೆ ದಿನಾಂಕ ನಿಗದಿ'

ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಯು.ಟಿ.ಖಾದರ್ ವಿರುದ್ದ ಆಕ್ರೋಶ ಹೊರಹಾಕಿರುವ ಸಂತೋಷ್ ಶೆಟ್ಟಿ, ಯು.ಟಿ. ಖಾದರ್ ಓರ್ವ ಅತ್ಯಂತ ಭ್ರಷ್ಟ ರಾಜಕಾರಣಿ. ಅವರ ನಡವಳಿಕೆಯಿಂದ ನಾವು ಬೇಸತ್ತಿದ್ದೇವೆ. ಈ ಕಾರಣದಿಂದಾಗಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇವೆ ಎಂದು ಹೇಳಿದರು.

ಉಳ್ಳಾಲ ತ್ರದಲ್ಲಿ ಅಭಿವೃದ್ಧಿಯೇ ಆಗಿಲ್ಲ. ಅಲ್ಪ ಸ್ವಲ್ಪ ಅನುದಾನದ ಕಾಮಗಾರಿ ಮಾಡಿ ಫೋಸ್ ನೀಡಿದ್ದಾರೆ ಅವರಿಗೆ ದೇಶದಾದ್ಯಂತ ಮನೆಯಿದೆ, ಆದರೆ ಬಡವರಿಗೆ ಮನೆಯಿಲ್ಲ. ಅಬ್ಬಕ್ಕ ನಾಡು ಎಂದು ಹೇಳುವ ಇವರು ಮಹಿಳಾ ಕಾಲೇಜು ಮಾಡಿಲ್ಲ. ಮದುವೆ ಮುಂಜಿ, ಮಕ್ಕಳ ತೊಟ್ಟಿಲು ಹಾಕುವ ಕಾರ್ಯದಲ್ಲಿ ಭಾಗಿಯಾಗುವುದು ಬಿಟ್ಟು ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ವಿಧಾನಸಭೆ ಚುನಾವಣೆ ಇನ್ನು ಕೇವಲ ಒಂದು ವರ್ಷ ಬಾಕಿ ಇದ್ದು, ಈಗಾಗಲೇ ಕಾಂಗ್ರೆಸ್ ಚುನಾವಣೆಗೆ ಸಕಲ ಸಿದ್ಧತೆ ನಡೆಸಿದೆ. ಇದರ ಮಧ್ಯೆ ಮುಖಂಡರು ಪಕ್ಷ ತೊರೆಯುತ್ತಿರುವುದು ಕಾಂಗ್ರೆಸ್‌ಗೆ ದೊಡ್ಡ ತಲೆನೋವಾಗಿದೆ.

ಮೊನ್ನೇ ಅಷ್ಟೇ ಹೊರಬಿದ್ದ ಪಂಚರಾಜ್ಯ ಫಲಿತಾಂಶದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುಕಂಡಿದ್ದು, ಕರ್ನಾಟಕದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಇನ್ನಿಲ್ಲದ ಕಸರತ್ತು ನಡೆದಿದೆ. ಆದ್ರೆ, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ನಡುವಿನ ಮುಸುಕಿನ ಗುದ್ದಾಟ ಕಾರ್ಯಕರ್ತರಲ್ಲಿ ನಿರಾಸೆ ಮೂಡಿಸಿದೆ.

ಸಿಎಂ ಇಬ್ರಾಹಿಂ ಜೆಡಿಎಸ್‌ಗೆ
ಯೆಸ್‌...ಕಾಂಗ್ರೆಸ್‌ಗೆ ರಾಜೀನಾಮೆ  ನೀಡಿರುವ ಸಿಎಂ ಇಬ್ರಾಹಿಂ ಅವರು ಜೆಡಿಎಸ್‌ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು, ಸೇರ್ಪಡೆ ದಿನಾಂಕವೊಂದೇ ಬಾಕಿ ಇದೆ.

ಈ ಕುರಿತಂತೆ ಇಬ್ರಾಹಿಂ ಅವರು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದು, ಜೆಡಿಎಸ್‌ ಸೇರ್ಪಡೆ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಇನ್ನು ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ, ಮಾಜಿ ಪ್ರಧಾನಿ, ಜೆಡಿಎಸ್ (JDS) ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರ  ಜೊತೆ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ಜೊತೆ ಫಲಪ್ರದ ಚರ್ಚೆ ಮಾಡಿದ್ದೇನೆ. ಮಾತುಕತೆಯಿಂದ ನಾನು ಸಂತೋಷವಾಗಿದ್ದೇನೆ ಎಂದು ಹೇಳಿದರು.

ನಾಳೆ (ಭಾನುವಾರ) ನಮ್ಮ ಸಮಾಜದ ಗುರುಗಳು ಮತ್ತು ಕೆಲವು ಪೀಠಾಧಿಪತಿಗಳ ಜೊತೆ ಚರ್ಚೆ ಮಾಡುವುದು ಇದೆ. ಅವರ ಜೊತೆ ಚರ್ಚೆ ಮಾಡಿ ಮುಂದಿನ ನಡೆ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. 

ನಮ್ಮ ಸಮಾಜದ ಗುರುಗಳ ಅಪ್ಪಣೆ ಪಡೆಯಬೇಕಾಗುತ್ತದೆ. ಯಾವಾಗ ಜಾತ್ಯಾತೀತ ಜನತಾದಳ ಸೇರ್ಪಡೆ ಎಂಬ ಬಗ್ಗೆ ಇವತ್ತು ಚರ್ಚೆ ಮಾಡಿದ್ದೇವೆ. ಸುತ್ತೂರು ಶ್ರೀ ಮತ್ತು ಇತರ ಕೆಲವು ಸ್ವಾಮೀಜಿಗಳ ಜೊತೆ ಚರ್ಚೆ ಮಾಡುತ್ತೇನೆ. ಅವರ ಜೊತೆ ಎಲ್ಲಾ ಚರ್ಚೆ ಮಾಡಿದ ಬಳಿಕ ಸೇರ್ಪಡೆ ದಿನಾಂಕ ನಿಗದಿ ಮಾಡುತ್ತೇನೆ ಎಂದು ತಿಳಿಸಿದರು.

ಮಧ್ಯಾಹ್ನವಷ್ಟೇ ಕಾಂಗ್ರೆಸ್ ತೊರೆಯುವ ಬಗ್ಗೆ ಘೋಷಣೆ ಮಾಡಿದ್ದ ಇಬ್ರಾಹಿಂ ಜೆಡಿಎಸ್ ಸೇರ್ಪಡೆ ವಿಚಾರವಾಗಿ ದೇವೇಗೌಡರ ಜೊತೆ ಮಾತುಕತೆ ನಡೆಸುತ್ತೇನೆ ಎಂದಿದ್ದರು.

 

Latest Videos
Follow Us:
Download App:
  • android
  • ios