ಬೆಂಗಳೂರು, (ಜೂನ್.07): ಮಹಾಮಾರಿ ಕೊರೋನಾ ವೈರಸ್ ನಿಂದ ಗುಣಮುಖರಾಗಿ ಅಸ್ಪತ್ರೆಯಿಂದ ಮನೆಗೆ ಹಿಂದಿರುಗುತ್ತಿದ್ದ ಪಾದರಾಯನಪುರ ಜೆಡಿಎಸ್ ಕಾರ್ಪೋರೇಟರ್ ಇಮ್ರಾನ್ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ.

"

ಆಸ್ಪತ್ರೆಯಿಂದ ಮನೆಯವರೆಗೂ ಅಭಿಮಾನಿಗಳು ಅದ್ಧೂರಿ ಮೆರವಣಿಗೆ, ರೋಡ್ ಶೋ ನಡೆಸಿದ್ದಕ್ಕೆ ಪೊಲೀಸರು ವಶಕ್ಕೆ ಪಡೆದು, ಕ್ವಾರಂಟೈನ್‌ಗೆ ಒಳಪಡಿಸಿದ್ದಾರೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಟ್ವೀಟ್ ಮಾಡಿ ಸೂಕ್ತ ಕ್ರಮಕೈಗೊಳ್ಳಿ ಎಂದಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ಇಮ್ರಾನ್ ಪಾಷಾ ಅರೆಸ್ಟ್: ಪಾದರಾಯನಪುರದಲ್ಲಿ 144 ಸೆಕ್ಷನ್
 

ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಕೊರೋನಾದಿಂದ ಗುಣಮುಖರಾಗಿ ಬಂದಿದ್ದು ನನಗೂ ಸಂತೋಷವಾಗಿತ್ತು, 
ಆದರೆ ಈ ರೀತಿ ಯುದ್ಧ ಗೆದ್ದು ಬಂದವರಂತೆ ಮೆರವಣಿಗೆ ಮೂಲಕ ಬಂದಿದ್ದನ್ನು ನಾನು ಖಂಡಿಸುತ್ತೇನೆ. ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿ.

 

ರಾಜ್ಯಕ್ಕೆ ರಾಜ್ಯವೇ ಕೊರೋನಾದಿಂದ ಕಂಗಾಲಾಗಿದೆ, ಇಂತಹ ಸಂದಿಗ್ಧ ಸಮಯದಲ್ಲಿ ಜನರನ್ನು ಗುಂಪುಗೂಡಿಸಿ ಮೆರವಣಿಗೆ ಮಾಡುವುದು ಬೇಜವಾಬ್ದಾರಿಯ ನಡವಳಿಕೆಯಾಗುತ್ತದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜನರಿಗೆ ತಿಳಿಹೇಳಬೇಕಾದವರೆ ಈ ರೀತಿ ವರ್ತಿಸಿದರೆ ಹೇಗೆ? ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದಾಗ ಪಾದರಾಯನಪುರ ಪುಂಡರ ಬೆನ್ನಿಗೆ ನಿಂತಿದ್ದು,ಇದೇ ಇಮ್ರಾನ್ ಪಾಷಾ ಹಾಗೂ ಜಮೀರ್ ಅಹ್ಮದ್ ಖಾನ್.