ಬೆಂಗಳೂರು, (ಆ.25): ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಕೊರೋನಾದಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಹೌದು...ಆಗಸ್ಟ್ 18ರಂದು ಜಮೀರ್ ಅಹ್ಮದ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದರಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಜಮೀರ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ವೈದ್ಯರ ಸಲಹೆ ಮೇರೆಗೆ 10 ಹೋಂ ಕ್ವಾರಂಟೈನ್‌ನಲ್ಲಿರಲಿದ್ದಾರೆ.  

ಶಾಸಕ ಜಮೀರ್ ಅಹ್ಮದ್‌ ಖಾನ್‌ಗೆ ಕೊರೋನಾ: ಆಸ್ಪತ್ರೆಗೆ ದಾಖಲು

ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಸ್ಪಷ್ಟಡಿಸಿದ್ದು, ಇಂದು ಕೊರೋನಾ ಸೋಂಕಿನಿಂದ ಗುಣಮುಖನಾಗಿ ಮನೆಗೆ ಮರಳುತ್ತಿದ್ದೇನೆ. ವೈದ್ಯರ ಸಲಹೆಯ ಮೇರೆಗೆ ಮುಂದಿನ 10 ದಿನಗಳ ಕಾಲ ನಾನು ಹೋಮ್ ಕ್ವಾರೆಂಟೈನ್‌ನಲ್ಲಿ ಇರಲಿದ್ದು, ನಂತರದಲ್ಲಿ ಸಕ್ರಿಯ ಜನಸೇವೆಗೆ ಮರಳಲಿದ್ದೇನೆ. ಈ ವರೆಗೆ ಅತ್ಯಂತ ಕಾಳಜಿಯಿಂದ ನನಗೆ ಚಿಕಿತ್ಸೆ ನೀಡಿದ ವಿಕ್ರಂ ಆಸ್ಪತ್ರೆಯ ಎಲ್ಲಾ ವೈದ್ಯಕೀಯ ಸಿಬ್ಬಂದಿಗಳಿಗೆ ಧನ್ಯವಾದಗಳು ತಿಳಿಸಿದ್ದಾರೆ.

ಸಿದ್ದು-ದೇವೇಗೌಡ್ರಿಗೆ ಥ್ಯಾಂಕ್ಸ್
ನಾನು ಆಸ್ಪತ್ರೆಗೆ ದಾಖಲಾದ ದಿನವೇ ಕರೆ ಮಾಡಿ, ನನಗೆ ಧೈರ್ಯ ತುಂಬಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ ಆತ್ಮೀಯರು, ನಮ್ಮ ಪಕ್ಷದ ಹಿರಿಯ ನಾಯಕರೂ ಆದ ಸಿದ್ದರಾಮಯ್ಯ ಅವರಿಗೂ ಹಾಗೂ ಮಾಜಿ ಪ್ರಧಾನಿಗಳಾದ  ಎಚ್‌ಡಿ ದೇವೇಗೌಡರಿಗೆ ಅವರಿಗೂ ಧನ್ಯವಾದಗಳು. ತಮ್ಮ ಪ್ರೀತಿ ಮತ್ತು ಕಾಳಜಿಗೆ ನಾನು ಆಭಾರಿ ಎಂದು ಟ್ವೀಟ್ ಮಾಡಿದ್ದಾರೆ.