ಸಾಮಾನ್ಯ ಜನರ ಬಳಿಕ ಕೊರೋನಾ ಸೋಂಕು ಇದೀಗ ಜನಪ್ರತಿನಿಧಿಗಳ ಬೆನ್ನ ಹತ್ತಿದೆ. ಬಹಳಷ್ಟು ಜನಪ್ರತಿನಿಧಿಗಳು ಸೋಂಕಿನ ಭೀತಿ ಎದುರಿಸುತ್ತಿದ್ದಾರೆ.

ಬೆಂಗಳೂರು, (ಏ.22): ನಗರದ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ಗೆ ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ. 

ಈ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಹೇಳಿಕೊಂಡಿದ್ದು, ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್‌ ಆಗಿದ್ದಾರೆ.

ಶಾಸಕ ಜಮೀರ್ ಅಹ್ಮದ್‌ ಖಾನ್‌ಗೆ ಕೊರೋನಾ: ಆಸ್ಪತ್ರೆಗೆ ದಾಖಲು

,ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಕಾರಣ ನಿನ್ನೆ (ಬುಧವಾರ) ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಪಾಸಿಟಿವ್‌ ಬಂದಿದೆ. ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್‌ನಲ್ಲಿ ಇದ್ದೇನೆ ಎಂದಿದ್ದಾರೆ.

ಜಮೀರ್‌ ಅಹ್ಮದ್‌ ಖಾನ್‌ಗೆ ಕೊರೋನಾ ಪಾಸಿಟಿವ್ ಬಂದಿರುವುದು ಇದು ಎರಡನೇ ಬಾರಿ. ಈ ಹಿಂದೆ ಮೊದಲನೇ ಅಲೆ ಸಂದರ್ಭದಲ್ಲೂ ಕೊರೋನಾ ಸೋಂಕು ತಗುಲಿದ್ದನ್ನು ಇಲ್ಲಿ ಸ್ಮರಿಸಬಹುದು.