ಬೆಂಗಳೂರು, (ಜೂನ್.02): ಅನಾರೋಗ್ಯ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನ ಜಮೀರ್ ಅಹ್ಮದ್ ಖಾನ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಬಳಿಕ ಸಿದ್ದರಾಮಯ್ಯನವರ ಆರೋಗ್ಯದ ಬಗ್ಗೆ ಟ್ವೀಟ್ ಮಾಡಿರುವ ಜಮೀರ್​, ಆರೋಗ್ಯದ ಬಗ್ಗೆ ಯಾರೂ ಕೂಡ ಚಿಂತಿತರಾಗಬೇಕಾದ ಅಗತ್ಯವಿಲ್ಲ. ಇನ್ನೆರಡು ದಿನಗಳಲ್ಲಿ ಸಿದ್ದರಾಮಯ್ಯನವರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಲಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಸಿದ್ದರಾಮಯ್ಯಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ತೀವ್ರ ಜ್ವರ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ನಿನ್ನೆ (ಮಂಗಳವಾರ) ಮಣಿಪಾಲ್ ಆಸ್ಪತ್ರೆಗೆ ದಾಖಲಾದರು. ಕೊರೋನಾ ನೆಗೆಟಿವ್ ಅಂತ ಬಂದಿದೆ. ಇನ್ನು ಸಿಟಿ ಸ್ಕ್ಯಾನ್‌ನಲ್ಲೂ ಸಹ ನಾರ್ಮಲ್ ಇದೆ. ಇದರಿಂದ ಸಿದ್ದರಾಮಯ್ಯನವರು ನಿರಾಳರಾಗಿದ್ದಾರೆ.