ಶಾಸಕರ ಬಗ್ಗೆ ಸಚಿವರು ತೋರುತ್ತಿರುವ ನಿರ್ಲಕ್ಷ್ಯ ಧೋರಣೆ ಮುಂದುವರಿದಿದೆ. ನಮ್ಮ ಮನವಿ, ಅಹವಾಲುಗಳನ್ನು ಸಚಿವರು ಪರಿಗಣಿಸುತ್ತಿಲ್ಲ ಎಂದು ಸೋಮವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲೂ ವಿವಿಧ ಶಾಸಕರು ಮುಖ್ಯಮಂತ್ರಿಯವರ ಮುಂದೆ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. 

ಬೆಂಗಳೂರು (ಮಾ.11): ಶಾಸಕರ ಬಗ್ಗೆ ಸಚಿವರು ತೋರುತ್ತಿರುವ ನಿರ್ಲಕ್ಷ್ಯ ಧೋರಣೆ ಮುಂದುವರಿದಿದೆ. ನಮ್ಮ ಮನವಿ, ಅಹವಾಲುಗಳನ್ನು ಸಚಿವರು ಪರಿಗಣಿಸುತ್ತಿಲ್ಲ ಎಂದು ಸೋಮವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲೂ ವಿವಿಧ ಶಾಸಕರು ಮುಖ್ಯಮಂತ್ರಿಯವರ ಮುಂದೆ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿದ್ದರೂ ಕೆಲವು ಸಚಿವರು ತಮ್ಮ ಕಚೇರಿಗೆ ಬಂದ ಶಾಸಕರನ್ನು ಗುರುತಿಸುವ ಕೆಲಸವನ್ನೂ ಮಾಡುತ್ತಿಲ್ಲ. ನಮ್ಮ ಮನವಿ, ಅಹವಾಲುಗಳಿಗೆ ಆಯಿತು, ನೋಡೋಣ, ಮಾಡೋಣ ಎನ್ನುವ ಹಾರಿಕೆ ಉತ್ತರ ನೀಡಿ ಕಳುಹಿಸುತ್ತಾರೆ. ಮತ್ತೆ ನಾವು ಆ ಬಗ್ಗೆ ಕೇಳಿದರೂ ಯಾವುದೇ ಪ್ರಯೋಜನ ಆಗುತ್ತಿಲ್ಲ ಎಂದು ದೂರಿದರು ಎಂದು ತಿಳಿದು ಬಂದಿದೆ. ಲೋಕೋಪಯೋಗಿ ಇಲಾಖೆ ಸೇರಿದಂತೆ ಇನ್ನು ಕೆಲವು ಇಲಾಖೆಗಳ ಸಚಿವರಂತೂ ಪ್ರತಿಪಕ್ಷದವರಿಗೆ ನೀಡುವಷ್ಟು ಮಾನ್ಯತೆಯನ್ನೂ ಸ್ವಪಕ್ಷೀಯ ಶಾಸಕರಿಗೆ ನೀಡುತ್ತಿಲ್ಲ ಎಂದು ದೂರಿದ್ದಾರೆ.

ವರ್ಗಾವಣೆಗೆ ಕೌನ್ಸೆಲಿಂಗ್‌ ಪದ್ಧತಿ ಬೇಡ: ಕಂದಾಯ ಇಲಾಖೆಯ ಪಿಡಿಒ ಮತ್ತು ಉಪನೋಂದಣಾಧಿಕಾರಿಗಳ ವರ್ಗಾವಣೆಯ ಕೌನ್ಸೆಲಿಂಗ್‌ ಸಮರ್ಪಕವಾಗಿ ನಡೆಯುತ್ತಿಲ್ಲ. ಹಾಗಾಗಿ, ಕೌನ್ಸೆಲಿಂಗ್‌ ಬದಲು ಈ ಹಿಂದೆ ಇದ್ದಂತೆ ಶಾಸಕರ ಶಿಫಾರಸ್ಸು ಆಧಾರದಲ್ಲಿ ನಡೆಸುವ ಪದ್ಧತಿ ಮರು ಜಾರಿ ಮಾಡಬೇಕೆಂದು ಸಭೆಯಲ್ಲಿ ಶಾಸಕರು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದರು.

ಕಾಂಗ್ರೆಸ್‌ನಲ್ಲೇ ಇದ್ದು ಬಿಜೆಪಿ ಪರ ಕೆಲಸ: ಕಾಂಗ್ರೆಸ್‌ನಲ್ಲೇ ಇದ್ದು ಬಿಜೆಪಿ ಪರ ಕೆಲಸ ಮಾಡುವ ನಾಯಕರು, ಕಾರ್ಯಕರ್ತರನ್ನು ಗುರುತಿಸಿ ಪ್ರತ್ಯೇಕಿಸುವ ಅಗತ್ಯವಿದೆ ಎಂದು ಹೇಳಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ಅಂಥವರ ವಿರುದ್ಧ ಪಕ್ಷದಿಂದಲೇ ಉಚ್ಚಾಟಿಸುವಂಥ ಕಠಿಣ ಕ್ರಮಕ್ಕೂ ಹೇಸಲ್ಲ ಎಂದು ಎಚ್ಚರಿಸಿದ್ದಾರೆ. ‘ಅಗತ್ಯಬಿದ್ದರೆ ಹತ್ತು ಮಂದಿಯಾದರೂ ಸರಿ, 40 ಮಂದಿಯಾದರೂ ಸರಿ ನಾವು ಅವರನ್ನು ಪಕ್ಷದಿಂದ ಹೊರಹಾಕಲು ಸಿದ್ಧ’ ಎಂದು ಹೇಳಿದ್ದಾರೆ.

₹8000 ಕೋಟಿ ಇದೆ, ಏಪ್ರಿಲ್‌ನಲ್ಲಿ ಕೊಡ್ತೀನಿ: ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಭರವಸೆ

ಎರಡು ದಿನಗಳ ಗುಜರಾತ್‌ ಭೇಟಿಯಲ್ಲಿರುವ ಅವರು ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ, ‘ನಾವು ಪಕ್ಷದ ಹಿತದೃಷ್ಟಿಯಿಂದ ಮೊದಲು ಮಾಡಬೇಕಿರುವ ಕೆಲಸವೆಂದರೆ ಅದು ಕಾಂಗ್ರೆಸ್‌ನಲ್ಲಿರುವ ಎರಡು ಗುಂಪಿನ ನಾಯಕರು ಮತ್ತು ಕಾರ್ಯಕರ್ತರನ್ನು ಪ್ರತ್ಯೇಕಿಸುವುದು. ಮೊದಲನೆಯ ಗುಂಪು ಪಕ್ಷದ ಸಿದ್ಧಾಂತ ಹೃದಯದಲ್ಲಿಟ್ಟುಕೊಂಡು ಜನರ ಜನತೆ ನಿಲ್ಲುವವರದ್ದಾದರೆ, ಇನ್ನೊಂದು ಗುಂಪು ಜನರಿಂದ ಅಂತರ ಕಾಯ್ದುಕೊಂಡವರದ್ದು. ಈ ಎರಡನೇ ಗುಂಪಲ್ಲಿ ಅರ್ಧದಷ್ಟು ಮಂದಿ ಬಿಜೆಪಿ ಜತೆ ಗುರುತಿಸಿಕೊಂಡವರೇ ಇದ್ದಾರೆ. ಕಾಂಗ್ರೆಸ್‌ನಲ್ಲಿ ಈ ಎರಡು ಗುಂಪುಗಳನ್ನು ಪ್ರತ್ಯೇಕಿಸುವ ಕೆಲಸವಾಗದೆ ಹೋದರೆ ಗುಜರಾತಿನ ಜನರಿಗೆ ಯಾವತ್ತಿಗೂ ಪಕ್ಷದ ಮೇಲೆ ನಂಬಿಕೆ ಬರುವುದಿಲ್ಲ ಎಂದರು.