Asianet Suvarna News Asianet Suvarna News

'ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ಗವರ್ನರ್‌ಗೆ ಬರಬಹುದು..' ಸಂವಿಧಾನ ರಕ್ಷಕರೆನ್ನೋ ಕಾಂಗ್ರೆಸ್‌ ಶಾಸಕನ ವಿವಾದಿತ ಮಾತು!

ಮುಖ್ಯಮಂತ್ರಿಗಳಿಗೆ ನೀಡಲಾದ ಪ್ರಾಸಿಕ್ಯೂಷನ್ ನೋಟೀಸ್ ವಾಪಸ್ ಪಡೆಯದಿದ್ದರೆ ರಾಜ್ಯಪಾಲರಿಗೆ ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ಬರಬಹುದು ಎಂದು ಐವಾನ್ ಡಿಸೋಜಾ ಎಚ್ಚರಿಸಿದ್ದಾರೆ.

Congress MLC Ivan DSouza said what happened Bangladesh PM should happen to Karnataka Governor sat
Author
First Published Aug 19, 2024, 1:37 PM IST | Last Updated Aug 19, 2024, 3:00 PM IST

ಮಂಗಳೂರು/ರಾಮನಗರ (ಆ.19): ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರನ್ನು ಕೇಂದ್ರ ವಾಪಸ್ ಕರೆಸಿಕೊಳ್ಳದಿದ್ದರೆ, ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು ಎಂದು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಸೋಮವಾರ ನಡೆಯುತ್ತಿರುವ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೆ ಬರಬಹುದು. ಕೇಂದ್ರ ಸರ್ಕಾರ ಕೂಡಲೇ ರಾಜ್ಯಪಾಲರನ್ನು ವಾಪಾಸ್ ಕರೆಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು. ಇಲ್ಲವಾದಲ್ಲಿ ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೆ ಬರಬಹುದು. ಕರ್ನಾಟಕದಲ್ಲಿಯೂ ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ಸ್ಥಿತಿ ಬರಬಹುದು ಎನ್ನುವ ಮೂಲಕ ಬಾಂಗ್ಲಾ ಪರಿಸ್ಥಿತಿಯ ಎಚ್ಚರಿಕೆ‌ಯನ್ನು ನೀಡುವ ರಾಜ್ಯದಲ್ಲಿ ಸಂವಿಧಾನ ವಿರೋಧಿ ಚಟುವಟಿಕೆಯನ್ನು ನಡೆಸಲು ಪ್ರೇರಣೆ ನೀಡಿದ್ದಾರೆ. ಈ ಮೂಲಕ ಸಂವಿಧಾನ ಪುಸ್ತಕವನ್ನು ಹಿಡಿದು ಸಂವಿಧಾನ ರಕ್ಷಣೆ ಮಾಡುತ್ತೇವೆ ಎಂದು ಹೇಳುವ ಕಾಂಗ್ರೆಸ್ ಪಕ್ಷದ ನಾಯಕರೇ ಇಂತಹ ಹೇಳಿಕೆ 

ತಪ್ಪು ಮಾಡಿದವರೇ ಪ್ರತಿಭಟನೆ ಮಾಡೋದು ಖಂಡನೀಯ; ಕೇಂದ್ರ ಸಚಿವ ವಿ. ಸೋಮಣ್ಣ

ಐವನ್ ಡಿಸೋಜಾ ಮಂಗಳೂರು ಪ್ರತಿಭಟನೆಯಲ್ಲಿ ಸಂವಿಧಾನ ವಿರೋಧಿ ಹೇಳಿಕೆ‌ ನೀಡಿದ್ದಾರೆ. ಇದರ ವಿರುದ್ದ ಸ್ವಯಂ ಪ್ರೇರಿತ ಕೇಸನ್ನ ಪೊಲೀಸರು ದಾಖಲಿಸಿಕೊಳ್ಳಬೇಕು. ಸಂವಿಧಾನ ವಿರೋಧಿ ಕೆಲಸವನ್ನ ಮಾಡಿದರೆ ತನಿಖೆ ಆಗಬೇಕು. ಮತ್ತೊಂದೆಡೆ ಆರೋಪ ಬಂದ ಮೇಲೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು.
- ಬ್ರಿಜೇಶ್ ಚೌಟ, ಸಂಸದ

ಇನ್ನು ರಾಮನಗರ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಮಾತನಾಡಿ, ರಾಜ್ಯದಲ್ಲಿ ದ್ವೇಷದ ರಾಜಕಾರಣ ಹೆಚ್ಚಾಗಿದೆ. ರಾಜ್ಯಪಾಲರು ಗವರ್ನರ್ ಕೆಲಸ ಮಾಡ್ತಿಲ್ಲ, ಗುಲಾಮರ ಕೆಲಸ ಮಾಡ್ತಿದ್ದಾರೆ. ಬಜೆಪಿ ನಾಯಕರ ಹಲವು ಕೇಸ್‌ಗಳು ರಾಜ್ಯಪಾಲರ ಮುಂದಿದೆ. ಅದರ ಬಗ್ಗೆ ಯಾಕೆ ತನಿಖೆ ಮಾಡ್ತಿಲ್ಲ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮೇಲೆ ಸಾಕಷ್ಟು ದೂರು ಬಂದಿದೆ. ಅದರ ತನಿಖೆಗೆ ಅನುಮತಿ ಕೊಡದೇ ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದೀರಿ ಎಂದು ಕಿಡಿ ಕಾರಿದ್ದಾರೆ. 

'ಸಿದ್ದರಾಮಯ್ಯಗೆ ರಾಜೀನಾಮೆ ನೀಡೋಕೆ ಹೇಳ್ತೀರಾ..' ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಪ್ರಶ್ನಿಸಿದ ಟಿಎಂಸಿ!

ರಾಜ್ಯಪಾಲರು ಭ್ರಷ್ಟಾಚಾರ ಇಲ್ಲದ ವ್ಯಕ್ತಿ ಮೇಲೆ ಷಡ್ಯಂತ್ರ ಮಾಡ್ತಿದ್ದಾರೆ. ಎಲ್ಲಾ ಧರ್ಮ, ಜಾತಿ, ಹಿಂದುಳಿದ ವರ್ಗದ ನಾಯಕರನ್ನ ವಿರುದ್ಧ ಪಿತೂರಿ ಮಾಡ್ತಿದ್ದೀರಿ. ಗವರ್ನರ್ ತಮ್ಮ ಹುದ್ದೆಯ ಬಗ್ಗೆ ಗೌರವ ಇಟ್ಟುಕೊಂಡು ಇಟ್ಟುಕೊಳ್ಳಿ. ಕೇಂದ್ರ ಸರ್ಕಾರದ ಗುಲಾಮಗಿರಿ ಕೆಲಸ ಮಾಡಬೇಡಿ. ಬಿಜೆಪಿ ನಾಯಕರು ಹಾಗೂ ಗವರ್ನರ್ ವಿರುದ್ಧ ವಾಗ್ದಾಳಿ ನಡೆಸಿದರು.

Latest Videos
Follow Us:
Download App:
  • android
  • ios