Asianet Suvarna News Asianet Suvarna News

ಸಿಬಿಐ ಬೆನ್ನಲ್ಲೇ ಕಾಂಗ್ರೆಸ್ ಸಂಸದ ಡಿಕೆ ಸುರೇಶ್‌ಗೆ ಮತ್ತೊಂದು ಶಾಕ್..!

ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿ ಶಾಕ್ ಕೊಟ್ಟ ಬೆನ್ನಲ್ಲೇ ಇದೀಗ ಸಂಸದ ಡಿಕೆ ಸುರೇಶ್‌ಗೆ ಮತ್ತೊಂದು ಶಾಕ್

congress mp dk suresh tests positive For covid19 rbj
Author
Bengaluru, First Published Oct 6, 2020, 3:59 PM IST
  • Facebook
  • Twitter
  • Whatsapp

ಬೆಂಗಳೂರು, (ಅ.06): ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರಿಗೂ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ಸಿಬಿಐ ಅಧಿಕಾರಿಗಳಿಗೂ ಆತಂಕ ಶುರುವಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣಳಲ್ಲಿ ಡಿಕೆ ಸುರೇಶ್ ಅವರೇ ಬಹಿರಂಗೊಡಿಸಿದ್ದಾರೆ.  ಕೊರೋನಾ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.

ದಾಳಿ ಮಾಡಿದ್ದ ಸಿಬಿಐ ಅಧಿಕಾರಿಗಳಿಗೆ ಥ್ಯಾಂಕ್ಸ್ ಹೇಳಿದ ಡಿಕೆ ಸುರೇಶ್, ಏನಿದು ಅಚ್ಚರಿ..?

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೇಲೆ CBI ಅಧಿಕಾರಿಗಳು ನಿನ್ನೆ (ಸೋಮವಾರ) ದಾಳಿ ನಡೆಸಿದ ಬೆನ್ನಲ್ಲೇ ಅವರ ಸಹೋದರ, ಸಂಸದ ಡಿ.ಕೆ. ಸುರೇಶ್​ರ ನಿವಾಸದ ಮೇಲೂ ದಾಳಿ ನಡೆದಿತ್ತು. ಇದೇ ವೇಳೆ ಇಬ್ಬರೂ ಸಹೋದರರ ನಿವಾಸದ ಮುಂದೆ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದರು. 

 ಮನೆಯ ಬಳಿ ಅತಿಯಾಗಿ ಜನ ಸಂದಣಿ ಇದ್ದ ಹಿನ್ನೆಲೆಯಲ್ಲಿ ಸಂಸದ ಡಿ.ಕೆ. ಸುರೇಶ್ ಕೊವಿಡ್​ ಪರೀಕ್ಷೆಗೆ ಒಳಗಾಗಿದ್ದರು. ಆದ್ರೆ, ಪರೀಕ್ಷಾ ವರದಿಯಲ್ಲಿ ಕೊರೋನಾ ಪಾಸಿಟಿವ್ ಇರುವುದು ಖಚಿತವಾಗಿದೆ.

Follow Us:
Download App:
  • android
  • ios