ವಿಧಾನಸಭಾ ಚುನಾವಣೆಗೆ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ರಿಲೀಸ್ ಮಾಡಿದೆ. ಆದ್ರೆ, ಪ್ರಮುಖ ಜಿ-23 ಸದಸ್ಯರಿಗೆ ಗೇಟ್ ಪಾಸ್ ಕೊಡಲಾಗಿದೆ.
ನವದೆಹಲಿ, (ಮಾ.13): ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗಳ ವಿಚಾರದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಕಾದಾಟ ಶುರುವಾಗಿದೆ. ಆರೋಪ-ಪ್ರತ್ಯಾರೋಪಗಳು ಮುಗಿಲುಮುಟ್ಟಿದೆ.
ಇದರ ಮಧ್ಯೆ ಕಾಂಗ್ರೆಸ್ ಬಂಗಾಳದಲ್ಲಿ ತನ್ನ ಪ್ರಚಾರವನ್ನು ದೊಡ್ಡ ಮಟ್ಟದಲ್ಲಿ ಆರಂಭಿಸಲು ಹೊರಟಿದ್ದು, 30 ಸ್ಟಾರ್ ಕಾಂಪೇನರ್ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪಶ್ಚಿಮ ಬಂಗಾಳ ಚುನಾವಣೆ, ಬಿಜೆಪಿಗೆ ಬಿಗ್ ಶಾಕ್!
ಕಾಂಗ್ರೆಸ್ ಪ್ರಚಾರಕರ್ತರ ಪಟ್ಟಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಜೊತೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸಚಿನ್ ಪೈಲಟ್, ನವಜೋತ್ ಸಿಂಗ್ ಸಿಧು, ಅಭಿಜಿತ್ ಮುಖರ್ಜಿ ಮತ್ತು ಮೊಹಮ್ಮದ್ ಅಜರುದ್ದೀನ್ ಸೇರಿದ್ದಾರೆ. ಕಾಂಗ್ರೆಸ್ ಪಕ್ಷದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋಟ್, ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಭೂಪೇಶ್ ಬಾಗೇಲ್ ಕೂಡ ಈ ಪಟ್ಟಿಯಲ್ಲಿದ್ದಾರೆ.
ಗಮನಿಸಬೇಕಾದ ಅಂಶ ಅಂದ್ರೆ ಕಾಂಗ್ರೆಸ್ನ ಹಿರಿಯ ನಾಯಕರಾದ ಗುಲಾಮ್ ನಬಿ ಆಜಾದ್, ಆನಂದ್ ಶರ್ಮಾ, ಕಪಿಲ್ ಸಿಬಲ್ ಮತ್ತು ಮನೀಶ್ ತಿವಾರಿ ಸೇರಿದಂತೆ ಪ್ರಮುಖ ಜಿ-23 ಸದಸ್ಯರಿಗೆ ಗೇಟ್ ಪಾಸ್ ಕೊಡಲಾಗಿದೆ.
