ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಸುರ್ವೇವಾಲಾ ಅವರು ಬೆಳಗ್ಗೆ ಕಾಂಗ್ರೆಸ್ ಭವನದಲ್ಲಿ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಕಾಂಗ್ರೆಸ್ ಶಾಸಕರೊಂದಿಗೆ ಸಭೆ ನಡೆಸಿದರು. ಮಧ್ಯಾಹ್ನದ ಬಳಿಕ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ವೇಳೆ ಸುರ್ಜೇವಾಲಾ ಅವರು ಗಾಂಧಿ ಭಾರತ ಸಮಾವೇಶದ ಹಿನ್ನೆಲೆಯಲ್ಲಿ ಈಗಾಗಲೇ ಸಭೆ ಮಾಡಲಾಗಿದೆ ಎಂದು ಹೇಳಿದ ಮಾತು ಕಾರ್ಯಕರ್ತರನ್ನು ಕೆರಳಿಸಿತು.
ಬೆಳಗಾವಿ(ಜ.18): ಬೆಳಗಾವಿ ಕಾಂಗ್ರೆಸ್ ಭವನದ ಕ್ರೆಡಿಟ್ ವಾರ್ ವಿಷಯ ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ವೇವಾಲಾ ನೇತೃತ್ವದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲೂ ಪ್ರತಿಧ್ವನಿಸಿತು. ಈ ವಿಚಾರವಾಗಿ ಸಭೆಯಲ್ಲಿ ಗದ್ದಲ ಏರ್ಪಟ್ಟು, ಗೊಂದಲದ ವಾತಾವರಣ ನಡುವೆಯೇ ಸಭೆ ಮುಕ್ತಾಯಗೊಂಡಿತು.
ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಸುರ್ವೇವಾಲಾ ಅವರು ಬೆಳಗ್ಗೆ ಕಾಂಗ್ರೆಸ್ ಭವನದಲ್ಲಿ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಕಾಂಗ್ರೆಸ್ ಶಾಸಕರೊಂದಿಗೆ ಸಭೆ ನಡೆಸಿದರು. ಮಧ್ಯಾಹ್ನದ ಬಳಿಕ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ವೇಳೆ ಸುರ್ಜೇವಾಲಾ ಅವರು ಗಾಂಧಿ ಭಾರತ ಸಮಾವೇಶದ ಹಿನ್ನೆಲೆಯಲ್ಲಿ ಈಗಾಗಲೇ ಸಭೆ ಮಾಡಲಾಗಿದೆ ಎಂದು ಹೇಳಿದ ಮಾತು ಕಾರ್ಯಕರ್ತರನ್ನು ಕೆರಳಿಸಿತು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಳಿಸಲು ಹೋರಾಡಿದ್ದು ನಿಜ: ರಮೇಶ್ ಜಾರಕಿಹೊಳಿ
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾರ್ಯಕರ್ತರು ಈ ವಿಷಯವಾಗಿ ಯಾವುದೇ ಸಭೆ ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕಾಂಗ್ರೆಸ್ ಭವನ ವಿಚಾರ ಪ್ರಸ್ತಾಪಿಸಿದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಕಾಂಗ್ರೆಸ್ ಭವನವನ್ನು ಸತೀಶ ಜಾರಕಿಹೊಳಿ ಅವರೇ ನಿರ್ವಹಣೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸುರ್ಜೇವಾಲಾ, ನೀವು ಸತೀಶ ಜಾರಕಿಹೊಳಿ ಅವರನ್ನು ಖುಷಿಪಡಿಸಲು ಹೇಳುತ್ತಿದ್ದೀರಿ ಎನ್ನುತ್ತಿದ್ದಂತೆಯೇ ಆಕ್ಷೇಪಿಸಿದ ಕೆಪಿಸಿಸಿ ಸದಸ್ಯೆ ಆಯೇಷಾ ಸನದಿ, ಸತೀಶ ಅವರು ನಮ್ಮ ಹೆಮ್ಮೆ. ಅವರ ಸಲುವಾಗಿ ನಾವು ಪ್ರಾಣ ಕೊಡಲು ಸಿದ್ಧರಿದ್ದೇವೆ. ನಾವೆಲ್ಲ ಅವರಿಗಾಗಿಯೇ ಬಂದಿದ್ದೇವೆ ಎಂದು ತಿರುಗೇಟು ನೀಡಿದರು. ಇದಕ್ಕೆ ಸುರ್ಜೇವಾಲಾ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಕಾರ್ಯಕರ್ತರ ಗದ್ದಲ ಮುಂದುವರಿಯಿತು. ವೇದಿಕೆ ಮೇಲಿದ್ದ ಸಚಿವ ಸತೀಶ ಜಾರಕಿಹೊಳಿ ಕಾರ್ಯಕರ್ತರಿಗೆ ಮನವಿ ಮಾಡಿದರೂ ಗದ್ದಲ ಮುಂದುವರಿದು, ಗೊಂದಲದಲ್ಲೇ ಸಭೆ ಮುಕ್ತಾಯವಾಯಿತು.
ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ
ಬೆಳಗಾವಿ: ಬೆಳಗಾವಿಯಲ್ಲಿ ಜ.21ರಂದು ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಜೈ ಬಾಪು, ಜೈ ಭೀಮ, ಜೈ ಸಂವಿಧಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ ಹೇಳಿದರು.
ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ದೇಶದ ಎಲ್ಲ ಕಾಂಗ್ರೆಸ್ ನಾಯಕರು ಭಾಗವಹಿಸುವರು. ಬೆಳಗಾವಿಯ ಐತಿಹಾಸಿಕ ಭೂಮಿಯ ಜೊತೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಬಂಧ ದಶಕಗಳಿಂದ ಇದೆ ಎಂದು ಹೇಳಿದರು.
ಸಂಸತ್‌ನಲ್ಲಿ ದೇಶದ ಗೃಹಮಂತ್ರಿ ಅಮಿತ್ ಶಾ ಕೇವಲ ಡಾ.ಬಾಬಾಸಾಹೇಬ ಅಂಬೇಡ್ಕರ್ ಅಪಮಾನ ಮಾತ್ರ ಮಾಡಿಲ್ಲ. ಡಾ.ಬಾಬಾಸಾಹೇಬ ಅಂಬೇಡ್ಕರ್ ತತ್ವಗಳನ್ನು ನಂಬುವವರ ಬಗ್ಗೆ ಅಪಹಾಸ್ಯ ಮಾಡಿದ್ದಾರೆ. ಸಾಂವಿಧಾನಿಕ ಅಧಿಕಾರವನ್ನು ಬಿಜೆಪಿಯಿಂದ ಬುಲ್ಡೋಜರ್ ಕೆಳಗೆ ಹಿಸುಕಲಾಗುತ್ತಿದೆ. ಹೀಗಾಗಿ ಜ.21ರಂದು ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ, ಸಂವಿಧಾನ ರ್‍ಯಾಲಿ, ಜ.27ರಂದು ಅಂಬೇಡ್ಕರ್ ಜನ್ಮಸ್ಥಾನ ಮಧ್ಯಪ್ರದೇಶದಲ್ಲಿ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಬಿಜೆಪಿ ನಾಯಕರು ಒಂದೆಡೆ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಅಪಮಾನ ಮಾಡುತ್ತಾರೆ. ಮತ್ತೊಂದೆಡೆ ದಲಿತರು, ಹಿಂದುಳಿದವರ, ಮಹಿಳೆಯರ, ಯುವಕರ ಅಧಿಕಾರ ಕಿತ್ತಕೊಳ್ಳುತ್ತಾರೆ. ದೇಶಾದ್ಯಂತ ಇಂದು ಹೊಸ ಕ್ರಾಂತಿ ಮಾಡುವ ಅವಶ್ಯಕತೆ ಇದೆ. ಹೀಗಾಗಿ ಬೆಳಗಾವಿಯಿಂದ ಹೊರಹೊಮ್ಮುವ ಧ್ವನಿ ದೇಶದ ರಾಜಕಾರಣಕ್ಕೆ ಹೊಸ ದಿಶೆ ನೀಡಲಿದೆ ಎಂದು ಹೇಳಿದರು.
ಬೆಳಗಾವಿ ಕಾಂಗ್ರೆಸ್ ಕಚೇರಿಗೆ 1.27 ಕೋಟಿ ನೀಡಿದ್ದೇನೆ: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ
100 ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಕಾಂಗ್ರೆಸ್ ಅಧಿವೇಶನದಿಂದಲೇ ದೇಶಕ್ಕೆಸ್ವಾತಂತ್ರ್ಯ ಸಿಕ್ಕಿತ್ತು. ಈಗ 100 ವರ್ಷಗಳ ಮೇಲೆ ಸಂವಿಧಾನದ ಮೇಲೆ ದಾಳಿಯ ವಿರುದ್ಧ ಹೊಸ ಕ್ರಾಂತಿಗೆ ಸೂತ್ರವಾಗಲಿದೆ. ಬೆಳಗಾವಿ ಸಮಾವೇಶ ಐತಿಹಾಸಿಕವಾಗಲಿದೆ ಎಂದರು.
ಸಚಿವ ಜಾರಕಿಹೊಳಿಗೆ ನೋಟಿಸ್ ಇಲ್ಲ:
ಸಚಿವ ಸತೀಶ ಜಾರಕಿಹೊಳಿ ಅವರಿಗೆ ಪಕ್ಷದ ಹೈಕಮಾಂಡ್ ನೋಟಿಸ್ ನೀಡುತ್ತದೆ ಎಂದು ಸುದ್ದಿ ಹಬ್ಬಿಸಲಾಗಿದ್ದು, ಇದು ಸುಳ್ಳು. ಸತೀಶ ಅವರಿಗೆ ನೋಟಿಸ್ ನೀಡುವುದಿಲ್ಲ ಎಂದು ಸುರ್ಜೇವಾಲಾ ಸ್ಪಷ್ಟಪಡಿಸಿದರು.
