ಬಿಜೆಪಿ ಕೆಂಪೇಗೌಡರ ಆಡಳಿತ ಏಕೆ ಅನುಸರಿಸುತ್ತಿಲ್ಲ: ಕಾಂಗ್ರೆಸ್‌

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ನಿಜವಾಗಲೂ ನಾಡಪ್ರಭು ಕೆಂಪೇಗೌಡರು ಮತ್ತು ಅವರ ಮೌಲ್ಯಗಳ ಅನುಯಾಯಿಯೆ? ಹಾಗಿದ್ದರೆ ಬಿಜೆಪಿ ತನ್ನ ಆಡಳಿತದಲ್ಲಿ ಕೆಂಪೇಗೌಡರ ದಕ್ಷ ಆಡಳಿತ ಮತ್ತು ಸಮಾಜ ಸೇವೆಯ ಮೌಲ್ಯಗಳನ್ನು ಅನುಸರಿಸುತ್ತಿಲ್ಲವೇಕೆ ಎಂದು ಪ್ರತಿಪಕ್ಷ ಕಾಂಗ್ರೆಸ್‌ ಪ್ರಶ್ನಿಸಿದೆ. 

Congress Outraged Against BJP Government gvd

ಬೆಂಗಳೂರು (ನ.12): ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ನಿಜವಾಗಲೂ ನಾಡಪ್ರಭು ಕೆಂಪೇಗೌಡರು ಮತ್ತು ಅವರ ಮೌಲ್ಯಗಳ ಅನುಯಾಯಿಯೆ? ಹಾಗಿದ್ದರೆ ಬಿಜೆಪಿ ತನ್ನ ಆಡಳಿತದಲ್ಲಿ ಕೆಂಪೇಗೌಡರ ದಕ್ಷ ಆಡಳಿತ ಮತ್ತು ಸಮಾಜ ಸೇವೆಯ ಮೌಲ್ಯಗಳನ್ನು ಅನುಸರಿಸುತ್ತಿಲ್ಲವೇಕೆ ಎಂದು ಪ್ರತಿಪಕ್ಷ ಕಾಂಗ್ರೆಸ್‌ ಪ್ರಶ್ನಿಸಿದೆ. ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ನಮ್ಮ ಪಕ್ಷವು ನಾಡಪ್ರಭು ಕೆಂಪೇಗೌಡರ ಮೌಲ್ಯಗಳ ನೈಜ ಅನುಯಾಯಿ. ಅದರ ಗೌರವಾರ್ಥ ನಮ್ಮ ಸರ್ಕಾರದ ಆಡಳಿತಾವಧಿಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಟ್ಟಿದ್ದೇವೆ. ಬೆಂಗಳೂರಿನ ಮುಖ್ಯ ಮೆಟ್ರೋ ನಿಲ್ದಾಣಕ್ಕೂ ಕೆಂಪೇಗೌಡರ ಹೆಸರು ನಾಮಕರಣ ಮಾಡಲಾಗಿದೆ. 

ಪ್ರತೀ ವರ್ಷ ಕೆಂಪೇಗೌಡರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವ ವೈಭವೋಪೇತ ಸಂಪ್ರದಾಯಕ್ಕೆ ಚಾಲನೆ ನೀಡಿದ್ದೆವು. ಅಷ್ಟೇ ಅಲ್ಲ ಬೆಂಗಳೂರಿನ ಸಂಸ್ಥಾಪಕರಿಗೆ ಸಂಬಂಧಿಸಿದ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸಲು ನಾಡಪ್ರಭು ಕೆಂಪೇಗೌಡ ಪ್ರಾಧಿಕಾರ ಸ್ಥಾಪಿಸಿದ್ದೇವೆ ಎಂದು ಹೇಳಿದೆ. ಆದರೆ, ಬಿಜೆಪಿ ಏಕೆ ತಮ್ಮ ಆಡಳಿತದಲ್ಲಿ ಕೆಂಪೇಗೌಡರ ದಕ್ಷ ಆಡಳಿತ ಮತ್ತು ಸಮಾಜ ಸೇವೆಯ ಮೌಲ್ಯಗಳನ್ನು ಅನುಸರಿಸುತ್ತಿಲ್ಲ. ನಾಡಪ್ರಭು ನಿರ್ಮಿಸಿದ ಈ ಕನಸಿನ ನಗರ ಒಂದು ಕಾಲದಲ್ಲಿ ವಿಶ್ವದಾದ್ಯಂತ ಪ್ರಗತಿ ಮತ್ತು ಸೌಂದರ್ಯಕ್ಕೆ ಹೆಸರುವಾಸಿಯಾಗಿತ್ತು. ರಾಜ್ಯ ಬಿಜೆಪಿಯಿಂದ ಬೆಂಗಳೂರು 40 ಪರ್ಸೆಂಟ್‌ ಕಮಿಷನ್‌, ರಸ್ತೆಗುಂಡಿಗಳು ಮತ್ತು ಪ್ರವಾಹಗಳಿಂದ ಕುಖ್ಯಾತಿಯಾಗಿದೆ ಎಂದು ಟೀಕಿಸಿದೆ.

ಏರ್‌ಪೋರ್ಟ್‌ಗೆ ಕೆಂಪೇಗೌಡ ಹೆಸರಿಟ್ಟಿದ್ದು ನಾವು: ಸಿಎಂ ಬೊಮ್ಮಾಯಿ

ಕಾಂಗ್ರೆಸ್‌ ಆಡಳಿತದಲ್ಲಿ ಹೆಚ್ಚು ಅಭಿವೃದ್ಧಿ: ಕಾಂಗ್ರೆಸ್‌ ಸರ್ಕಾರದ ಅಧಿಕಾರದ ಅವಧಿಯಲ್ಲಾದಷ್ಟುಅಭಿವೃದ್ಧಿ ಕಾರ್ಯಗಳು ಬಿಜೆಪಿ ಸರ್ಕಾರ ಅವಧಿಯಲ್ಲಿ ಆಗಿಲ್ಲ. ಮತಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ಶಾಸಕ ದೊಡ್ಡನಗೌಡ ಪಾಟೀಲರಿಗೆ ಬಹಿರಂಗ ಚರ್ಚೆಗೆ ಆಹ್ವಾನಿಸುತ್ತೇನೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಸವಾಲು ಹಾಕಿದರು.

ಪಟ್ಟಣದ ವಿ.ಮ.ವೃತ್ತದಲ್ಲಿ ಹುನಗುಂದ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹುನಗುಂದ ಮತಕ್ಷೇತ್ರದ ಹುನಗುಂದ ಮತ್ತು ಇಳಕಲ್ಲ ಬ್ಲಾಕ್‌ ಕಾಂಗ್ರೆಸ್‌ನ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಮತ್ತು ಸೇರ್ಪಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಹುನಗುಂದ ಪಟ್ಟಣದ ಗುಡ್ಡದಲ್ಲಿನ 24 ಎಕರೆ ಜಮೀನನಲ್ಲಿ ವಸತಿ ರಹಿತ ಬಡವ, ದೀನ,ದಲಿತರಿಗೆ, ಅಲ್ಪಸಂಖ್ಯಾತರಿಗೆ ರಾಜೀವಗಾಂಧಿ ಹೌಸಿಂಗ್‌ ಬೋರ್ಡ್‌ನಿಂದ 950 ಜನರ ಹಕ್ಕು ಪತ್ರವನ್ನು ಸಿದ್ಧಪಡಿಸಲಾಗಿತ್ತು. ಆದರೆ ಶಾಸಕ ದೊಡ್ಡನಗೌಡ ಪಾಟೀಲರು 950 ಹಕ್ಕು ಪತ್ರಗಳು ಅನರ್ಹ ಫಲಾನುಭವಿಗಳಿಗೆ ನೀಡಿದ್ದಾರೆ. ಅವುಗಳನ್ನು ರದ್ದು ಪಡಿಸುವಂತೆ ಹೌಸಿಂಗ್‌ ಬೋರ್ಡ್‌ಗೆ ಪತ್ರ ಬರೆದಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಸರ್ಕಾರ ಕೆಂಪೇಗೌಡ ಅನುಯಾಯಿಯೇ? ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರದ ಅವಧಿಯಲ್ಲಿ .270 ಕೋಟಿ ಅನುದಾನದಲ್ಲಿ ಕೃಷ್ಣಾ ಮತ್ತು ಮಲಪ್ರಭೆಯ ದಡದಲ್ಲಿ 10 ಗ್ರಾಮಗಳನ್ನು ಯುಕೆಪಿಯಡಿಯಲ್ಲಿ ಮುಳುಗಡೆ ಮಾಡಲಾಗಿದೆ. ಹೂವನೂರ,ಬೆಳಗಲ್ಲ, ಚೌಡಕಮಲದಿನ್ನಿ, ಗಂಜೀಹಾಳ, ಮೇದಿನಾಪೂರ, ನಂದನೂರ, ಕೈರವಾಡಗಿ, ಪಾಪಥನಾಳ, ಚಿಕ್ಕಮಾಗಿ ಸೇರಿದಂತೆ ತಾಲೂಕಿನ 26 ಗ್ರಾಮಗಳು ಮುಳುಗಡೆಗೆ ಒಳಪಡಿಸುವ ಮತ್ತು ಶಾಶ್ವತ ವ್ಯವಸ್ಥೆ ಮಾಡಲಾಗುವುದು. ಮಾಜಿ ಸಿಎಂ ಸಿದ್ದರಾಮಯ್ಯನವರು ಈ ರಾಜ್ಯದ ರೈತರ ಸಾಲ ಮನ್ನಾ ಮಾಡಿದಾಗ ಹುನಗುಂದ ಮತಕ್ಷೇತ್ರಕ್ಕೆ 116 ಕೋಟಿ ಹಣದಲ್ಲಿ 26,175 ಜನ ರೈತರ 50 ಸಾವಿರ ಸಾಲವನ್ನು ಮನ್ನಾ ಮಾಡಲಾಗಿದೆ ಎಂದರು.

Latest Videos
Follow Us:
Download App:
  • android
  • ios