ಯುವಶಕ್ತಿಯೇ ಕಾಂಗ್ರೆಸ್ ಪಕ್ಷದ ಆಸ್ತಿ: ಮಾಜಿ ಸಂಸದ ಡಿ.ಕೆ.ಸುರೇಶ್

ಯುವಶಕ್ತಿಯೇ ಪಕ್ಷದ ಆಸ್ತಿಯಾಗಿದ್ದು, ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಸೂಚಿಸಿದರು. 
 

Congress Party Asset is Youth Power Says Ex MP DK Suresh gvd

ಚನ್ನಪಟ್ಟಣ (ಅ.23): ಯುವಶಕ್ತಿಯೇ ಪಕ್ಷದ ಆಸ್ತಿಯಾಗಿದ್ದು, ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಸೂಚಿಸಿದರು. ತಾಲೂಕಿನ ಲಾಳಾಘಟ್ಟ ಗ್ರಾಮದ ಬಳಿ ಹಮ್ಮಿಕೊಂಡಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷ ಸಂಘಟಿಸುವ ಮಹತ್ತರ ಜವಬ್ದಾರಿ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲಿದ್ದು, ಪಕ್ಷವನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಕಾರ್ಯಮಗ್ನರಾಗುವಂತೆ ತಾಕೀತು ಮಾಡಿದರು.

ಒಗ್ಗೂಡಿ ಶ್ರಮಿಸಿ: ನಿಮ್ಮ ಜತೆ ನಾನಿದ್ದೇನೆ. ನಿಮ್ಮ ಏನೇ ಸಮಸ್ಯೆ ಇದ್ದರು. ನಮ್ಮ ಬಳಿ ಬನ್ನಿ, ಇನ್ನೆರಡು ದಿನದಲ್ಲಿ ಚನ್ನಪಟ್ಟಣ ಅಭ್ಯರ್ಥಿ ಯಾರೆಂದು ತಿಳಿಯುತ್ತದೆ. ಪಕ್ಷದ ಅಭ್ಯರ್ಥಿ ಯಾರೇ ಆದರೂ ಎಲ್ಲರೂ ಒಗ್ಗೂಡಿ ದುಡಿಯಬೇಕು. ಡಿ.ಕೆ.ಶಿವಕುಮಾರ್‌ಗೆ ಮುಂದಿನ ದಿನಗಳಲ್ಲಿ ಶಕ್ತಿ ತುಂಬಲು ಈ ಚುನಾವಣೆ ಬುನಾದಿಯಾಗಬೇಕು. ಆ ನಿಟ್ಟಿನಲ್ಲಿ ಯುವಕರು, ರೈತರು, ಮಹಿಳೆಯರು ಇತಿಹಾಸ ಬರೆಯಬೇಕು ಎಂದು ಮನವಿ ಮಾಡಿದರು. ಯುವ ಸಮೂಹ ದೇಶದ ದೊಡ್ಡ ಶಕ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಯುವ ಸಮೂಹವನ್ನು ಕಾಂಗ್ರೆಸ್‌ಗೆ ಕರೆತರುವಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಬೇಕು. 

ಈ ಬಾರಿಯ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಹೊಣೆಗಾರಿಕೆ ನಿಮ್ಮದಾಗಿದ್ದು, ಅದನ್ನು ಸೂಕ್ತವಾಗಿ ನಿಭಾಯಿಸಬೇಕು ಎಂದು ಸಲಹೆ ನೀಡಿದರು. ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಿ. ನಗರ ಹಾಗೂ ಗ್ರಾಪಂ ವ್ಯಾಪ್ತಿಯ ಪ್ರತಿ ಬೂತ್ ಮಟ್ಟದಲ್ಲೂ ಯುವಕರನ್ನು ಪಕ್ಷಕ್ಕೆ ಸೆಳೆದು ಪಕ್ಷ ಸಂಘಟನೆಯ ಕಾರ್ಯವನ್ನು ಚುರುಕುಗೊಳಿಸಿ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಶಕ್ತಿ ಮೀರಿ ಕೆಲಸ ಮಾಡಬೇಕು ಎಂದು ತಿಳಿಸಿದರು. ವಿಧಾನಸಭಾ ಚುನಾವಣೆಗೆ ಇನ್ನು ಕೆಲವು ದಿನ ಮಾತ್ರ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರು ಚುನಾವಣೆಗೆ ಸಜ್ಜಾಗಬೇಕು.

ಸಂಕ್ರಾಂತಿ ದಿನ ಹೊಸ ಬ್ರಿಗೇಡ್ ಸ್ಥಾಪನೆ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ಮನೆ-ಮನೆಗೆ ತೆರೆಳಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಬೇಕು. ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಿರಿಯರನ್ನು ಜತೆಗೆ ತೆಗೆದುಕೊಂಡು ಪಕ್ಷದ ಸಂಘಟನೆಯ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಸಲಹೆ ನೀಡಿದರು. ಕಾಂಗ್ರೆಸ್ ತಂದಿರುವ ಐದು ಗ್ಯಾರಂಟಿಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡಬೇಕು. ಆ ಮೂಲಕ ಪಕ್ಷದ ಅಭ್ಯರ್ಥಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಮೋದ್, ಸುನೀಲ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಅನಿಲ್ ಜೋಗೆಂದರ್ ಇತರರಿದ್ದರು.

Latest Videos
Follow Us:
Download App:
  • android
  • ios