ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬಂದಿದ್ದು ಇದಕ್ಕೆ ಅವರು ಹೆದರಬೇಕಾಗಿಲ್ಲ ಕಾಂಗ್ರೆಸ್‌ ಪಕ್ಷವೇ ಅವರ ಹಿಂದೆ ಇದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್ ತಿಳಿಸಿದರು.

ರಾಯಚೂರು (ಅ.16): ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬಂದಿದ್ದು ಇದಕ್ಕೆ ಅವರು ಹೆದರಬೇಕಾಗಿಲ್ಲ ಕಾಂಗ್ರೆಸ್‌ ಪಕ್ಷವೇ ಅವರ ಹಿಂದೆ ಇದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್ ತಿಳಿಸಿದರು. ಮಾತನಾಡಿದ ಅವರು, ಸಚಿವ ಪ್ರಿಯಾಂಕ್‌ ಖರ್ಗೆಯವರಿಗೆ ಜೀವ ಬೆದರಿಕೆ ಹಾಕಿರುವುದು ಬಗ್ಗೆ ಮಾಧ್ಯಮದಿಂದ ತಿಳಿದುಬಂದಿದ್ದು, ಈ ವಿಚಾರವಾಗಿ ಯಾವುದೇ ರೀತಿಯಲ್ಲಿ ಹೆದರಿಕೆ ಅವಶ್ಯಕವಿಲ್ಲ. ಕಾಂಗ್ರೆಸ್ ಪಕ್ಷವೇ ಅವರೊಂದಿಗೆ ಇದೆ ಎಂದು ಹೇಳಿದರು.

ಈ ಹಿಂದೆ ಸರ್ದಾರ ವಲ್ಲಭಾಯಿ ಪಟೇಲ್ ಅವರೇ ದೇಶದಲ್ಲಿ ಆರ್‌ಎಸ್‌ಎಸ್ ಬ್ಯಾನ್ ಮಾಡಿದ್ದರು, ಇದು ಇತಿಹಾಸವಾಗಿದ್ದು, ಬಿಜೆಪಿಗರು ಇದನ್ನು ಅರಿಯಬೇಕು. ಆರ್‌ಎಸ್‌ಎಸ್‌ ವಿರುದ್ಧವಾಗಲಿ, ವೈಯಕ್ತಿವಾಗಿ ನಾನು ಮಾತನಾಡಿಲ್ಲ ಅವರ ವಿಚಾರಧಾರೆಗಳ ಬಗ್ಗೆ ತಕರಾರಿದೆ. ನವೆಂಬರ್‌ ಕ್ರಾಂತಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಒತ್ತಡ ಕೇಂದ್ರದ ಮೇಲಿದೆ. ಅವರ ಓಲೈಕೆಯನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಕೇಂದ್ರ ಸರ್ಕಾರ 50 ಸಾವಿರ ಕೋಟಿ ಅನುದಾನ ನೀಡಿದೆ. ದೇಶದಲ್ಲಿ ಐದು ಸೆಮಿ ಕಂಡಕ್ಟರ್‌ಗಳನ್ನು ಪ್ರಾಜೆಕ್ಟರ್‌ಗಳನ್ನು ಪ್ರತಿಯೊಂದು ಯೋಜನೆ 5 ಸಾವಿರ ಕೋಟಿ ಇದೆ. ನಾಲ್ಕು ಗುಜರಾತಿಗೆ ತೆಗೆದುಕೊಂಡು ಹೋಗಲಾಗಿದೆ. ಕೇಳುವರು ಯಾರು ಎಂದು ಪ್ರಶ್ನಿಸಿದರು.

ಚುನಾವಣೆ ಆಯೋಗವು ಕೇಂದ್ರ ಸರ್ಕಾರದ ಕೈಯಲ್ಲಿದೆ. ಅದು ಒಂದು ವಂಚನೆಯಾಗಿರುವುದು ದೇಶಕ್ಕೆ ತಿಳಿದಿದೆ. ಇನ್ನೇನು ಬೇಕು ಎಂದು ಪ್ರಶ್ನಿಸಿದ ಅವರು ರಾಜ್ಯಗಳ ವಿಧಾನಸಭಾ ಚುನಾವಣೆಗಾಗಿ ಪ್ರಧಾನಮಂತ್ರಿಗಳು ಸುಮಾರು 30 ರಿಂದ 40 ಬಾರಿ ಪ್ರವಾಸ ಮಾಡಿದ್ದಾರೆ. ಗೆಲುವು ಸಾಧಿಸಬಹುದು. ಇಲ್ಲಿಯ ವರೆಗೆ 11ವರ್ಷ ಅಡಳಿತ ಏನು ಮಾಡಿದ್ದೀರಿ ಎಂದು ಸಾರ್ವಜನಿಕರಿಗೆ ತಿಳಿಸಲಿ ಎಂದು ಸವಾಲು ಹಾಕಿದರು. ಕಾರ್ಮಿಕರಿಗೆ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪೆಟ್ರೋಲ್ ಹಾಗೂ ಡಿಸೇಲ್‌ಗಳ ಮೇಲೆ ಒಂದು ರೂಪಾಯಿಗಳ ಸೆಸ್‌ ಪಡೆದು ಅದನ್ನು ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದರು.

ಪ್ರಿಯಾಂಕ್ ಖರ್ಗೆ ಎಲ್ಲಿಯೂ ಹೇಳಿಲ್ಲ

ಆರ್‌ಎಸ್‌ಎಸ್ ನಿಷೇಧ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಎಲ್ಲಿಯೂ ಹೇಳಿಲ್ಲ. ಸರ್ಕಾರಿ ಜಾಗ, ಶಾಲಾ ಕಾಲೇಜುಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಸಿಎಂಗೆ ಪತ್ರ ಬರೆದಿದ್ದಾರೆ ಎಂದು ಶಾಸಕ ಪಿ.ರವಿಕುಮಾರ್ ಎಂದು ಹೇಳಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕೆರಗೋಡು ಗಣೇಶೋತ್ಸವ ವೇಳೆ ಆರ್‌ಎಸ್‌ಎಸ್ ಸ್ಕೂಲ್‌ನಿಂದ ಡಿಜೆ ಹೊರಬಂತು. ಸ್ಕೂಲ್‌ಗೂ ಡಿಜೆಗೂ ಏನು ಸಂಬಂಧ. ಸ್ಕೂಲ್‌ ಮಕ್ಕಳಿಗೆ ಶಿಕ್ಷಣ ಕೊಡಬೇಕು. ರಾಜಕಾರಣ ಅಲ್ಲ. ಆರ್‌ಎಸ್‌ಎಸ್ ಕೋಮು ವಿಷಬೀಜ ಬಿತ್ತುತ್ತಿದೆ. ಅದಕ್ಕಾಗಿ ಸರ್ಕಾರಿ ಜಾಗ, ಶಾಲೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗೆ ಕಡಿವಾಣ ಹಾಕಬೇಕು ಎಂದು ಕೇಳಿದ್ದಾರೆ ಎಂದರು.

ಆರ್‌ಎಸ್‌ಎಸ್ ಯಾವ ದೇವಸ್ಥಾನ ಅಭಿವೃದ್ಧಿ ಮಾಡಿದ್ದಾರೆ, ಯಾವ ಹಿಂದುತ್ವ ಉಳಿಸುತ್ತಿದ್ದಾರೆ. ನಾವು ಗಣೇಶನಿಗೆ ದುಡ್ಡು ಕೊಡುವುದಿಲ್ಲವೇ, ಪೂಜೆ ಮಾಡಲ್ಲವೇ, ನೀವು ಮಾತ್ರ ಭಕ್ತರಾ? ನಿಮ್ಮದು ಡ್ರಾಮ, ನಮ್ಮದು ನಿಜವಾದ ಹಿಂದುತ್ವ ಎಂದು ಹರಿಹಾಯ್ದರು. ನಮ್ಮ ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಕೋಮುದ್ವೇಷ ಸೃಷ್ಟಿಸಿ ಮುಚ್ಚಿ ಹಾಕುತ್ತಿದ್ದಾರೆ. ಕರಾವಳಿ ರೀತಿ ಮಂಡ್ಯದ ಮೇಲೂ ಪ್ರಯೋಗ ಮಾಡುತ್ತಿದ್ದಾರೆ. ಯುವಕರು ಎಚ್ಚರಿಕೆಯಿಂದ ಇರಬೇಕು ಎಂದರು. ನವೆಂಬರ್ ನಲ್ಲಿ ರಾಜಕೀಯ ಕ್ರಾಂತಿ ಆಗುವುದು ಬಿಜೆಪಿಯಲ್ಲೇ ಹೊರತು ಕಾಂಗ್ರೆಸ್‌ನಲ್ಲಿ ಅಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರಿಗೂ 140 ಶಾಸಕರ ಬೆಂಬಲವಿದೆ. ಯಾರು, ಯಾವಾಗ ಏನಾಗಬೇಕು ಅನ್ನುವುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಮುಖ್ಯಮಂತ್ರಿ ಬದಲಾವಣೆ ಕುರಿತು ಪ್ರತಿಕ್ರಿಯಿಸಿದರು.