Asianet Suvarna News Asianet Suvarna News

Prajadwani Bus Yatra: ಜೆಡಿಎಸ್‌ ಭದ್ರಕೋಟೆ ಹಾಸನದಲ್ಲಿ ಕಾಂಗ್ರೆಸ್‌ ಶಕ್ತಿ ಪ್ರದರ್ಶನ

ಜೆಡಿಎಸ್‌ ಭದ್ರಕೋಟೆ ಹಾಸನ ಜಿಲ್ಲೆಯಲ್ಲಿ ಪ್ರಜಾಧ್ವನಿ ಯಾತ್ರೆ ಮೂಲಕ ಕಾಂಗ್ರೆಸ್‌ ಶನಿವಾರ ಬೃಹತ್‌ ಶಕ್ತಿ ಪ್ರದರ್ಶನ ನಡೆಸಿತು. ಜಿಲ್ಲೆಗೆ ಕಾಲಿಟ್ಟ ಪ್ರಜಾಧ್ವನಿ ಬಸ್‌ಯಾತ್ರೆಗೆ ಸ್ಥಳೀಯ ಮುಖಂಡರಿಂದ ಅದ್ಧೂರಿ ಸ್ವಾಗತ ನೀಡಲಾಯಿತು. 

Congress Prajadwani Bus Yatra in Hassan gvd
Author
First Published Jan 22, 2023, 9:40 AM IST

ಹಾಸನ (ಜ.22): ಜೆಡಿಎಸ್‌ ಭದ್ರಕೋಟೆ ಹಾಸನ ಜಿಲ್ಲೆಯಲ್ಲಿ ಪ್ರಜಾಧ್ವನಿ ಯಾತ್ರೆ ಮೂಲಕ ಕಾಂಗ್ರೆಸ್‌ ಶನಿವಾರ ಬೃಹತ್‌ ಶಕ್ತಿ ಪ್ರದರ್ಶನ ನಡೆಸಿತು. ಜಿಲ್ಲೆಗೆ ಕಾಲಿಟ್ಟ ಪ್ರಜಾಧ್ವನಿ ಬಸ್‌ಯಾತ್ರೆಗೆ ಸ್ಥಳೀಯ ಮುಖಂಡರಿಂದ ಅದ್ಧೂರಿ ಸ್ವಾಗತ ನೀಡಲಾಯಿತು. ಈ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೆಡಿಎಸ್‌ ವಿರುದ್ಧ ನೇರ ವಾಗ್ದಾಳಿ ನಡೆಸಿದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿ ಉಳಿದ ನಾಯಕರು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ವೈಫಲ್ಯ ಎತ್ತಿಹಿಡಿದು, ನಿಮ್ಮ ಋುಣ ತೀರಿಸಲು ಈ ಬಾರಿ ನಮಗೆ ಅಧಿಕಾರ ಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್‌, ಈ ಹಿಂದೆ ಕಾಂಗ್ರೆಸ್‌ಗೆ ಅಧಿಕಾರ ಕೊಟ್ಟಿದ್ದೀರಿ. ಆದರೆ, ಪೂರ್ಣ ಪ್ರಮಾಣದಲ್ಲಿ ಬಹುಮತ ಇರಲಿಲ್ಲ. ಹಾಗಾಗಿ ನಾವು ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಜೆಡಿಎಸ್‌ ಜತೆ ಕೈಜೋಡಿಸಿ ಅವರ ಪಕ್ಷದವರನ್ನೇ ಮುಖ್ಯಮಂತ್ರಿ ಮಾಡಿದೆವು. ಆದರೆ, ಅವರು ಮಾಡಿದ ತಪ್ಪಿಗೆ ಅಧಿಕಾರ ಹೋಯಿತು. ಅಂದು ನಾವು ಮಾಡಿದ್ದೂ ತಪ್ಪೇ. ಆ ತಪ್ಪಿನ ಪ್ರಾಯಶ್ಚಿತ್ತವನ್ನು ನಾವು ಇಂದಿಗೂ ಅನುಭವಿಸುತ್ತಿದ್ದೇವೆ. ಇದೀಗ ನಮಗೆ ನಮ್ಮ ತಪ್ಪಿನ ಅರಿವಾಗಿದೆ. ನಿಮ್ಮ ಋುಣ ನಮ್ಮ ಮೇಲಿದೆ. ಹಾಗಾಗಿ ಆ ಋುಣ ತೀರಿಸಲಿಕ್ಕಾದರೂ ನಮಗೆ ಈ ಬಾರಿ ಅಧಿಕಾರ ಕೊಡಿ ಎಂದರು.

Grama Vastavya: ಜನರಿಗೆ ಮತ್ತೆ 10 ಕೆ.ಜಿ ಪಡಿತರ ಅಕ್ಕಿ: ಸಚಿವ ಅಶೋಕ್‌

ಹಾಸನ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಇಬ್ಬರು ಶಾಸಕರು ಕಾಂಗ್ರೆಸ್‌ ಜೊತೆ ಸಂಪರ್ಕದಲ್ಲಿದ್ದಾರೆ. ಶಿವಮೊಗ್ಗದಲ್ಲಿ ಮಧುಬಂಗಾರಪ್ಪ, ವೈಎಸ್‌ವಿ ದತ್ತ, ಗುಬ್ಬಿಯಲ್ಲಿ ವಾಸು, ಕೊಲಾರದಲ್ಲಿ ಶ್ರೀನಿವಾಸ ಗೌಡ ಹೀಗೆ ಜನತಾದಳದಿಂದ ಸ್ಪರ್ಧೆ ಮಾಡಿದ ಅನೇಕರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಇವರಾರ‍ಯರೂ ದಡ್ಡರಲ್ಲ ಎಂದರು. ಕುಮಾರಸ್ವಾಮಿ ಅವರನ್ನು ಎರಡು ಬಾರಿ ಮುಖ್ಯಮಂತ್ರಿ ಮಾಡಿದಿರಿ. ಆದರೆ ಅವರಿಗೆ ಅಧಿಕಾರ ಬಳಸಿಕೊಂಡು ಕೆಲಸ ಮಾಡಲು ಬರಲಿಲ್ಲ. ಅದರಲ್ಲಿ ನಮ್ಮ ತಪ್ಪು ಕೂಡ ಇತ್ತು. ಹಾಗಾಗಿ ಕೆಪಿಸಿಸಿ ಅಧ್ಯಕ್ಷ ದೊಡ್ಡಆಲಹಳ್ಳಿ ಕೆಂಪೆಗೌಡರ ಮಗನಾದ ನಾನು ನಿಮ್ಮ ಪಾದಗಳಿಗೆ ನಮಸ್ಕಾರ ಮಾಡಿ ಕೇಳುತ್ತೇನೆ, ನಿಮ್ಮ ಸೇವೆ ಮಾಡಲು ನನಗೆ ಒಮ್ಮೆ ಅವಕಾಶ ಕೊಡಿ ಎಂದು ಮನವಿ ಮಾಡಿದರು.

ದ.ಕ.ಜಿಲ್ಲೆಯಲ್ಲಿ ಇಂದು ಕಾಂಗ್ರೆಸ್‌ ‘ಪ್ರಜಾಧ್ವನಿ’ ಯಾತ್ರೆ: ಅವಿಭಜಿತ ದ.ಕ ಜಿಲ್ಲೆಯಲ್ಲಿ ಕಾಂಗ್ರೆಸ್‌ ಹಿರಿಯ ಮುಖಂಡರ ಸಮಾಕ್ಷಮದಲ್ಲಿ ಮಂಗಳೂರಿನ ಕರಾವಳಿ ಉತ್ಸವ ಮೈದಾನ ಮತ್ತು ಉಡುಪಿಯ ಕ್ರಿಶ್ಚಿಯನ್‌ ಹೈಸ್ಕೂಲ್‌ ಮೈದಾನದಲ್ಲಿ ಜ.26ರಂದು ‘ಪ್ರಜಾಧ್ವನಿ’ ಯಾತ್ರೆ ಬೃಹತ್‌ ಕಾರ್ಯಕ್ರಮ ನಡೆಯಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ತಿಳಿಸಿದ್ದಾರೆ. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಆಡಳಿತ ನಿರ್ವಹಿಸುತ್ತಿರುವ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. 

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಲೂ ಜನರಿಗೆ ಆಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಜನರ ಧ್ವನಿಗೆ ಶಕ್ತಿ ತುಂಬ ಬೇಕಾಗಿದೆ ಎಂದರು.  ಸರ್ಕಾರದ ಯಾವೊಂದು ಯೋಜನೆಗಳು ಕೂಡ ಬಿಡುಗಡೆಗೊಳ್ಳುತ್ತಿಲ್ಲ, ಅನೇಕ ಯೋಜನೆಗಳ ಬಗ್ಗೆ ಸುಳ್ಳು ಭರವಸೆ, ವಿದ್ಯಾರ್ಥಿಗಳಿಂದ ಹಿಡಿದು ವಯೋವೃದ್ಧರ ವರೆಗೆ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇದನ್ನು ಮರೆಮಾಚಿ ರಾಜ್ಯ ಸರ್ಕಾರ ಜನರ ಕಣ್ಣಿಗೆ ಮಣ್ಣೆರಚ್ಚುತ್ತಿದೆ. ರಾಜ್ಯ ಸರ್ಕಾರ ಕೃಷಿಕರನ್ನು ಬೀದಿಗೆ ತಂದು ನಿಲ್ಲಿಸಿದೆ. ಕೃಷಿಕರಿಗೆ ಪೂರಕವಾಗಿ ಯಾವುದೇ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ ಎಂದಿದ್ದಾರೆ.

ಕನಕಪುರ ಬಾಲಕ ನಾಪತ್ತೆ ಪ್ರಕರಣ: ಬ್ರೈನ್‌ ಮ್ಯಾಪಿಂಗ್‌ನಿಂದ ಕೊಲೆ ರಹಸ್ಯ ಬಯಲು

ಜನ ಸಾಮಾನ್ಯರ ಧ್ವನಿಯಾಗಿ ಸರ್ಕಾರದ ವೈಫಲ್ಯವನ್ನು ಖಂಡಿಸಲು ಹಾಗೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನಸ್ನೇಹಿ, ಜನಪರ, ಜನಹಿತಕ್ಕಾಗಿ ಕಾರ್ಯನಿರ್ವಹಿಸುವ ಕಾಂಗ್ರೆಸ್‌ ಪಕ್ಷವನ್ನು ಆಡಳಿತಕ್ಕೆ ತರುವ ನಿಟ್ಟಿನಲ್ಲಿ ಕಾಂಗ್ರೆಸ್‌ ಪಕ್ಷ ‘ಪ್ರಜಾಧ್ವನಿ’ ಯಾತ್ರೆಯನ್ನು ಹಮ್ಮಿಕೊಂಡಿದೆ. ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ‘ಗೃಹಜ್ಯೋತಿ’ ಹಾಗೂ ‘ಗೃಹಲಕ್ಷ್ಮೀ’ ಎಂಬ ಎರಡು ಯೋಜನೆಗಳನ್ನು ಜಾರಿಗೊಳಿಸುವ ಮಹತ್ವದ ಘೋಷಣೆ ಹೊರಡಿಸಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow Us:
Download App:
  • android
  • ios