ವಿವಿಧ ರಾಜ್ಯಗಳ ಉಸ್ತುವಾರಿಗಳು, ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರು ಮತ್ತು ಸಿಎಲ್‌ಪಿ ನಾಯಕರೊಂದಿಗೆ ಮಾತುಕತೆ ನಡೆಸಿದರು. ಈ ಸಭೆಯಲ್ಲಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಪಕ್ಷದ ರಾಜ್ಯಾಧ್ಯಕ್ಷರು ಸಹ ಭಾಗಿಯಾಗಿದ್ದರು. 

ನವದೆಹಲಿ(ಡಿ.24):  ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಜ.26ರಿಂದ ಆರಂಭವಾಗುವ ‘ಹಾಥ್‌ ಸೆ ಹಾಥ್‌ ಜೋಡೋ’ ಅಭಿಯಾನವನ್ನು ಸಫಲಗೊಳಿಸುವ ಕುರಿತಾಗಿ ಚರ್ಚಿಸಲು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹಿರಿಯ ನಾಯಕರೊಂದಿಗೆ ಸಭೆ ನಡೆಸಿದರು.

ಈ ವೇಳೆ ಅವರು, ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ವಿವಿಧ ರಾಜ್ಯಗಳ ಉಸ್ತುವಾರಿಗಳು, ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರು ಮತ್ತು ಸಿಎಲ್‌ಪಿ ನಾಯಕರೊಂದಿಗೆ ಮಾತುಕತೆ ನಡೆಸಿದರು. ಈ ಸಭೆಯಲ್ಲಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಪಕ್ಷದ ರಾಜ್ಯಾಧ್ಯಕ್ಷರು ಸಹ ಭಾಗಿಯಾಗಿದ್ದರು. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್‌ ಬಾಘೇಲ್‌, ಸಂಘಟನಾ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಲೋಕಸಭಾ ನಾಯಕ ಅಧೀರ್‌ ರಂಜನ್‌ ಚೌಧರಿ, ಪ್ರಧಾನ ಕಾರ‍್ಯದರ್ಶಿಗಳಾದ ರಣದೀಪ್‌ ಸುರ್ಜೇವಾಲಾ, ಮುಖುಲ್‌ ವಾಸ್ನಿಕ್‌, ಕುಮಾರ್‌ ಸೆಲ್ಜಾ, ತಾರೀಖ್‌ ಅನ್ವರ್‌, ಅವಿನಾಶ್‌ ಪಾಂಡೆ ಸೇರಿದಂತೆ ಇತರರು ಭಾಗಿಯಾಗಿದ್ದರು.

Assembly election: ಕಾಂಗ್ರೆಸ್ ಟಿಕೆಟ್ ಹಂಚಿಕೆಗೆ ಕಮಲ ತಂತ್ರ: ತ್ರಿಬಲ್ ರೈಡಿಂಗ್ ಗೆದ್ದವನೇ ಮಹಾಶೂರ

ಭಾರತ್‌ ಜೋಡೋ ಯಾತ್ರೆಯ ಸಂದೇಶವನ್ನು ಮನೆ ಬಾಗಿಲಿಗೆ ತಲುಪಿಸುವ ಕುರಿಯಾಗಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಅಲ್ಲದೇ ಇದನ್ನು ದೇಶದ ಎಲ್ಲಾ ಮನೆ ಬಾಗಿಲಿಗೂ ತಲುಪಿಸುವ ಕುರಿತಾಗಿ ನಿರ್ಣಯ ಕೈಗೊಳ್ಳಲಾಯಿತು. ಭಾರತ್‌ ಜೋಡೋ ಯಾತ್ರೆ ಜಮ್ಮು ಕಾಶ್ಮೀರದಲ್ಲಿ ಅಂತ್ಯವಾಗುತ್ತಿದ್ದಂತೆ ಈ ಅಭಿಯಾನವನ್ನು ಆರಂಭಿಸಲಾಗುತ್ತದೆ.