Asianet Suvarna News Asianet Suvarna News

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ, ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕಠಿಣ ಮಾರ್ಗಸೂಚಿ ಪ್ರಕಟ!

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಪಕ್ಷದಲ್ಲಿ ಹಲವು ಕೋಲಾಹಲ ಎಬ್ಬಿಸಿದೆ. ಇದರ ನಡುವೆ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಲು ಕಾಂಗ್ರೆಸ್ ಹೈಕಮಾಂಡ್ ಹರಸಾಹಸ ಪಡುತ್ತಿದ್ದಾರೆ. ಇದೀಗ ಚುನಾವಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಲಾಗಿದೆ. ಇದು ಹಲವು ಮುಖಂಡರಿಂಗ ಸಂಕಷ್ಟ ತಂದಿದೆ.

Congress President Election high command issues strict Guidelines for party leaders and bearers ckm
Author
First Published Oct 3, 2022, 4:51 PM IST

ನವದೆಹಲಿ(ಅ.03): ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಪಕ್ಷದೊಳಗಿನ ಬಣರಾಜಕೀಯವನ್ನು ಮೈಕೊಡವಿ ನಿಲ್ಲುವಂತೆ ಮಾಡಿದೆ.  ಇದು ಕಾಂಗ್ರೆಸ್ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಗಾಂಧಿ ಕುಟುಂಬದ ಅಭ್ಯರ್ಥಿ ಎಂದೇ ಬಿಂಬಿತವಾಗಿದ್ದಾರೆ. ಇತ್ತ ಮತ್ತೊರ್ವ ನಾಯಕ ಶಶಿ ತರೂರ್ ಜಿ23 ಗುಂಪಿನಲ್ಲಿ ಕಾಣಿಸಿಕೊಂಡ ನಾಯಕ.ಇದೀಗ ಖರ್ಗೆ ವಿರುದ್ಧ ಕಿಡಿ ಕಾರಿದ್ದಾರೆ. ಇದು ಬಿಜೆಪಿಗೆ ಅಸ್ತ್ರವಾಗಿ ಪರಿಣಮಿಸಿದೆ. ಇದರಿಂದ ಕಾಂಗ್ರೆಸ್ ಹೈಕಮಾಂಡ್ ಅಧ್ಯಕ್ಷ ಚುನಾವಣೆಗೆ ಕಠಿಣ ಮಾರ್ಗಸೂಚಿ ಪ್ರಕಟಿಸಿದೆ. ಈ ಮಾರ್ಗಸೂಚಿ ಪ್ರಕಾರ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಹುದ್ದೆ, ಜವಾಬ್ದಾರಿ ಹೊಂದಿದ ನಾಯಕರು ಯಾವುದೇ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಂತಿಲ್ಲ. ಒಂದು ವೇಳೆ ಪ್ರಚಾರ ಮಾಡಬೇಕೆಂದಿದ್ದರೆ, ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲು ಅವಕಾಶವಿದೆ. ಈ ರೀತಿಯ ಹಲವು ಕಟ್ಟು ನಿಟ್ಟಿನ ಮಾರ್ಗಸೂಚಿ ಪ್ರಕಟಿಸಲಾಗಿದೆ. ಇದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಿಮಿಸಿದೆ. ಬಹಿರಂಗವಾಗಿ ಪ್ರಚಾರ ಮಾಡಲಾಗದೆ ಹಲವು ನಾಯಕರು ರಹಸ್ಯ ಪ್ರಚಾರದ ತಂತ್ರ ಅನುಸರಿಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ, ಇನ್ ಚಾರ್ಜ್ ಸೆಕ್ರೆಟರಿ, ಜಂಟಿ ಕಾರ್ಯದರ್ಶಿ, ಪ್ರದೇಶ ಕಮಿಟಿ ಅಧ್ಯಕ್ಷಕರು, ಕಾಂಗ್ರೆಸ್ ಲೆಜಿಸ್ಲೇಟೀವ್ ಪಾರ್ಟಿ , ಪ್ರಮುಖ  ಜವಾಬ್ದಾರಿ ಹೊತ್ತಿರುವ ಪಕ್ಷದ ನಾಯಕರು ಅಭ್ಯರ್ಥಿಗಳ ಪ್ರಚಾರ ಮಾಡುವಂತಿಲ್ಲ. ಒಂದು ವೇಳೆಪ್ರಚಾರ ಮಾಡಬೇಕು ಎಂದಿದ್ದರೆ, ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿ ಪ್ರಚಾರದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. 

ಹವಾಮಾನ ವೈಪರಿತ್ಯ, ಆರೋಗ್ಯ ಸಮಸ್ಯೆ: Sonia Gandhi ಕೊಡಗು ಪ್ರವಾಸ ರದ್ದು, ಮೈಸೂರಿನಲ್ಲೇ ವಾಸ್ತವ್ಯ

ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಈಗಾಗಲೇ ನಾಮಪ ಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಹಿಂದಕ್ಕೆ ಪಡೆಯಲು ಅ.8ರವರೆಗೆ ಅವಕಾಶ ಇರುತ್ತದೆ. ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಅಂದು ಸಂಜೆ 5 ಗಂಟೆಗೆ ಪ್ರಕಟಿಸಲಾಗುವುದು. ಒಬ್ಬರಿಗಿಂತ ಹೆಚ್ಚು ಅಭ್ಯರ್ಥಿಗಳು ಕಣಕ್ಕೆ ಇಳಿದರೆ ಅ.17ರಂದು ಚುನಾವಣೆ ನಡೆಸಿ, ಅ.19ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಪಕ್ಷದ ಕೇಂದ್ರ ಚುನಾವಣಾ ಅಧಿಕಾರಿ ಮಧುಸೂದನ್‌ ಮಿಸ್ತ್ರಿ ಪ್ರಕಟಿಸಿದ್ದಾರೆ. ಪ್ರದೇಶ ಕಾಂಗ್ರೆಸ್‌ ಸಮಿತಿಗಳ ಒಟ್ಟು 9000 ಜನರಿಗೆ ಅಧ್ಯಕ್ಷ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಇರುತ್ತದೆ. ಅರ್ಹ ಅಭ್ಯರ್ಥಿಗಳಿಗೆ ಸೆ.20ರಿಂದ ಈ ಮತದಾರರ ಪಟ್ಟಿವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುವುದು.

22 ವರ್ಷ ಹಿಂದೆ ನಡೆದಿತ್ತು ‘ಕೈ’ ಅಧ್ಯಕ್ಷ ಚುನಾವಣೆ
ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಗೆ 2000ನೇ ಇಸವ್ಗಿವಿಯಲ್ಲಿ ಸ್ಪರ್ಧೆ ನಡೆದಿತ್ತು. ಇದಾದ ನಂತರ ಅವಿರೋಧ ಆಯ್ಕೆಗಳೇ ನಡೆದಿದ್ದವು. ಈಗ 22 ವರ್ಷ ಬಳಿಕ ಮತ್ತೆ ಚುನಾವಣಾ ಕಾಲ ಎದುರಾಗಿದೆ. 2000ನೇ ಇಸವಿಯಲ್ಲಿ ಸೋನಿಯಾ ಗಾಂಧಿ ಹಾಗೂ ಉತ್ತರ ಪ್ರದೇಶದ ಹಿರಿಯ ನಾಯಕ ಜಿತೇಂದ್ರ ಪ್ರಸಾದ ಸ್ಪರ್ಧಿಸಿದ್ದರು. ಅರ್ಹ 7,542 ಮತಗಳ ಪೈಕಿ ಜಿತೇಂದ್ರ ಪ್ರಸಾದ ಕೇವಲ 94 ಮತ ಪಡೆದರೆ ಸೋನಿಯಾ 7,448 ಮತ (ಶೇ.98.75ರಷ್ಟು) ಪಡೆದು ಜಯಶೀಲರಾಗಿದ್ದರು.

 

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ: ಪಕ್ಷ ಬಲಪಡಿಸಲು ಸ್ಪರ್ಧಿಸಿದ್ದೇನೆ, ಮಲ್ಲಿಕಾರ್ಜುನ ಖರ್ಗೆ

‘ಪಕ್ಷ ಸುಧಾರಣೆ ಬಗ್ಗೆ ಏನೇ ಕ್ರಮ ಕೈಗೊಳ್ಳಬೇಕಾದರೂ ಪಕ್ಷದ ಅಧ್ಯಕ್ಷೀಯ ಚುನಾವಣೆ ನಂತರ ಎಲ್ಲರ ಜತೆ ಚರ್ಚಿಸಿ ಕೈಗೊಳ್ಳಲಾಗುವುದು. ಒಬ್ಬನೇ ವ್ಯಕ್ತಿ ಯಾವ ನಿರ್ಧಾರಗಳನ್ನೂ ಕೈಗೊಳ್ಳುವುದಿಲ್ಲ. ಪಕ್ಷ ಬಲಪಡಿಸಲೆಂದೇ ನಾನು ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಿದ್ದೇನೆ’ ಎಂದು ಕಾಂಗ್ರೆಸ್‌ ಅಧ್ಯಕ್ಷೀಯ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Follow Us:
Download App:
  • android
  • ios