ಕಾಂಗ್ರೆಸ್ಗೆ ಪಕ್ಷದ ಅಧ್ಯಕ್ಷರೇ ಸುಪ್ರೀಂ: ಸಿದ್ದರಾಮಯ್ಯ ಬಣಕ್ಕೆ ಪರಂ ಟಾಂಗ್
* ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಬಗ್ಗೆ ಚರ್ಚೆ ವಿಚಾರ
* ಡಿಕೆ ಶಿವಕುಮಾರ್ ಪರ ಡಾ.ಜಿ.ಪರಮೇಶ್ವರ್ ಬ್ಯಾಟಿಂಗ್
*ಕಾಂಗ್ರೆಸ್ಗೆ ಪಕ್ಷದ ಅಧ್ಯಕ್ಷರೇ ಸುಪ್ರೀಂ ಎಂದ ಪರಂ
ತುಮಕೂರು, (ಜೂನ್.21): ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರ ತಾರಕಕ್ಕೇರಿದೆ. ಕೆಲ ಶಾಸಕರು ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಬಹಿರಂಗ ಹೇಳಿಕೆಗೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಶಾಸಕ ಜಮೀರ್ ಅಹಮ್ಮದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ಗೆ ಪಕ್ಷದ ಅಧ್ಯಕ್ಷರೇ ಸುಪ್ರೀಂ . ಅದು ಜಮೀರ್ ಅವರ ವೈಯಕ್ತಿಕ ಅಭಿಪ್ರಾಯ ಎಂದು ಸಿದ್ದರಾಮಯ್ಯರೇ ಹೇಳಿದ್ದಾರೆ. ನಮ್ಮ ಜೊತೆ ಫಾಲೋವರ್ಸ್ ಇರ್ತಾರೆ, ಅವರಿಗೆ ಆಸೆಗಳಿರುತ್ತವೆ. ನಮ್ಮ ನಾಯಕರು ಹೀಗ್ ಆಗ್ಬೇಕು ಎಂಬ ಆಸೆ ಇರುತ್ತೆ. ಸಿದ್ದರಾಮಯ್ಯ ಜೊತೆ ಇರುವ ಜಮೀರ್ಗೆ ಅವರು ಸಿಎಂ ಆಗ್ಬೇಕು ಎಂಬ ಆಸೆ ಇದೆ ಎಂದರು.
ಸಿದ್ದು ಮುಂದಿನ ಸಿಎಂ ವಿವಾದ: ನಾಯಕರಿಗೆ ಹೈಕಮಾಂಡ್ ಖಡಕ್ ಎಚ್ಚರಿಕೆ ರವಾನೆ
ಕೆಲವೊಮ್ಮೆ ನಾನೂ ಸಿಎಂ ಆಗ್ಬೇಕು ಎಂಬುದು ಆಸೆ ನಮ್ಮ ಬೆಂಬಲಿಗರದ್ದಾಗಿರುತ್ತೆ. ಆದರೆ ಈ ಬಾರಿ ಪಕ್ಷವನ್ನ ಅಧಿಕಾರಕ್ಕೆ ತರುವಂತದ್ದನ್ನ ಪ್ರತಿಯೊಬ್ಬರೂ ಮಾಡಬೇಕು. ಅದು ನಮ್ಮ ಜವಾಬ್ದಾರಿ. ಬಿಜೆಪಿಯವರು ಕೆಟ್ಟ ಆಡಳಿತವನ್ನ ಕೊಟ್ಟಿದ್ದಾರೆ. ಹಾಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು. ನಮ್ಮಲ್ಲಿ ಪಕ್ಷದ ವ್ಯವಹಾರ ಬಂದಾಗ ಕಾಂಗ್ರೆಸ್ನ ರಾಜ್ಯಾಧ್ಯಕ್ಷರೇ ಸುಪ್ರೀಂ ಎಂದು ಸ್ಪಷ್ಟನೆ ನೀಡಿದರು.
ಯಾರೇ ಅಧ್ಯಕ್ಷರಿದ್ರೂ ಕಾಂಗ್ರೆಸ್ ಪಕ್ಷದ ಎಲ್ಲಾ ವ್ಯವಹಾರಗಳಿಗೆ ಅವರೇ ಸುಪ್ರೀಂ. ಡಿ.ಕೆ.ಶಿವಕುಮಾರ್ಗೆ ಹೈಕಮಾಂಡ್ ಅಧಿಕಾರ ಕೊಟ್ಟಿದೆ. ಡಿ.ಕೆ.ಶಿವಕುಮಾರ್ ಹೇಗೆ ಹೇಳುತ್ತಾರೋ ಹಾಗೆ ಕೇಳಲೇಬೇಕು. ಜಮೀರ್ ಮೇಲೆ ಶಿಸ್ತು ಕ್ರಮಕೈಗೊಳ್ಳೋವರೆಗೂ ಬಂದಿಲ್ಲ. ನಮ್ಮಲ್ಲಿ ಬಣ ರಾಜಕೀಯ ಇಲ್ಲ. ಆ ರೀತಿ ಏನಾದ್ರೂ ಇದ್ದರೆ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಸರಿಪಡಿಸುತ್ತಾರೆ ಎಂದು ತಿಳಿಸಿದರು.