ಮಾಜಿ ಮುಖ್ಯಮಂತ್ರಿ ಪುತ್ರನಿಗೆ ಕೊರೋನಾ ಸೋಂಕು ತಗುಲಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚಂಡೀಗಢ, (ಸೆ.06): ಕಾಂಗ್ರೆಸ್ ಸಂಸದ ದೀಪೆಂದರ್ ಹೂಡಾ ಅವರಿಗೆ ಭಾನುವಾರ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ದೀಪೆಂದರ್ ಹೂಡಾ ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಪುತ್ರ.

42 ವರ್ಷದ ದೀಪೆಂದರ್ ಅವರು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ಪುತ್ರರಾಗಿದ್ದು, ಅವರು ರಾಜ್ಯದ ಏಕೈಕ ವಿರೋಧ ಪಕ್ಷದ ಸಂಸದರಾಗಿದ್ದಾರೆ ಮತ್ತು ಪ್ರಸ್ತುತ ದೆಹಲಿಯಲ್ಲಿದ್ದಾರೆ.

ಮಾಜಿ ಶಾಸಕರ ಪುತ್ರ ಕೊರೋನಾ ಸೋಂಕಿಗೆ ಬಲಿ

ನನಗೆ ಕೊವಿಡ್ -19 ಪಾಸಿಟಿವ್ ಬಂದಿದ್ದು, ನನ್ನ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆಗೆ ಒಳಪಡುವಂತೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

Scroll to load tweet…

ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದು, ಇತರ ಟೆಸ್ಟ್ ಗಳನ್ನು ನಡೆಸಲಾಯಿತು. ನಿಮ್ಮೆಲ್ಲರ ಪ್ರಾರ್ಥನೆಯೊಂದಿಗೆ ನಾನು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.