ಹಲವು ದಿನಗಳಿಂದ ಪ್ರಯತ್ನಿಸುತ್ತಿದ್ದರೂ ಬಿಜೆಪಿ ಹೈಕಮಾಂಡ್ ನಾಯಕರು ಬಿಜೆಪಿ ರಾಜ್ಯ ನಾಯಕರನ್ನು ಭೇಟಿ ಮಾಡಲು ಒಪ್ಪಿಲ್ಲ. ಇದೀಗ ಜೆಡಿಎಸ್ ನಾಯಕರನ್ನು ಭೇಟಿಯಾಗಿದ್ದು ಎ-ಟೀಮ್‌ಗಿಂತ ಬಿ- ಟೀಮ್ ಮೇಲೆಯೇ ಪ್ರೀತಿ ಜಾಸ್ತಿಯೇ?" ಎಂದು ಪ್ರಶ್ನಿಸಿದ ಕಾಂಗ್ರೆಸ್
ಬೆಂಗಳೂರು(ಸೆ.22): ರಾಜ್ಯ ಬಿಜೆಪಿ ನಾಯಕರನ್ನೇ ಭೇಟಿ ಮಾಡಲು ಒಪ್ಪದ ಬಿಜೆಪಿ ಹೈಕಮಾಂಡ್ ನಾಯಕರು ಜೆಡಿಎಸ್ ನಾಯಕರನ್ನು ನಿರಾಯಾಸವಾಗಿ ಭೇಟಿಯಾಗುತ್ತಾರೆ. ರಾಜ್ಯ ಬಿಜೆಪಿ ನಾಯಕರೂ ಎಚ್.ಡಿ. ಕುಮಾರಸ್ವಾಮಿ ಜತೆ ಹೋಗಿದ್ದರೆ ಹೈಕಮಾಂಡ್ ನಾಯಕರ ಭೇಟಿ ಸುಲಭವಾಗುತ್ತಿತ್ತು ಎಂದು ರಾಜ್ಯ ಕಾಂಗ್ರೆಸ್ ಬಿಜೆಪಿ ನಾಯಕರ ಕಾಲೆಳೆದಿದೆ.
ಈ ಬಗ್ಗೆ ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, "ಹಲವು ದಿನಗಳಿಂದ ಪ್ರಯತ್ನಿಸುತ್ತಿದ್ದರೂ ಬಿಜೆಪಿ ಹೈಕಮಾಂಡ್ ನಾಯಕರು ಬಿಜೆಪಿ ರಾಜ್ಯ ನಾಯಕರನ್ನು ಭೇಟಿ ಮಾಡಲು ಒಪ್ಪಿಲ್ಲ. ಇದೀಗ ಜೆಡಿಎಸ್ ನಾಯಕರನ್ನು ಭೇಟಿಯಾಗಿದ್ದು ಎ-ಟೀಮ್‌ಗಿಂತ ಬಿ- ಟೀಮ್ ಮೇಲೆಯೇ ಪ್ರೀತಿ ಜಾಸ್ತಿಯೇ?" ಎಂದು ಪ್ರಶ್ನಿಸಿದೆ.
ಬಿಜೆಪಿ- ಜೆಡಿಎಸ್ ಮೈತ್ರಿಗೆ ಠಕ್ಕರ್ ನೀಡಲು ಸಂಸದ ಡಿಕೆಸು ಮನೆಯಲ್ಲಿ ಸಭೆ
ಇನ್ನು ರಾಜ್ಯ ಬಿಜೆಪಿ ನಾಯಕರು ಕುಮಾರಸ್ವಾಮಿ ಜತೆಗೆ ಹೋಗಿದ್ದರೆ ಹೈಕಮಾಂಡ್ ನಾಯಕರ ಭೇಟಿ ಸುಲಭವಾಗುತ್ತಿತ್ತು. ವಿರೋಧಪಕ್ಷದ ನಾಯಕನ ಆಯ್ಕೆ ಬಗ್ಗೆ ಆಗಲಾದರೂ ಚರ್ಚಿಸಬಹುದಿತ್ತು ಎಂದು ಕಾಲೆಳೆದಿದೆ
ಸೂಲಿಬೆಲೆ, ಸಿ.ಟಿ.ರವಿ ಸುಮ್ಮನಿದ್ದಿದ್ದೇಕೆ:
ಚಕ್ರವರ್ತಿ ಸೂಲಿಬೆಲೆ ಎಂಬ ಕರ್ನಾಟಕದ ಫ್ರಿಂಜ್ ಎಲಿಮೆಂಟ್‌ಗೆ ಆತನೇ ಒಪ್ಪಿಕೊಂಡಂತೆ ಚೈತ್ರಾ ಕುಂದಾಪುರ ಅವರ ಟಿಕೆಟ್ ವಂಚನೆ ಮೊದಲೇ ಗೊತ್ತಿತ್ತಂತೆ. ಜತೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೂ ತಿಳಿದಿತ್ತಂತೆ. ಬಿಜೆಪಿ ಹೆಸರಿನಲ್ಲಿ ಮಹಾ ವಂಚನೆ ನಡೆದಿದ್ದರೂ, ಹಣದ ಅಕ್ರಮ ವರ್ಗಾವಣೆ ನಡೆದಿದ್ದರೂ ಈ ಮಹಾ ಸುಭಗಧ್ವಯರು ಸುಮ್ಮನಿದ್ದಿದ್ದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಈ ಚೈನ್ ಚೈತ್ರ ನಮಗೆ ತಿಳಿದೇ ಇಲ್ಲ ಎನ್ನುತ್ತಿರುವ ಬಿಜೆಪಿಗರು ಹಿಂದುತ್ವದ ಹೆಸರಿನಲ್ಲಿ ಯಾರನ್ನು ಬೇಕಾದರೂ ಬಳಸಿಕೊಂಡು ಬೀದಿಗೆ ತಳ್ಳುತ್ತಾರೆ ಎಂದು ಟೀಕಿಸಿದೆ.
