Asianet Suvarna News Asianet Suvarna News

ಸೋಲುವ ಸಂದರ್ಭದಲ್ಲೇ ಕಾಂಗ್ರೆಸ್‌ಗೆ ದಲಿತರ ನೆನಪು: ಕೆ.ಎಸ್‌.ಈಶ್ವರಪ್ಪ

ಸೋಲುವ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ದಲಿತರ ನೆನಪಾಗುತ್ತದೆ. ದಲಿತರನ್ನು ಸೋಲುವ ಸಂದರ್ಭದಲ್ಲಿ ಮುಂಚೂಣಿಗೆ ತರುವುದು ಕಾಂಗ್ರೆಸ್‌ ಸಂಸ್ಕೃತಿ. ಅದೇ ರೀತಿ ಈಗ ಕಾಂಗ್ರೆಸ್‌ ಅಥವಾ ಐಎಲ್‌ಡಿಐಎ ಅಧಿಕಾರಕ್ಕೆ ಬರುವುದಿಲ್ಲ.

Congress remembers Dalits even when it loses Says KS Eshwarappa gvd
Author
First Published Dec 22, 2023, 11:35 AM IST

ಗದಗ (ಡಿ.22): ಸೋಲುವ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ದಲಿತರ ನೆನಪಾಗುತ್ತದೆ. ದಲಿತರನ್ನು ಸೋಲುವ ಸಂದರ್ಭದಲ್ಲಿ ಮುಂಚೂಣಿಗೆ ತರುವುದು ಕಾಂಗ್ರೆಸ್‌ ಸಂಸ್ಕೃತಿ. ಅದೇ ರೀತಿ ಈಗ ಕಾಂಗ್ರೆಸ್‌ ಅಥವಾ ಐಎಲ್‌ಡಿಐಎ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ನಿಚ್ಚಳವಾಗಿದ್ದರೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲು ಮುಂದಾಗಿದೆ ಎಂದು ಬಿಜೆಪಿ ನಾಯಕ, ಮಾಜಿ ಉಪ ಮುಖ್ಯಮತಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಹಿರಿಯ ರಾಜಕಾರಣಿಗಳ ಬಗ್ಗೆ ಟೀಕೆ ಮಾಡುವುದಿಲ್ಲ. 

ಆದರೆ ಕಾಂಗ್ರೆಸ್‌ ಅವರನ್ನು ಸೋಲಿಸುವುದಕ್ಕೆಂದೇ ಚುನಾವಣೆಗೆ ನಿಲ್ಲಿಸುತ್ತಿದ್ದಾರೆ. ದೇಶದಲ್ಲಿ ದಲಿತರಿಗೆ, ಹಿಂದುಳಿದವರಿಗೆ ಕಾಂಗ್ರೆಸ್ ಇದೇ ರೀತಿ ಮೋಸ ಮಾಡಿಕೊಂಡೇ ಬಂದಿದೆ. ಅವರನ್ನು ನಂಬಿಸಿ, ನಂಬಿಸಿ ಮೋಸ ಮಾಡಿ ಕಾಂಗ್ರೆಸ್ ಇಷ್ಟು ವರ್ಷ ದೇಶದಲ್ಲಿ ಆಡಳಿತ ನಡೆಸಿತು. ಈಗ ಮತ್ತೋಬ್ಬ ದಲಿತರಿಗೆ ಮೋಸ ಮಾಡುತ್ತಿದೆ. ಇದರಲ್ಲಿ ಏನೂ ಅನುಮಾನ ಬೇಡ ಎಂದರು. ಪ್ರಿಯಾಂಕ್ ಖರ್ಗೆ ಧರ್ಮ ದ್ರೋಹಿ. ಅವನ ಬಗ್ಗೆ ಬಹಳ ಬೇಸರವಾಗುತ್ತದೆ. ಆದರೆ ಮಲ್ಲಿಕಾರ್ಜನ ಖರ್ಗೆ ಬಗ್ಗೆ ಗೌರವವಿದೆ. ಅಂತಹವರೆಗೆ ಪ್ರಧಾನ ಮಂತ್ರಿ ಅಭ್ಯರ್ಥಿ ಮಾಡುತ್ತೇವೆ ಎಂದು ಯಾಕೆ ಮೋಸ ಮಾಡುತ್ತೀರಾ ಎಂದರು.

1 ಲಕ್ಷ ನೀಡಿದರೆ ಸ್ಲಂ ವಾಸಿಗಳಿಗೆ ಮನೆ: ಸಚಿವ ಜಮೀರ್‌ ಅಹಮದ್‌ ಖಾನ್‌

ಗ್ಯಾರಂಟಿ ಯೋಜನೆಗಳ ಜಾರಿ, ತೀವ್ರ ಬರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಕಾಂಗ್ರೆಸ್‌ ರಾಜಕೀಯ ಮಾಡುವುದನ್ನು ಬಿಟ್ಟು ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಆಗ್ರಹಿಸಿದರು. ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಪರಿಹಾರದ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಗೂಬೆಕೂರಿಸುವ ಕೆಲಸ ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ. ರಾಜ್ಯದಲ್ಲಿ ಆವರಿಸಿರುವ ತೀವ್ರ ಬರದ ಸಮಗ್ರ ಅಧ್ಯಯನ ನಡೆಸಿಲ್ಲ. ಸಚಿವರು, ಜಿಲ್ಲಾ ಉಸ್ತುವಾರಿಗಳು ಹಾಗೂ ಶಾಸಕರು ರೈತರ ಸಮಸ್ಯೆಗಳನ್ನು ಅರಿತುಕೊಳ್ಳುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. 

ಬರ ನಿರ್ವಹಣೆಗೆ ಅಗತ್ಯವಾದ ಅನುದಾನ ಜಿಲ್ಲಾಡಳಿತಗಳ ಬಳಿ ಇಲ್ಲದಂತಾಗಿದೆ. ಇರುವ ಅಲ್ಪ ಮೊತ್ತದಿಂದ ಕುಡಿಯುವ ನೀರು, ರೈತರಿಗೆ ಕಾಮಗಾರಿ, ಜಾನುವಾರುಗಳಿಗೆ ಮೇವು ಸಂಗ್ರಹ ಸಾಧ್ಯವಾಗಲಿದ್ದು, ಬರ ಪರಿಹಾರಕ್ಕೆ ಹಣವೇ ಇಲ್ಲದಂತಾಗಿದೆ ಎಂದರು. ಆಡಳಿತಕ್ಕೆ ಬಂದು ಆರು ತಿಂಗಳು ಗತಿಸುತ್ತಿದ್ದರು ಶಾಸಕರಿಗೆ ಸರಿಯಾದ ರೀತಿಯಲ್ಲಿ ಅನುದಾನ ಹಂಚಿಕೆ ಮಾಡಿಲ್ಲ, ಶಾಸಕರ ವಿವೇಚನಾ ನಿಧಿಗೆ 2 ಕೋಟಿ ರು. ನೀಡಬೇಕು ಆದರೆ ಕೇವಲ 50 ಲಕ್ಷ ರು. ನೀಡಲು ಸರ್ಕಾರ ಮುಂದಾಗಿದೆ. 

ಕಾಂಗ್ರೆಸ್‌ ಕೊಟ್ಟ ಗ್ಯಾರಂಟಿಗಳಿಗೆ ಅನುದಾನ ಹೊಂದಿಸುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಯೋಜನೆ ಲಾಭವು ಸಹ ತಲುಪುತ್ತಿಲ್ಲ, ಬರೀ ಘೋಷಣೆಗಳನ್ನು ಮಾಡಿದರೆ ಸಾಲದು ಅದನ್ನು ಜಾರಿಗೊಳಬೇಕು, ಜನಸಾಮಾನ್ಯರ ನಿರೀಕ್ಷೆಗಳಿಗೆ ತಕ್ಕಂತೆ ಸರ್ಕಾರವು ಆಡಳಿತ ನಡೆಸಬೇಕು ಎಂದು ಒತ್ತಾಯಿಸಿದರು. ಕೊರೋನಾ ಮತ್ತೆ ಆರಂಭಗೊಂಡಿದ್ದು ಯಾವ ರೀತಿಯ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು, ಬರ ನಿರ್ವಹಣೆ ಹೇಗ ಮಾಡಬೇಕು ಮತ್ತು ಕೇಂದ್ರದಿಂದ ಆರ್ಥಿಕ ನೆರವಿನ ಅಗತ್ಯ ಸೇರಿ ಇತರೆ ಅಂಶಗಳ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಕೂಡಲೇ ಸರ್ವ ಪಕ್ಷಗಳ ಸಭೆಯನ್ನು ಕರೆದು ಚರ್ಚಿಸಬೇಕು ಎಂದು ಆಗ್ರಹಿಸಿದರು.

ಎಚ್.ಡಿ.ಕುಮಾರಸ್ವಾಮಿ ಮೈತ್ರಿಧರ್ಮ ಪಾಲಕರು: ಸಚಿವ ಚಲುವರಾಯಸ್ವಾಮಿ

ಜಾತಿ ಜನಗಣತಿ ವಿಚಾರವಾಗಿ ಉಂಟಾಗಿರುವ ಗೊಂದಲಕ್ಕೆ ಸಿಎಂ ಸಿದ್ದರಾಮಯ್ಯ ಅವರೇ ಕಾರಣಿಭೂತರಾಗಿದ್ದಾರೆ. ಹಿಂದೆ ಅವರೇ ಸಿಎಂ ಆಗಿದ್ದಾಗಲು ವರದಿಯನ್ನು ಅಂಗೀಕರಿಸಲು ಹಿಂದೇಟು ಹಾಕಿದ್ದರು. ಇದೀಗ ಜಾತಿ ಗಣತಿಗೆ ವೀರಶೈವರು, ಲಿಂಗಾಯತರು ಹಾಗೂ ಒಕ್ಕಲಿಗರು ವಿರೋಧ ವ್ಯಕ್ತಪಡಿಸುತಿದ್ದಾರೆ. ಕಾಂಗ್ರೆಸ್‌ ಮಾಡಿದ ಕಿತಾಪತಿಯಿಂದಾಗಿಯೇ ಸ್ವಾಮೀಗಳನ್ನು ಜಾತಿಯಡಿ ಕಾಣುವ ದುಸ್ಥಿತಿ ನಿರ್ಮಾಣಗೊಂಡಿದೆ. ಜಾತಿ ಗಣತಿ ವಿಷಯವಾಗಿ ಎಲ್ಲ ಜಾತಿಗಳ ಸ್ವಾಮಿಗಳು ಇಂದು ಎದ್ದು ಕುಂತಿದ್ದಾರೆ. ಸರ್ಕಾರದ ಶಾಸಕರು ರಾಜೀನಾಮೆ ಕೊಟ್ಟು ಹೊರಗಡೆ ಬಂದು ಹೋರಾಟ ನಡೆಸಲಿ. ಕಾಂತರಾಜ್‌ ವರದಿ ಸೋರಿಕೆಯಾಗಿದೆಯೋ ಇಲ್ಲವೋ ಎಂಬುವುದನ್ನು ಸರ್ಕಾರವೇ ಸ್ಪಷ್ಟಡಿಸಬೇಕು. ಸಿದ್ದರಾಮಯ್ಯ ಸಿಎಂ ಆಗಿರುವ ತನಕ ಕಾಂತರಾಜ್‌ ವರದಿ ಜಾರಿಗೆ ಬರುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Follow Us:
Download App:
  • android
  • ios