ಜೆಡಿಎಸ್‌ ಸೇರುವ ಒಲವು ತೋರಿದ್ರಾ ಕಾಂಗ್ರೆಸ್ ಹಿರಿಯ ನಾಯಕ? ತೋಟದ ಮನೆಯಲ್ಲಿ ಮಹತ್ವದ ಚರ್ಚೆ

* ಜೆಡಿಎಸ್‌ ಸೇರುವ ಒಲವು ತೋರಿದ್ರಾ ಕಾಂಗ್ರೆಸ್ ಹಿರಿಯ ನಾಯಕ
* ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಇಬ್ರಾಹಿಂ
* ಕುತೂಹಲಕ್ಕೆ ಕಾರಣವಾದ ಉಭಯ ನಾಯಕರ ಭೇಟಿ

Congress Senior Leader CM Ibrahim Meets JDS HD Kumaraswamy rbj

ಬೆಂಗಳೂರು, (ಸೆ.22): 2023ರ ವಿಧಾನಸಭೆ ಚುನಾವಣೆ ಕಾಂಗ್ರೆಸ್ (Congress) ಸಿದ್ಧತೆ ನಡೆಸಿದ್ದು, ಹಲವು ಜೆಡಿಎಸ್ ಹಾಗೂ ಬಿಜೆಪಿ ನಾಯಕರಿಗೆ ಗಾಳ ಹಾಕಿದೆ. ಆದ್ರೆ, ಇದರ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಪಕ್ಷದಿಂದ ಅಂತರ ಕಾಯ್ದುಕೊಂಡು ಜೆಡಿಎಸ್‌ಗೆ ಹತ್ತಿರವಾಗುತ್ತಿದ್ದಾರೆ.

ಹೌದು....ಕಾಂಗ್ರೆಸ್ ಹಿರಿಯ ನಾಯಕ ಸಿ.ಎಂ. ಇಬ್ರಾಹಿಂ (CM Ibrahim) ಅವರು ಯಾಕೋ ತಮ್ಮ ನಡೆ ಬದಲಿಸುವಂತೆ ಕಾಣಿಸುತ್ತಿದೆ. ಇದಕ್ಕೆ ಪೂರಕವೆಂಬಂತೆ ಇಬ್ರಾಹಿಂ ಹಾಗೂ ಎಚ್‌ಡಿ ಕುಮಾರಸ್ವಾಮಿ ನಡುವಿನ ರಾಜಕೀಯ ಒಡನಾಟ ಹೆಚ್ಚಾಗುತ್ತಿದೆ.

ಕುಮಾರಸ್ವಾಮಿ ಕೈಬಲಪಡಿಸಬೇಕಿದೆ: ಜೆಡಿಎಸ್‌ ಸೇರುವ ಮುನ್ಸೂಚನೆ ಕೊಟ್ರಾ ಕಾಂಗ್ರೆಸ್ ಹಿರಿಯ ನಾಯಕ

ನಿನ್ನೆ (ಸೆ.21 ಶಿವಮೊಗ್ಗದ ಭದ್ರಾವತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ (HD Kumaraswamy) ಜತೆ ವೇದಿಕೆ ಹಂಚಿಕೊಂಡಿದ್ದ ಇಬ್ರಾಹಿಂ, ಇಂದು (ಸೆ.22) ಬಿಡದಿಯ ತೋಟದ ಮನೆಯಲ್ಲಿ ಕುಮಾರಸ್ವಾಮಿಯನ್ಜು ಭೇಟಿ ಮಾಡಿ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.
Congress Senior Leader CM Ibrahim Meets JDS HD Kumaraswamy rbj

ಈ ಹಿಂದೆ ಕಾಂಗ್ರೆಸ್ ಬಿಟ್ಟು ಜೆಡಿಎಸ್ ನತ್ತ ಒಲವು ತೋರಿದ್ದ ಇಬ್ರಾಹಿಂ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ (HD Devegowda) ಹಾಗೂ ಕುಮಾರಸ್ವಾಮಿ ಅವರನ್ನು ಭೇಟಿ ಮಾತುಕತೆ ನಡೆಸಿದ್ದರು.  ಜೆಡಿಎಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ಇಬ್ರಾಹಿಂಗೆ ನೀಡುವ ಬಗ್ಗೆ ಚರ್ಚೆ ಆಗಿತ್ತು. ನಂತರ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ದರಾಮಯ್ಯ ಪ್ರತ್ಯೇಕವಾಗಿ ಇಬ್ರಾಹಿಂ ನಿವಾಸಕ್ಕೆ ಹೋಗಿ ಪಕ್ಷ ಬಿಡದಂತೆ ಮನವೊಲಿಸಿದ್ದರು. ಆದರೆ ಇದೀಗ ಮತ್ತೆ ಕುಮಾರಸ್ವಾಮಿ ಭೇಟಿ ಮಾಡಿರುವ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಅಲ್ಲದೇ ಕರ್ನಾಟಕದಲ್ಲಿ ಕುಮಾರಸ್ವಾಮಿ ಕೈ ಬಲಪಡಿಸಬೇಕಿದೆ. ಇಂದಿನಿಂದ ಶುಭಕಾಲ ಆರಂಭವಾಗಿದೆ ಎಂದು ಇದೇ ಇಬ್ರಾಹಿಂ,  ಭದ್ರಾವತಿ ತಾಲ್ಲೂಕು ಗೋಣಿಬೀಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹಿರಂಗವಾಗಿಯೇ ಹೇಳಿದ್ದನ್ನ ಇಲ್ಲಿ ಸ್ಮರಿಸಬಹುದು.

ಒಟ್ಟಿನಲ್ಲಿ ಸಿ.ಎಂ. ಇಬ್ರಾಹಿಂ ಅವರ ಇತ್ತೀಚೆಗಿನ ನಡೆ ಗಮನಿಸಿದರೆ ಕಾಂಗ್ರೆಸ್ ತೊರೆದು ಜೆಡಿಎಸ್‌ (JDS) ಸೇರ್ಪಡೆಯಾಗಿವ ಎಲ್ಲಾ ಸಾಧ್ಯತೆಗಳಿವೆ. 

Latest Videos
Follow Us:
Download App:
  • android
  • ios