ರಾಹುಲ್ ಗಾಂಧಿ ಅನರ್ಹತೆ: ಫ್ರೀಡಂಪಾರ್ಕ್‌ನಲ್ಲಿ ಕಾಂಗ್ರೆಸ್ ಮೌನ ಪ್ರತಿಭಟನೆ
ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಮಾಡುವ ಮೂಲಕ ಕೇಂದ್ರ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ ನಡೆಸುತ್ತಿದೆ.
ಬೆಂಗಳೂರು (ಜು.12): ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಮಾಡುವ ಮೂಲಕ ಕೇಂದ್ರ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ ನಡೆಸುತ್ತಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಭಾಗಿಯಾಗಿದ್ದಾರೆ. ಬಾಯಿಗೆ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಮಾತುಗಳು ಹೆಚ್ಚಾದಂತೆ ಸಚಿವ ರಾಮಲಿಂಗಾರೆಡ್ಡಿ ಇದು ಮೌನ ಪ್ರತಿಭಟನೆ ಸೈಲೆಂಟ್ ಆಗಿರಿ ಎಂದು ಸೂಚನೆ ನೀಡಿದ್ದಾರೆ.
ಬಳಿಕ ಡಿ.ಕೆ ಶಿವಕುಮಾರ್ ಸಹ ಕಾರ್ಯಕರ್ತರಿಗೆ ನಿಮ್ಮ ಮಾತು ವಿಧಾನಸೌಧಕ್ಕೆ ಕೇಳಿಸುತ್ತಿದೆ. ತಾಳ್ಮೆಯಿಂದ ನಿಮ್ಮ ಕುರ್ಚಿಯಲ್ಲಿ ಕುಳಿತುಕೊಳ್ಳಿ. ಮಾತಾನಾಡುವುದು ನಿಲ್ಲಿಸಬೇಕು. ಎಷ್ಟೇ ದೊಡ್ಡವರು ಆದರೂ ಕುಳಿತುಕೊಳ್ಳಬೇಕು. ಕುಳಿತುಕೊಳ್ಳಲು ಆಗಲಿಲ್ಲ ಅಂದರೆ ಮನೆಗೆ ಹೋಗಿ ಎಂದು ಡಿಕೆಶಿ ಖಡಕ್ ಸೂಚನೆ ಕೊಟ್ಟಿದ್ದಾರೆ. ಇನ್ನು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾ ಸ್ಥಳದಿಂದಲೇ ಕಡತಗಳಿಗೆ ಡಿ.ಕೆ ಶಿವಕುಮಾರ್ ಸಹಿ ಹಾಕಿದ್ದಾರೆ. ಅಲ್ಲದೆ ಸಭಾಧ್ಯಕ್ಷ ಹಾಗೂ ಸಭಾಪತಿಗೆ ಅನುಮತಿ ಪತ್ರವನ್ನು ಕಳಿಸಿದ್ದಾರೆ. ಇಂದು ದಿನ ಪೂರ್ತಿ ಪ್ರತಿಭಟನೆಯಲ್ಲಿ ಭಾಗಿಯಾಗಿರುತ್ತೇನೆ. ಹಾಗಾಗಿ ಇಂದು ಸದನದಲ್ಲಿ ನನ್ನ ಇಲಾಖೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ನಾಳೆ ಉತ್ತರ ನೀಡುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖವಾಗಿದೆ. ಸದ್ಯ ಸಭಾಧ್ಯಕ್ಷ, ಸಭಾಪತಿಗಳಿಗೆ ಕಳಿಸುವ ಪತ್ರದ ಜೊತೆಗೆ ವಿವಿಧ ಕಡತಗಳಿಗೆ ಡಿಕೆಶಿ ಸಹಿ ಹಾಕಿದ್ದಾರೆ.
ಕಾನೂನು, ಸುವ್ಯವಸ್ಥೆ ಹದಗೆಡಲು ಯಾವ ಕಾರಣಕ್ಕೂ ಬಿಡಲ್ಲ: ಸಿದ್ದರಾಮಯ್ಯ
ಏತ ನೀರಾವರಿ ವಿದ್ಯುತ್ ಬಿಲ್ ಕಟ್ಟಲು ಕೆರೆಗಳಲ್ಲಿ ಮೀನುಗಾರಿಕೆ?: ಏತ ನೀರಾವರಿ ಸೇರಿದಂತೆ ಕುಡಿಯುವ ನೀರಿನ ಯೋಜನೆಗಳ ವಿದ್ಯುತ್ ಬಿಲ್ ಬಾಕಿ ಪಾವತಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೆರೆಗಳಲ್ಲಿ ಮೀನುಗಾರಿಕೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಪ್ರಶ್ನೋತ್ತರ ವೇಳೆ ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ್‌ಗೌಡ ಅವರು, ಹೆಬ್ಬೂರು ಹಾಗೂ ಗೂಳೂರು ಏತ ನೀರಾವರಿ ಯೋಜನೆ 10 ಗರ್ಷಗಳ ಹಿಂದೆ ಆರಂಭಗೊಂಡಿದೆ. 4 ಬಹುಗ್ರಾಮ ಕುಡಿಯುವ ನೀರಿನ ಈ ಯೋಜನೆ ಸ್ಥಗಿತವಾಗಿಲ್ಲ. ಆದರೆ, ಗ್ರಾಮಗಳಿಗೆ ನೀರು ಬರುತ್ತಿಲ್ಲ ಎಂದು ಗಮನ ಸೆಳೆದರು. ಈ ವೇಳೆ ಸಚಿವ ಡಿ.ಕೆ. ಶಿವಕುಮಾರ್, ಎಲ್ಲಾ ಶಾಸಕರು ಏತ ನೀರಾವರಿ ಯೋಜನೆಗಳಿಗಾಗಿಯೇ ಬೇಡಿಕೆ ಸಲ್ಲಿಸುತ್ತಾರೆ.
ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ: ಕೊನೆಗೂ ಪ್ರತಿಭಟನೆ ಹಿಂಪಡೆದ ಬಿಜೆಪಿ ಸದಸ್ಯರು
ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ 6 ಕೋಟಿ ರು. ವಿದ್ಯುತ್ ಬಿಲ್ ಬಾಕಿ ಇದೆ. ನೀರಾವರಿ ಇಲಾಖೆಯಿಂದ ಇದೇ ರೀತಿ ನಾಲ್ಕು ಸಾವಿರ ಕೋಟಿ ರು.ಗಳನ್ನು ಇಂಧನ ಇಲಾಖೆಗೆ ಪಾವತಿಸಬೇಕು. ನೀರಾವರಿ ಇಲಾಖೆ ಆರಂಭದಲ್ಲಿ ಒಂದೆರಡು ವರ್ಷ ವಿದ್ಯುತ್ ಬಿಲ್ ಅನ್ನು ಪಾವತಿಸಬಹುದು. ಕೆರೆ ತುಂಬಿಸಿದ ತಕ್ಷಣ ಸ್ಥಳೀಯ ಪಂಚಾಯಿತಿ ಅಥವಾ ಸಂಸ್ಥೆಗಳು ತೆರಿಗೆ ಸಂಗ್ರಹ ಮಾಡಿ ಬಿಲ್ ಪಾವತಿಸುವ ವ್ಯವಸ್ಥೆ ಇಲ್ಲ. ಇದಕ್ಕೆ ಶಾಶ್ವತ ಪರಿಹಾರ ಕೈಗೊಳ್ಳಲು ಎಲ್ಲಾ ಕೆರೆಗಳಲ್ಲೂ ಮೀನುಗಾರಿಕೆ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಮೀನು ಫಸಲನ್ನು ಹರಾಜು ಹಾಕಿ ಅದರಿಂದ ಬರುವ ಆದಾಯದಲ್ಲಿ ವಿದ್ಯುತ್ ಶುಲ್ಕ ಪಾವತಿಸುವ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ಪ್ರಸ್ತಾವನೆ ಇಡಲಾಗುವುದು. ಈ ಬಗ್ಗೆ ಇಂಧನ ಹಾಗೂ ಮೀನುಗಾರಿಕೆ ಸಚಿವರೊಂದಿಗೆ ಚರ್ಚಿಸಿದ್ದೇನೆ ಎಂದರು.