ರಾಹುಲ್‌ ಗಾಂಧಿ ಅನರ್ಹತೆ: ಕಾಂಗ್ರೆಸ್‌ ಮೌನ ಪ್ರತಿಭಟನೆ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಅನರ್ಹಗೊಳಿಸಿ ರಾಜಕೀಯ ಜೀವನ ಮುಗಿಸಲು ಕೇಂದ್ರ ಸರ್ಕಾರ ಪಿತೂರಿ ನಡೆಸಿದೆ ಎಂದು ಆರೋಪಿಸಿ ಬುಧವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕಾಂಗ್ರೆಸ್‌ನಿಂದ ಬೃಹತ್‌ ಮೌನ ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

Congress silent protest For Disqualification of Rahul Gandhi gvd

ಬೆಂಗಳೂರು (ಜು.13): ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಅನರ್ಹಗೊಳಿಸಿ ರಾಜಕೀಯ ಜೀವನ ಮುಗಿಸಲು ಕೇಂದ್ರ ಸರ್ಕಾರ ಪಿತೂರಿ ನಡೆಸಿದೆ ಎಂದು ಆರೋಪಿಸಿ ಬುಧವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕಾಂಗ್ರೆಸ್‌ನಿಂದ ಬೃಹತ್‌ ಮೌನ ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ರಾಹುಲ್‌ ಗಾಂಧಿ ಅವರಿಗೆ ಬೆಂಬಲ ಸೂಚಿಸಿ ಮೌನ ಪ್ರತಿಭಟನೆ ನಡೆಸುವಂತೆ ಎಐಸಿಸಿ ನೀಡಿದ್ದ ಸೂಚನೆಯಂತೆ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ಮುಖಂಡರು ವಾಗ್ದಾಳಿ ನಡೆಸಿದರು.

‘ಮೊಳಗಲಿ ಮೊಳಗಲಿ ಸತ್ಯದ ಘರ್ಜನೆ ಮೊಳಗಲಿ, ಕುತಂತ್ರದಿಂದ ಸತ್ಯವನ್ನು ಮುಚ್ಚಿಡಲಾಗದು, ಕುತಂತ್ರಿ ಬಿಜೆಪಿಗೆ ಧಿಕ್ಕಾರ, ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ’ ಮತ್ತಿತರ ಭಿತ್ತಿ ಪತ್ರಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪ್ರತಿಭಟನೆ ನಡೆಸಲಾಯಿತು.

ನೆಹರೂ ಕುಟುಂಬದ ವಿರುದ್ಧ ರಾಷ್ಟ್ರೀಯ ಸ್ವಯಂಸೇವಕ ಸಂಘ, ಬಿಜೆಪಿ ನಿರಂತರವಾಗಿ ಅಪಪ್ರಚಾರ ನಡೆಸುತ್ತಾ ಗದಾಪ್ರಹಾರ ಮಾಡುತ್ತಿವೆ. ಜನಸಾಮಾನ್ಯರು ಬ್ಯಾಂಕ್‌ಗಳಲ್ಲಿ ಠೇವಣಿ ಇಟ್ಟಹಣದಲ್ಲಿ ಸಾಲ ಪಡೆದು ಸಾವಿರಾರು ಕೋಟಿ ರುಪಾಯಿ ವಂಚಿಸಿದ ಉದ್ಯಮಿಗಳ ವಿರುದ್ಧ ರಾಹುಲ್‌ ಗಾಂಧಿ ಧ್ವನಿ ಎತ್ತಿದ್ದಕ್ಕೆ ಅವರನ್ನು ಸಂಸತ್‌ ಸ್ಥಾನದಿಂದ ವಜಾ ಮಾಡಲಾಗಿದೆ. ಆದರೆ ನಾವೆಲ್ಲಾ ರಾಹುಲ್‌ ಬೆಂಬಲಕ್ಕೆ ಇದ್ದೇವೆ ಎಂಬ ಸಂದೇಶವನ್ನು ಪ್ರತಿಭಟನಾಕಾರರು ರವಾನಿಸಿದರು.

ಬಿಬಿಎಂಪಿ ಸಿಬ್ಬಂದಿಯ ವರ್ಗಕ್ಕೂ ಮುನ್ನ ನನಗೆ ತಿಳಿಸಿ: ಡಿಕೆಶಿ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಸಚಿವರಾದ ಕೆ.ಎಚ್‌.ಮುನಿಯಪ್ಪ, ರಾಮಲಿಂಗಾರೆಡ್ಡಿ, ಡಾ.ಜಿ.ಪರಮೇಶ್ವರ್‌, ಡಾ.ಎಚ್‌.ಸಿ.ಮಹದೇವಪ್ಪ, ದಿನೇಶ್‌ ಗುಂಡೂರಾವ್‌, ಈಶ್ವರ ಖಂಡ್ರೆ, ಡಾ.ಎಂ.ಸಿ.ಸುಧಾಕರ್‌, ಬೋಸರಾಜ್‌, ವಿಧಾನ ಪರಿಷತ್‌ ಮುಖ್ಯ ಸಚೇತಕ ಸಲೀಂ ಅಹ್ಮದ್‌, ಸಂಸದ ಡಿ.ಕೆ.ಸುರೇಶ್‌ ಸೇರಿದಂತೆ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, ಪಕ್ಷದ ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Latest Videos
Follow Us:
Download App:
  • android
  • ios